ಏಶ್ಯಾಡ್‌ನ‌ಲ್ಲಿದ್ದರೂ ಕೇರಳ ಸ್ಪರ್ಧಿಗಳಿಗೆ ಕುಟುಂಬದವರದೇ ಚಿಂತೆ…


Team Udayavani, Aug 21, 2018, 6:30 AM IST

asia-20181.jpg

ಜಕಾರ್ತಾ: ಕೇರಳದಲ್ಲಿ ಮಳೆಯ ಅಬ್ಬರಕ್ಕೆ ಜೀವಸಂಕುಲವೇ ನಡುಗಿಹೋಗಿದ್ದು, ಜಕಾರ್ತಾದಲ್ಲಿ ನಡೆಯುತ್ತಿರುವ ಏಶ್ಯನ್‌ ಗೇಮ್ಸ್‌ನಲ್ಲಿ ಭಾಗವಹಿಸುತ್ತಿರುವ ಕೇರಳದ ಕ್ರೀಡಾಪಟುಗಳಲ್ಲಿಯೂ ನಡುಕ ಹುಟ್ಟಿಸಿದೆ. ಆ್ಯತ್ಲೀಟ್‌ಗಳ ಗಮನ ಕ್ರೀಡೆ ಮೇಲಿದ್ದರೂ, ಹೃದಯ ಮಾತ್ರ ಕುಟುಂಬ ಮತ್ತು ಸ್ನೇಹಿತರ ಸೌಖ್ಯಕ್ಕಾಗಿ ಮಿಡಿಯುತ್ತಿದೆ.

ಗೃಹ ಸಚಿವಾಲಯದ ನೆರವಿನಿಂದ ಕ್ರೀಡಾಪಟುಗಳ ಕುಟುಂಬದವರ ಸುರಕ್ಷೆತೆಯ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. “ಕೇರಳ ಆ್ಯತ್ಲೀಟ್‌ಗಳ ಕುಟುಂಬಗಳು ಎಲ್ಲಿವೆ ಎಂಬ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ಯಾವುದೇ ಒತ್ತಡಗಳಿಲ್ಲ ಸ್ಪರ್ಧಿಸಲು ಆ್ಯತ್ಲೀಟ್‌ಗಳಿಗೆ ನಮ್ಮ ಸಹಕಾರ ಬೇಕಾಗಿದೆ. ಇಂತಹ ಸಂದರ್ಭದಲ್ಲಿ  ಅವರ ಮನಸ್ಸು ಹೇಗಿರುತ್ತದೆ ಎಂಬ ಅರಿವಿದೆ. ಸುರಕ್ಷೆತೆಯ ಮಾಹಿತಿಯನ್ನು ನೀಡುತ್ತಿರುತ್ತೇವೆ’ ಎಂದು ಜಕಾರ್ತಾದಲ್ಲಿರುವ ಭಾರತದ ಮುಖ್ಯ ಅಧಿಕಾರಿ, ಬ್ರಿಜ್‌ಭೂಷಣ್‌ ಶರಣ್‌ ಸಿಂಗ್‌ ತಿಳಿಸಿದ್ದಾರೆ.

ಕೇರಳದ 34 ಕ್ರೀಡಾಪಟುಗಳು
ಭಾರತದ ತಂಡದಲ್ಲಿ  ಆ್ಯತ್ಲೆಟಿಕ್ಸ್‌, ವಾಲಿಬಾಲ್‌, ಬಾಸ್ಕೆಟ್‌ಬಾಲ್‌, ಈಜು ಮತ್ತು ಹಾಕಿ ಮುಂತಾದ ಕ್ರೀಡೆಗಳಲ್ಲಿ ಕೇರಳದ ಒಟ್ಟು 34 ಕ್ರೀಡಾಪಟುಗಳಿದ್ದಾರೆ.

“ನನ್ನ ಕುಟುಂಬ ಸುರಕ್ಷಿತ ಸ್ಥಳದಲ್ಲಿದೆ. ಆದರೆ, ಸಂಬಂಧಿಗಳು ಮತ್ತು ಸ್ನೇಹಿತರು ಈ ಭೀಕರ ಪ್ರವಾಹದಲ್ಲಿ ಸಿಲುಕಿದ್ದಾರೆ. ಇದು ಬೇಸರದ ಸಂಗತಿ’ ಎಂದು 400ಮೀ. ಓಟದಲ್ಲಿ ರಾಷ್ಟ್ರೀಯ ದಾಖಲೆ ಹೊಂದಿರುವ ಓಟಗಾರ ಮೊಹಮ್ಮದ್‌ ಅನಾಸ್‌ ಹೇಳಿದ್ದಾರೆ. ಅನಾಸ್‌ ಅವರು ಕೇರಳದ ರಾಜಧಾನಿ ತಿರುವನಂತಪುರಂ ಸಮೀಪದ ನಿಲಾಮೇಲ್‌ ನಗರದವರಾಗಿದ್ದಾರೆ.

“ಕೇರಳದಲ್ಲಿ ಏನಾಗುತ್ತಿದೆ ಎಂಬುದನ್ನು ನನ್ನ ಕಣ್ಣುಗಳಿಂದ ಕಂಡೆ. ಜನರೆಲ್ಲ ಸಾವನ್ನಪ್ಪುತ್ತಿದ್ದಾರೆ. ಮನೆಗಳೆಲ್ಲ ಉರುಳುತ್ತಿವೆ. ಜನರು ರಸ್ತೆಯಲ್ಲಿ ಮತ್ತು ನಿರಾಶ್ರಿತರ ಕೇಂದ್ರಗಳಲ್ಲಿದ್ದಾರೆ. ನನ್ನ ಅಜ್ಜ-ಅಜ್ಜಿ  ಕುಟುಂಬದ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಮಾಹಿತಿ ದೊರಕಿತು. ಸ್ವಲ್ಪ ಸಮಯದ ಅನಂತರ ನನ್ನ ಹೆತ್ತವರು ಕರೆ ಮಾಡಿ, ಅಜ್ಜ-ಅಜ್ಜಿ ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನು ಕೇಳಿ ಮನಸ್ಸಿಗೆ ಸಮಾಧಾನವಾಗಿದೆ. ಇನ್ನು  ಯಾವುದೇ ಗೊಂದಲವಿಲ್ಲದೆ ಆಟದ ಮೇಲೆ ಗಮನಹರಿಸುತ್ತೇನೆ’ ಎಂದು ಲಾಂಗ್‌ಜಂಪರ್‌ ಶ್ರೀಶಂಕರ್‌ ಹೇಳಿದ್ದಾರೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.