ಸಂಜು ವೆಡ್ಸ್ ಚಾರುಲತಾ
Team Udayavani, Dec 23, 2018, 6:50 AM IST
ತಿರುವನಂತಪುರ: ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಶನಿವಾರ ಗೆಳತಿ ಚಾರುಲತಾ ಜತೆ ವೈವಾಹಿಕ ಜೀವನಕ್ಕೆ ಕಾಲಿರಿಸಿದರು. ತಿರುವನಂತಪುರ ಸಮೀಪದ ಕೋವಳಂ ರೆಸಾರ್ಟ್ ಒಂದರಲ್ಲಿ ಮದುವೆ ಸಮಾರಂಭ ಏರ್ಪಟ್ಟಿತು.
ಶನಿವಾರ ಬೆಳಗ್ಗೆ ನಡೆದ ಸರಳ ಸಮಾರಂಭದಲ್ಲಿ ಎರಡೂ ಕುಟುಂಬಗಳ ಕೇವಲ 30 ಮಂದಿಯಷ್ಟೇ ಉಪಸ್ಥಿತರಿದ್ದರು. ಸಂಜೆ ಆರತಕ್ಷತೆ ಕಾರ್ಯಕ್ರಮ ಜರಗಿತು.
ಇವರದು ಕಾಲೇಜು ಜೀವನದ ಮೊದಲ ನೋಟದ ಪ್ರೇಮಾಂಕುರ. 2013ರ ಆಗಸ್ಟ್ 22ರಂದು ಪರಸ್ಪರ ನೋಡಿದಾಗಲೇ ಕಣ್ಣುಗಳು ಮಾತಾಡಿಕೊಂಡಿದ್ದವು. ಕಳೆದ ಸೆಪ್ಟಂಬರ್ನಲ್ಲಿ ಇನ್ಸ್ಟಾಗ್ರಾಮ್ನಲ್ಲಿ ಕೆಲವು ಚಿತ್ರಗಳನ್ನು ಪೋಸ್ಟ್ ಮಾಡುವ ಮೂಲಕ ತಾವು ಮದುವೆ ಆಗುತ್ತಿರುವುದಾಗಿ ಘೋಷಿಸಿದ್ದರು. ಆರಂಭದಿಂದಲೂ ತಮ್ಮ ಸಂಬಂಧವನ್ನು ಬೆಂಬಲಿಸುತ್ತಲೇ ಬಂದ ಕುಟುಂಬದವರಿಗೆ, ಹಿತೈಷಿಗಳಿಗೆ ಸಂಜು ಸ್ಯಾಮ್ಸನ್ ಕೃತಜ್ಞತೆ ಸಲ್ಲಿಸಿದ್ದಾರೆ.
ಕೇರಳದ ಪ್ರತಿಭಾನ್ವಿತ ವಿಕೆಟ್ ಕೀಪರ್, 24ರ ಹರೆಯದ ಸಂಜು ಸ್ಯಾಮ್ಸನ್ 2015ರ ಜುಲೈಯಲ್ಲಿ ಜಿಂಬಾಬ್ವೆ ವಿರುದ್ಧದ ಹರಾರೆ ಟಿ20 ಪಂದ್ಯದಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಇದು ಅವರ ಏಕೈಕ ಅಂತಾರಾಷ್ಟ್ರೀಯ ಪಂದ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್