ಬಿಸಿಸಿಐ ಸಿಬಂದಿಗೆ ಇನ್ನೂ ವೇತನ ಏರಿಕೆ ಆಗಿಲ್ಲ
Team Udayavani, Aug 28, 2018, 3:01 PM IST
ಹೊಸದಿಲ್ಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯಲ್ಲಿ ಉಂಟಾಗಿರುವ ಆಂತರಿಕ ಬಿಕ್ಕಟ್ಟಿನಿಂದಾಗಿ ಬಿಸಿಸಿಐ ಸಿಬಂದಿಗೆ ಸಿಗಬೇಕಾಗಿದ್ದ ವೇತನ ಹೆಚ್ಚಳಕ್ಕೆ ತಡೆ ಬಿದ್ದಿದೆ. ಇದರಿಂದ ಸಿಬಂದಿ ಸಂಕಷ್ಟದಲ್ಲಿದ್ದಾರೆ ಎಂದು ವರದಿಯಾಗಿದೆ.
ಪ್ರಸ್ತುತ 25,000 ಕೋಟಿ ರೂ.ಗೂ ಹೆಚ್ಚು ವಾರ್ಷಿಕ ವಹಿವಾಟು ನಡೆಸುವ ಬಿಸಿಸಿಐಯಲ್ಲಿ 100ಕ್ಕೂ ಅಧಿಕ ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದುವರೆಗೆ ಇವರಿಗೆ ವೇತನದಲ್ಲಿ ಹೆಚ್ಚಳ ಮಾಡಲಾಗಿಲ್ಲ ಎನ್ನಲಾಗಿದೆ. ಕಳೆದ ಇಂಡಿಯನ್ ಪ್ರೀಮಿಯರ್ ಲೀಗ್ ಕೂಟದ ಕಡತಗಳ ನಿರ್ವಹಣಾ ಜವಾಬ್ದಾರಿಯನ್ನು 6 ಮಂದಿ ಬಿಸಿಸಿಐ ಅಧಿಕಾರಿಗಳ ತಂಡಕ್ಕೆ ನೀಡಲಾಗಿತ್ತು. ಇದೀಗ ಈ ಅಧಿಕಾರಿಗಳ ನಡುವಿನ ಒಳಜಗಳದಿಂದಾಗಿ ವೇತನ ಹೆಚ್ಚಳಕ್ಕೆ ಅಡ್ಡಿಯಾಗಿದೆ.
ಆದರೆ ಬಿಸಿಸಿಐ ಸಿಇಒ ರಾಹುಲ್ ಜೊಹ್ರಿ ಮತ್ತು ಬಿಸಿಸಿಐ ಆಡಳಿತಾಧಿಕಾರಿಗಳ ಮುಖ್ಯಸ್ಥ ವಿನೋದ್ ರಾಯ್ ಈ ವಿವಾದವನ್ನು ಅಲ್ಲಗೆಳೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ