CONNECT WITH US  

ಉನ್ನತ ಶಿಕ್ಷಣ ಪಠ್ಯಕ್ರಮದ ಸಮಗ್ರ ಬದಲಾವಣೆ: ವೈಮಾನಿಕ ಕೋರ್ಸ್‌

ಬೆಂಗಳೂರು: ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಉನ್ನತ ಶಿಕ್ಷಣದಲ್ಲಿ ಏರೋಸ್ಪೇಸ್‌ ಕೋರ್ಸ್‌ ಆರಂಭಿಸಲು ಸರ್ಕಾರ ತೀರ್ಮಾನಿಸಿದ್ದು, ಇದರ ಜತೆಗೆ ಕೌಶಲ್ಯಾಧರಿತ ಶಿಕ್ಷಣ ಒದಗಿಸುವ ಸಲುವಾಗಿ ಉನ್ನತ ಶಿಕ್ಷಣದ ಪಠ್ಯಕ್ರಮದಲ್ಲಿ ಸಮಗ್ರ ಬದಲಾವಣೆ ತರಲು ಮುಂದಾಗಿದೆ.

ಈ ನಿಟ್ಟಿನಲ್ಲಿ ಈಗಾಗಲೇ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದು, 2016-17ನೇ ಸಾಲಿನಿಂದಲೇ ಏರೋಸ್ಪೇಸ್‌ ಕುರಿತ ಕೋರ್ಸ್‌ ಆರಂಭಿಸಲು ಮತ್ತು ಪಠ್ಯಕ್ರಮದಲ್ಲಿ ಬದಲಾವಣೆ ತರಲು ಪ್ರಯತ್ನಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.

ಏರೋಸ್ಪೇಸ್‌ ಕೋರ್ಸ್‌ ಆರಂಭಿಸುವ ಉದ್ದೇಶದಿಂದ ಉನ್ನತ ಶಿಕ್ಷಣ ಇಲಾಖೆಯಲ್ಲಿ ಏರೋಸ್ಪೇಸ್‌ ಸೆಂಟರ್‌ ಫಾರ್‌ ಎಕ್ಸಲೆನ್ಸ್‌ ಸ್ಥಾಪಿಸಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ಹಲವು ಸುತ್ತಿನ ಸಮಾಲೋಚನೆ ನಡೆಸಲಾಗಿದ್ದು, ಶೀಘ್ರದಲ್ಲೇ ಒಪ್ಪಂದಕ್ಕೆ ಸಹಿ ಹಾಕಲಾಗುವುದು ಎಂದರು.

Trending videos

Back to Top