ಐಎಸ್‌ಎಸ್‌ಎಫ್ ಶೂಟಿಂಗ್‌: ಪುರುಷರ ಸ್ಕೀಟ್‌ ತಂಡ ಫೈನಲಿಗೆ


Team Udayavani, Sep 11, 2018, 6:40 AM IST

issff.jpg

ಚಾಂಗ್‌ವೋನ್‌: ಐಎಸ್‌ಎಸ್‌ಎಫ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಕಿರಿಯ ಪುರುಷರ ಸ್ಕೀಟ್‌ ತಂಡ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ. ಕೂಟದ 9ನೇ ದಿನವಾದ ಸೋಮವಾರ ಭಾರತದ ಶೂಟರ್‌ಗಳಿಗೆ ಯಾವುದೇ ಪದಕ ಲಭಿಸಲಿಲ್ಲ.

ಕಿರಿಯ ಪುರುಷರ ಸ್ಕೀಟ್‌ ಸ್ಪರ್ಧೆಯ ಅರ್ಹತಾ ಸುತ್ತಿನಲ್ಲಿ  ಗುರ್ನಿಹಾಲ್‌ ಸಿಂಗ್‌ ಗರ್ಚಾ 75ರಲ್ಲಿ 73 ಅಂಕ ಪಡೆದು 2ನೇ ಸ್ಥಾನ ಪಡೆದರು. ಅನಂತ್‌ಜೀತ್‌ ಸಿಂಗ್‌ ನರುಕ್‌ 71 ಅಂಕ ದೊಂದಿಗೆ 11ನೇ ಸ್ಥಾನ, ಆಯುಷ್‌ ರುದ್ರರಾಜು 70 ಅಂಕ ಗಳಿಸಿ 12ನೇ ಸ್ಥಾನದಲ್ಲಿ ಆಟ ಮುಗಿಸಿದರು. ಈ 3 ಸ್ಪರ್ಧಿಗಳ ಒಟ್ಟು 214 ಅಂಕ ತಂಡ ವಿಭಾಗದ ಫೈನಲ್‌ ಪ್ರವೇಶಿಸಲು ನೆರವಾಯಿತು. ಮಂಗಳವಾರ ವೈಯಕ್ತಿಕ ವಿಭಾಗದಲ್ಲಿ ಮತ್ತೆರಡು ಅರ್ಹತಾ ಸುತ್ತಿನ ಸ್ಪರ್ಧೆ ನಡೆಯಲಿದೆ.

ಪುರುಷರ 25 ಮೀ. ರ್ಯಾಪಿಡ್‌ ಫೈಯರ್‌ ಪಿಸ್ತೂಲ್‌ ವಿಭಾಗದಲ್ಲಿ ಕಾಮನ್ವೆಲ್ತ್‌ ಗೇಮ್ಸ್‌ ಚಿನ್ನದ ಪದಕ ವಿಜೇತ ಅನೀಶ್‌ ಭನ್ವಾಲ್‌ 15ನೇ ಸ್ಥಾನಕ್ಕಿಳಿದು ಫೈನಲ್‌ ಪ್ರವೇಶಿಸುವಲ್ಲಿ ವಿಫ‌ಲರಾದರು. ರ್ಯಾಪಿಡ್‌ ಫೈಯರ್‌ ಅರ್ಹತಾ ಸುತ್ತಿನಲ್ಲಿ  581 ಅಂಕ ಪಡೆದ ಅನೀಶ್‌, ಅಂತಿಮ ಅರ್ಹತಾ ಸುತ್ತಿನಲ್ಲಿ 6ನೇ ಸ್ಥಾನ ಪಡೆದರು. ಇದೇ ಸ್ಪರ್ಧೆಯಲ್ಲಿದ್ದ ಗುರ್‌ಪ್ರೀತ್‌ ಸಿಂಗ್‌ ಅರ್ಹತಾ ಸುತ್ತಿನಲ್ಲಿ 43ನೇ ಸ್ಥಾನ ಪಡೆದರೆ, ಶಿವಂ ಶುಕ್ಲಾ 46ನೇ ಸ್ಥಾನ ಗಳಿಸಿದರು. ಕಿರಿಯ ಪುರುಷರ 50 ಮೀ. ರೈಫ‌ಲ್‌ 3 ಪೊಸಿಶನ್‌ ವಿಭಾಗದಲ್ಲಿ ಐಶ್ವರ್ಯ ಪ್ರತಾಪ್‌ ಸಿಂಗ್‌ ತೋಮರ್‌ 5ನೇ ಸ್ಥಾನ ಪಡೆದು ಫೈನಲ್‌ ಪ್ರವೇಶಿಸಿದರು. ಆದರೆ ಫೈನಲ್‌ನಲ್ಲಿ  4ನೇ ಸ್ಥಾನಕ್ಕೆ ಕುಸಿದರು. ಈ ಸ್ಪರ್ಧೆಯಲ್ಲಿದ್ದ ಫ‌ತೇ ಸಿಂಗ್‌ ದಿಲ್ಲೋನ್‌ 38ನೇ ಸ್ಥಾನ, ಸಿ. ಸ್ಯಾಮ್‌ ಜಾರ್ಜ್‌ ಸಾಜನ್‌ 47ನೇ ಸ್ಥಾನಕ್ಕಿಳಿದರು. ತಂಡ ವಿಭಾಗದಲ್ಲಿ ಭಾರತ 10ನೇ ಸ್ಥಾನ ಪಡೆಯಿತು.

ವನಿತಾ 300ಮೀ. ರೈಫ‌ಲ್‌ ಪ್ರೋನ್‌ ವಿಭಾಗದ ಅರ್ಹತಾ ಸುತ್ತಿನಲ್ಲಿ ಲಜ್ಜಾ ಗೋಸ್ವಾಮಿ 17ನೇ ಸ್ಥಾನ, ರಂಜನಾ ಗುಪ್ತಾ 33ನೇ ಸ್ಥಾನ ಪಡೆದರು. 9ನೇ ದಿನದ ಅಂತ್ಯಕ್ಕೆ ಭಾರತ 20 ಪದಕಗಳೊಂದಿಗೆ 4ನೇ ಸ್ಥಾನದಲ್ಲಿದೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.