CONNECT WITH US  

ಶಿಥಿಲಗೊಂಡ ಶಾಲೆಗಳ  ದುರಸ್ತಿ ಶೀಘ್ರ: ಜಾರಕಿಹೊಳಿ

ಬೆಳಗಾವಿ: ಜಿಲ್ಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ ಶಾಲೆಗಳ ಪಟ್ಟಿ ಮಾಡಿ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. 

ಹುಕ್ಕೇರಿ ತಾಲೂಕಿನ ಯಮಕನಮರಡಿಯಲ್ಲಿ ಶಾಲಾ ಗೋಡೆ ಕುಸಿದು ಮೃತಪಟ್ಟ ಬಾಲಕಿಯರ ಮನೆಗೆ ಮಂಗಳವಾರ ಭೇಟಿ ನೀಡಿ ಸಾಂತ್ವನ ಹೇಳಿದರು. ಇದೇ ವೇಳೆ, ಯಮಕನಮರಡಿಯಲ್ಲಿ ಮೃತಪಟ್ಟ ಬಾಲಕಿಯರ ಕುಟುಂಬಕ್ಕೆ ಸರ್ಕಾರದಿಂದ ತಲಾ 4 ಲಕ್ಷ ರೂ. ಹಾಗೂ ಶಿಕ್ಷಣ ಇಲಾಖೆಯಿಂದ 50 ಸಾವಿರ ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

Trending videos

Back to Top