CONNECT WITH US  

ಖ್ಯಾತ ಮಕ್ಕಳ ವೈದ್ಯೆ ನಿರ್ಮಲಾ ಕೇಸರಿ ಇನ್ನಿಲ್ಲ

ದಾವಣಗೆರೆ: ಇಲ್ಲಿನ ಬಾಪೂಜಿ ಮಕ್ಕಳ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕಿ ಡಾ| ನಿರ್ಮಲಾ ಕೇಸರಿ (86) ಶುಕ್ರವಾರ ನಿಧನರಾದರು.

ಅವಿವಾಹಿತರಾಗಿದ್ದ ಅವರಿಗೆ ಇಬ್ಬರು ಸಹೋದರಿಯರು, ಓರ್ವ ಸಹೋದರ ಇದ್ದಾರೆ. ದಾವಣಗೆರೆ ಸುತ್ತಮುತ್ತಲಿನ ಜನತೆಯಿಂದ ಮಕ್ಕಳ ತಾಯಿ ಎಂದೇ ಕರೆಸಿಕೊಳ್ಳುತ್ತಿದ್ದ ಡಾ| ನಿರ್ಮಲಾ ಕೇಸರಿ, ಕಳೆದ ನಾಲ್ಕು ವರ್ಷಗಳಿಂದ ಅನಾರೋಗ್ಯಕ್ಕೀಡಾಗಿದ್ದರು. ಅವರಿಗೆ ಬಾಪೂಜಿ ಮಕ್ಕಳ ಆಸ್ಪತ್ರೆಯಲ್ಲಿಯೇ ಶುಶ್ರೂಷೆ ನೀಡಲಾಗುತ್ತಿತ್ತು. ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದರು. ಶನಿವಾರ ಅವರ ಅಂತ್ಯಕ್ರಿಯೆ ನಡೆಯಲಿದೆ.

Trending videos

Back to Top