ಟೆಸ್ಟ್‌  ಸರಣಿ  ಗೆದ್ದ ಇಂಗ್ಲೆಂಡ್‌

Team Udayavani, Nov 19, 2018, 11:23 AM IST

england.jpg

ಕ್ಯಾಂಡಿ: ಶ್ರೀಲಂಕಾ ವಿರುದ್ಧದ ಕ್ಯಾಂಡಿ ಟೆಸ್ಟ್‌ ಪಂದ್ಯದಲ್ಲಿ ಪ್ರವಾಸಿ ಇಂಗ್ಲೆಂಡ್‌ 57 ರನ್ನುಗಳ ಜಯ ಸಾಧಿಸಿ ಸರಣಿ ವಶಪಡಿಸಿಕೊಂಡಿದೆ. ಗೆಲುವಿಗೆ 301 ರನ್ನುಗಳ ಗುರಿ ಪಡೆದ ಲಂಕಾ, ಅಂತಿಮ ದಿನವಾದ ರವಿವಾರ 243ಕ್ಕೆ ತನ್ನೆಲ್ಲ ವಿಕೆಟ್‌ ಕಳೆದುಕೊಂಡಿತು. 

ಇದರೊಂದಿಗೆ ಇಂಗ್ಲೆಂಡ್‌ ಮೊದಲ ಬಾರಿಗೆ ವಿದೇಶಿ ಪ್ರವಾಸವೊಂದರ ವೇಳೆ ಟೆಸ್ಟ್‌, ಏಕದಿನ ಹಾಗೂ ಟಿ20 ಸರಣಿಗಳನ್ನೆಲ್ಲ ಗೆದ್ದು ಮೆರೆದಂತಾಯಿತು. ಏಕದಿನದಲ್ಲಿ 3-1 ಜಯ ಗಳಿಸಿದ ಇಂಗ್ಲೆಂಡ್‌, ಅನಂತರ ಏಕೈಕ ಟಿ20 ಪಂದ್ಯದಲ್ಲೂ ಗೆದ್ದು ಬಂದಿತ್ತು.

ಇದು 2001ರ ಬಳಿಕ ಶ್ರೀಲಂಕಾ ನೆಲದಲ್ಲಿ ಇಂಗ್ಲೆಂಡ್‌ ಸಾಧಿಸಿದ ಮೊದಲ ಟೆಸ್ಟ್‌ ಸರಣಿ ಗೆಲುವು. ಏಶ್ಯದಲ್ಲಿ 2012ರ ಬಳಿಕ, ವಿದೇಶದಲ್ಲಿ 2015-16ರ ಬಳಿಕ ಒಲಿದ ಮೊದಲ ಸರಣಿ ಜಯವೂ ಹೌದು. 

ಶ್ರೀಲಂಕಾ 7ಕ್ಕೆ 226 ರನ್‌ ಗಳಿಸಿದಲ್ಲಿಂದ ಅಂತಿಮ ದಿನದಾಟ ಮುಂದುವರಿಸಿತ್ತು. ಜಾಕ್‌ ಲೀಚ್‌ (83ಕ್ಕೆ 5) ಮತ್ತು ಮೊಯಿನ್‌ ಅಲಿ (72ಕ್ಕೆ 4) ಸೇರಿಕೊಂಡು ಲಂಕಾ ಇನ್ನಿಂಗ್ಸಿಗೆ ತೆರೆ ಎಳೆದರು. ಈ ಸಾಧನೆಯೊಂದಿಗೆ ಜೋ ರೂಟ್‌ ಶತಕ ಬಾರಿಸಿದ 15 ಟೆಸ್ಟ್‌ಗಳಲ್ಲಿ ಇಂಗ್ಲೆಂಡ್‌ ಅಜೇಯವಾಗಿ ಉಳಿದಂತಾಯಿತು. ಅವರ 11 ಶತಕಗಳ ವೇಳೆ ಇಂಗ್ಲೆಂಡ್‌ ಜಯಿಸಿತ್ತು, ಉಳಿದ 4 ಟೆಸ್ಟ್‌ ಡ್ರಾಗೊಂಡಿದ್ದವು.

ಸ್ಪಿನ್ನರ್‌ಗಳಿಗೆ 38 ವಿಕೆಟ್‌!
ಈ ಟೆಸ್ಟ್‌ ಪಂದ್ಯದ 38 ವಿಕೆಟ್‌ಗಳನ್ನು ಸ್ಪಿನ್ನರ್‌ಗಳೇ ಉರುಳಿಸಿದ್ದೊಂದು ದಾಖಲೆ. 1969ರ ಭಾರತ-ನ್ಯೂಜಿಲ್ಯಾಂಡ್‌ ನಡುವಿನ ನಾಗ್ಪುರ ಟೆಸ್ಟ್‌ ಪಂದ್ಯದಲ್ಲಿ ಸ್ಪಿನ್ನರ್‌ಗಳು 37 ವಿಕೆಟ್‌ ಕೆಡವಿದ್ದು ಈವರೆಗಿನ ದಾಖಲೆಯಾಗಿತ್ತು. ವೇಗದ ಬೌಲರ್‌ಗಳು ಒಂದೂ ವಿಕೆಟ್‌ ಉರುಳಿಸದೆ ಇಂಗ್ಲೆಂಡ್‌ ಜಯ ಸಾಧಿಸಿದ ಕೇವಲ 3ನೇ ನಿದರ್ಶನ ಇದಾಗಿದೆ. ಸರಣಿಯ 3ನೇ ಹಾಗೂ ಅಂತಿಮ ಟೆಸ್ಟ್‌ ನ. 23ರಿಂದ ಕೊಲಂಬೊದಲ್ಲಿ ಆರಂಭವಾಗಲಿದೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.