ಬ್ಯಾಡ್ಮಿಂಟನ್ ತಾರೆ ಲೀ ಚಾಂಗ್ ವೀಗೆ ಕ್ಯಾನ್ಸರ್
Team Udayavani, Sep 23, 2018, 6:00 AM IST
ಕೌಲಾಲಂಪುರ: ಮಲೇಶ್ಯದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ ಲೀ ಚಾಂಗ್ ವೀ ಕ್ಯಾನ್ಸರ್ ಕಂಟಕಕ್ಕೆ ಸಿಲುಕಿದ್ದಾರೆ. ಮೊದಲ ಹಂತದಲ್ಲಿರುವ ಮೂಗಿನ ಕ್ಯಾನ್ಸರ್ ಬೆಳಕಿಗೆ ಬಂದಿದೆ.
ಅವರೀಗ ತೈವಾನ್ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ. ಮಲೇಶ್ಯದ ತಾರಾ ಆಟಗಾರ ಎಂದೇ ಗುರುತಿಕೊಂಡಿದ್ದ ಲೀ ಚಾಂಗ್ ವಿ ಕಳೆದ ಕೆಲವು ದಿನಗಳಿಂದ ಕ್ರೀಡಾಕ್ಷೇತ್ರದಲ್ಲಿ ಅಷ್ಟೊಂದು ಸಕ್ರಿಯರಾಗಿರಲಿಲ್ಲ. ಹೀಗಾಗಿ ಅವರ ಆರೋಗ್ಯದ ಬಗ್ಗೆ ಕ್ರೀಡಾವಲಯದಲ್ಲಿ ಗುಸುಗುಸು ಶುರುವಾಗಿತ್ತು. ಇದೀಗ ಸ್ವತಃ ಮಲೇಶ್ಯ ಕ್ರೀಡಾ ಮೂಲಗಳು ಲೀಗೆ ಕ್ಯಾನ್ಸರ್ಗೆ ಇರುವುದನ್ನು ಸ್ಪಷ್ಟಪಡಿಸಿವೆ. ಲೀ ಹಾಗೂ ಕುಟುಂಬಕ್ಕೆ ಎಲ್ಲ ರೀತಿಯ ನೆರವು ನೀಡುವುದಾಗಿ ಮಲೇಸ್ಯ ಬ್ಯಾಡ್ಮಿಂಟನ್ ಸಂಸ್ಥೆ ತಿಳಿಸಿದೆ.
3 ಒಲಿಂಪಿಕ್ಸ್ ಸಿಂಗಲ್ಸ್ ಬೆಳ್ಳಿ, 4 ವಿಶ್ವ ಚಾಂಪಿಯನ್ಶಿಪ್, 6 ಕಾಮನ್ವೆಲ್ತ್, 5 ಏಶ್ಯನ್ ಗೇಮ್ಸ್ ಪದಕ ಸೇರಿದಂತೆ ವಿಶ್ವದ ಪ್ರಮುಖ ಬ್ಯಾಡ್ಮಿಂಟನ್ ಕೂಟಗಳಲ್ಲಿ ಲೀ ಚಾಂಗ್ ವೀ ಗಮನಾರ್ಹ ಸಾಧನೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ