ಹೂಡಿಕೆ ಸಮಾವೇಶಗಳಿಗೆ ನಾವೇ ಮಾದರಿ: ಆರ್.ವಿ.ದೇಶಪಾಂಡೆ
Team Udayavani, Jan 7, 2017, 3:45 AM IST
ಬೆಂಗಳೂರು: ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ, ಆಟೋಮೊಬೈಲ್ ಸೇರಿದಂತೆ ಪ್ರತಿ ಕ್ಷೇತ್ರದಲ್ಲಿಯೂ ನೀತಿಗಳನ್ನು ರೂಪಿಸಿ ಜಾರಿಗೊಳಿಸಿದ ಮೊದಲ ರಾಜ್ಯ ಕರ್ನಾಟಕವಾಗಿದೆ ಎಂದು ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟಿದ್ದಾರೆ.
ಭಾರತ ಮೂಲದ ಜನರ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ವತಿಯಿಂದ ಪ್ರವಾಸಿ ಭಾರತ್ ದಿವಸ್ ಪ್ರಯುಕ್ತ ಶುಕ್ರವಾರ ಹಮ್ಮಿಕೊಂಡಿದ್ದ ಭಾರತದ ಆರ್ಥಿಕ ಅಭಿವೃದ್ಧಿ ವಲಸಿಗರಿಗೆ ವ್ಯವಹಾರದಲ್ಲಿ ಅವಕಾಶ ಕುರಿತಂತೆ ನಡೆದ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕವು 2000ನೇ ಸಾಲಿನಲ್ಲಿ ಇನ್‌ವೆಸ್ಟ್ ಕರ್ನಾಟಕ ಪ್ರಾರಂಭಿಸಿತು. ನಂತರ ಇದೇ ಮಾದರಿಯಲ್ಲಿ ಹೂಡಿಕೆ ಸಮಾವೇಶಗಳನ್ನು ಹಮ್ಮಿಕೊಳ್ಳುವ ಮೂಲಕ ದೇಶದ ಹಲವು ರಾಜ್ಯಗಳು ಅನುಕರಿಸಿದವು. ಐಟಿ, ಬಿಟಿ ಸೇರಿದಂತೆ ಪ್ರತಿಯೊಂದು ಕ್ಷೇತ್ರಕ್ಕೂ ಹೊಸ ನೀತಿಗಳನ್ನು ರೂಪಿಸಿ ಜಾರಿಗೊಳಿಸಿದ ಮೊದಲ ರಾಜ್ಯ ಎಂಬ ಕೀರ್ತಿ ಕರ್ನಾಟಕಕ್ಕೆ ಸೇರುತ್ತದೆ ಎಂದು ಹೇಳಿದರು.
ಕರ್ನಾಟಕ ಪ್ರಗತಿಪರ ಕೈಗಾರಿಕಾ ರಾಜ್ಯವಾಗಿದೆ. ಬಂಡವಾಳ ಹೂಡಿಕೆಗಾಗಿ ಪ್ರತಿ ರಾಜ್ಯಗಳಲ್ಲಿಯೂ ಸ್ಪರ್ಧೆ ಇದೆ. ಈ ಹಿಂದೆ ಹೂಡಿಕೆ ಮಾಡಲು ಕೈಗಾರಿಕೋದ್ಯಮಿಗಳು ಮುಖ್ಯಮಂತ್ರಿ ಮತ್ತು ಸಚಿವರನ್ನು ಔತಣಕೂಟಕ್ಕೆ ಆಹ್ವಾನಿಸುತ್ತಿದ್ದರು. ಆದರೆ, ಪರಿಸ್ಥಿತಿ ಈಗ ಬದಲಾಗಿದೆ. ಮೊದಲಿನಂತೆ ಉದ್ಯಮಿಗಳು ಔತಣಕೂಟ ಆಯೋಜಿಸುತ್ತಿಲ್ಲ. ಬದಲಿಗೆ ಮುಖ್ಯಮಂತ್ರಿಗಳೇ ಉದ್ಯಮಿಗಳನ್ನು ಆಹ್ವಾನಿಸಿ ತಮ್ಮಲ್ಲಿ ಹೂಡಿಕೆ ಮಾಡುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ. ಇದು ಕರ್ನಾಟಕ ಮಾತ್ರವಲ್ಲ, ದೇಶದ ಎಲ್ಲಾ ರಾಜ್ಯಗಳಲ್ಲಿಯೂ ಇದೇ ಪರಿಸ್ಥಿತಿ ಎಂದರು.
ಶನಿವಾರದಿಂದ ಮೂರು ದಿನಗಳ ಕಾಲ ನಗರದಲ್ಲಿ ಏರ್ಪಡಿಸಿರುವ ಪ್ರವಾಸಿ ಭಾರತೀಯ ದಿವಸ್ ಕಾರ್ಯಕ್ರಮದಲ್ಲಿ ರಾಜ್ಯದ ಶಕ್ತಿ ಪ್ರದರ್ಶನ ನಡೆಯಲಿದೆ. ಇನ್ವೆಸ್ಟ್ ಕರ್ನಾಟಕ ಮತ್ತು ನವೋದ್ಯಮ ಎಂಬ ಎರಡು ಸಮಾರಂಭವು ಸಹ ಸಮಾವೇಶದಲ್ಲಿ ಜರುಗಲಿದೆ. ಇದರಲ್ಲಿ ನಮ್ಮ ನೀತಿ, ಕೈಗಾರಿಕಾ ಅವಕಾಶಗಳನ್ನು ಬಿಂಬಿಸಿ ಹೂಡಿಕೆದಾರರನ್ನು ಆಕರ್ಷಿಸುವ ಕೆಲಸವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಪ್ರವಾಸಿ ಭಾರತೀಯ ದಿವಸ್ ಕೇವಲ ಹೂಡಿಕೆಗಾಗಿ ಮಾತ್ರ ಆಯೋಜಿಸಿರುವ ಸಮಾವೇಶವಲ್ಲ. ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವುದರ ಜತೆಗೆ ಅನಿವಾಸಿಗಳ ಸಮಸ್ಯೆ, ಅವರ ಅಭಿಪ್ರಾಯಗಳ ಆಲಿಕೆ, ವೀಸಾ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆ ಹಾಗೂ ವಿಷಯಗಳ ಮೇಲೆ ಬೆಳಕು ಚೆಲ್ಲಲಾಗುತ್ತದೆ ಎಂದು ವಿವರಿಸಿದರು.
14ನೇ ಪ್ರವಾಸಿ ಭಾರತೀಯ ದಿವಸ್ ಸಮಾವೇಶ ಇದಾಗಿದ್ದು, 64 ದೇಶಗಳಿಂದ ಪ್ರತಿನಿಧಿಗಳು ಆಗಮಿಸುತ್ತಿದ್ದಾರೆ. ಅನಿವಾಸಿ ಭಾರತೀಯರ ಶಿಕ್ಷಣ, ಆರೋಗ್ಯ, ಉದ್ಯಮ ಸೇರಿದಂತೆ ಇತರೆ ವಿಷಯಗಳ ಕುರಿತು ಚರ್ಚೆಗಳು ನಡೆಯಲಿವೆ. ಸಮಾವೇಶದಲ್ಲಿ ಉದ್ಯಮಿಗಳಿಂದ ಬರುವ ಎಲ್ಲಾ ಪ್ರಸ್ತಾವಗಳನ್ನು ಸ್ವೀಕರಿಸಲಾಗುವುದು. ನವೋದ್ಯಮ ವಿಷಯದಲ್ಲಿ ಏಕಗವಾಕ್ಷಿ ವ್ಯವಸ್ಥೆ ಜಾರಿಯಲ್ಲಿರುವುದರಿಂದ ಶೀಘ್ರ ಗತಿಯಲ್ಲಿ ಪ್ರಸ್ತಾವಗಳಿಗೆ ಅನುಮತಿ ನೀಡಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎಸ್‌ಟಿಪಿಐ ಮಾಜಿ ನಿರ್ದೇಶಕ ಡಾ.ಬಿ.ನಾಯ್ಡು, ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಆರತಿ ಕೃಷ್ಣ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್ ಮೌರ್ಯ