ಸೌಥಾಂಪ್ಟನ್ ಟೆಸ್ಟ್ : ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ
Team Udayavani, Aug 30, 2018, 3:09 PM IST
ಸೌಥಾಂಪ್ಟನ್ : ನಾಟಿಂಗಂ ಟೆಸ್ಟ್ ಪಂದ್ಯ ಗೆದ್ದು ಹುಮ್ಮಸ್ಸಿನಲ್ಲಿರುವ ಟೀಂ ಇಂಡಿಯಾ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಫೀಲ್ಡಿಂಗ್ ಮಾಡಲಿದೆ. ಟಾಸ್ ಗೆದ್ದ ಜೋ ರೂಟ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.
ಈ ಪಂದ್ಯಕ್ಕೆ ಭಾರತ ತಂಡ ಯಾವುದೇ ಬದಲಾವಣೆ ಮಾಡಿಕೊಳ್ಳದೆ ನಾಟಿಂಗಂ ಟೆಸ್ಟ್ ವಿಜೇತ ತಂಡವನ್ನೇ ಮುಂದುವರಿಸಿದೆ. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಮೊದಲ ಬಾರಿಗೆ ಬದಲಾವಣೆ ಮಾಡಿಕೊಳ್ಳದೇ ಆಡುತ್ತಿದೆ. ಇಂಗ್ಲೆಂಡ್ ತಂಡ ಈ ಪಂದ್ಯಕ್ಕಾಗಿ ಎರಡು ಬದಲಾವಣೆ ಮಾಡಿಕೊಂಡಿದ್ದು ಕ್ರಿಸ್ ವೋಕ್ಸ್ ಬದಲಿಗೆ ಸ್ಯಾಮ್ ಕರ್ರನ್ ಮತ್ತು ಆಲಿವರ್ ಪೋಪ್ ಬದಲಿಗೆ ಮೋಯಿನ್ ಅಲಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಈ ಸರಣಿಯ ಮೊದಲೆರಡು ಪಂದ್ಯಗಳನ್ನು ಸೋತಿದ್ದ ಟೀಂ ಇಂಡಿಯಾ ನಾಟಿಂಗಂ ಟೆಸ್ಟ್ ಪಂದ್ಯದಲ್ಲಿ 203 ರನ್ ಗಳ ಅಂತರದಿಂದ ಗೆಲುವು ಸಾಧಿಸಿತ್ತು. ಈ ಪಂದ್ಯವನ್ನು ಗೆದ್ದು ಸರಣಿಯನ್ನು ಸಮಬಲಗೊಳಿಸಲು ಕೊಹ್ಲಿ ನಾಯಕತ್ವದ ಭಾರತ ತಂಡ ಸಜ್ಜಾಗಿದೆ.
ಉಭಯ ತಂಡಗಳು:
ಭಾರತ: ವಿರಾಟ್ ಕೊಹ್ಲಿ, (ನಾಯಕ) ಶಿಖರ್ ಧವನ್, ಲೋಕೇಶ್ ರಾಹುಲ್, ಚೇತೇಶ್ವರ್ ಪೂಜಾರ, ಅಜಿಂಕ್ಯಾ ರಹಾನೆ, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್( ವಿಕೆಟ್ ಕೀಪರ್) ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ.
ಇಂಗ್ಲೆಂಡ್: ಜೊ ರೂಟ್ (ನಾಯಕ), ಅಲಿಸ್ಟರ್ ಕುಕ್, ಕೀಟನ್ ಜೆನ್ನಿಂಗ್ಸ್, ಜಾನಿ ಬೆರಿಸ್ಟೊ, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ವಿಕೆಟ್ ಕೀಪರ್) ಮೋಯಿನ್ ಆಲಿ, ಸ್ಯಾಮ್ ರ್ರನ್, ಆದಿಲ್ ರಶೀದ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್.