SSLC ವಿದ್ಯಾರ್ಥಿಗಳೆ ಗಮನಿಸಿ;1ನಿಮಿಷ ತಡವಾದರೆ ಹಾಲ್ ಗೆ ಪ್ರವೇಶ ಇಲ್ಲ
Team Udayavani, Jan 11, 2017, 4:00 PM IST
ಬೆಂಗಳೂರು:ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಹಾಗೂ ಪೋಷಕರ ಗಮನಕ್ಕೆ…ಈ ಬಾರಿ ಪರೀಕ್ಷಾ ಹಾಲ್ ಗೆ ಒಂದೇ, ಒಂದು ನಿಮಿಷ ತಡವಾಗಿ ಹೋದರೂ ಕೂಡಾ ನಿಮಗೆ ಪರೀಕ್ಷೆ ಬರೆಯುವ ಅವಕಾಶ ಇಲ್ಲ. ಹೌದು ಒಂದು ನಿಮಿಷ ತಡವಾದರೂ ಪರೀಕ್ಷಾ ಕೊಠಡಿಗೆ ವಿದ್ಯಾರ್ಥಿಗಳಿಗೆ ಪ್ರವೇಶಕ್ಕೆ ಅವಕಾಶ ಇಲ್ಲ ಎಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಮಂಡಳಿ ಸುತ್ತೋಲೆ ಹೊರಡಿಸಿದೆ.
ಪ್ರಶ್ನೆ ಪತ್ರಿಕೆ ಲೀಕ್ ತಡೆಗಟ್ಟಲು ಹಾಗೂ ಪರೀಕ್ಷೆಯನ್ನ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಮಂಡಳಿ ಈ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿರುವುದಾಗಿ ವರದಿ ತಿಳಿಸಿದೆ.
ನಿಗದಿತ ಸಮಯಕ್ಕಿಂತ ಮೊದಲೇ ಪರೀಕ್ಷಾ ಕೊಠಡಿ ಬಳಿ ಇರಿ:
ಎಸ್ಸೆಎಸ್ಸೆಲ್ಸಿ ಪರೀಕ್ಷೆ ಬೆಳಗ್ಗೆ 9.30ಕ್ಕೆ. ಬೆಳಗ್ಗೆ 9.15 ರಿಂದ 9.30ರೊಳಗೆ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಹಾಜರಾಗೋದು ಕಡ್ಡಾಯ. ಬೆಳಗ್ಗೆ 9.15ಕ್ಕೆ ಮೊದಲ ಲಾಂಗ್ ಬೆಲ್ ಹೊಡೆಯಲಿದ್ದು ಪರೀಕ್ಷಾ ಕೊಠಡಿಗೆ ವಿದ್ಯಾರ್ಥಿಗಳು ಹಾಜರಾಗಬೇಕು. ಬೆಳಗ್ಗೆ 9.25ಕ್ಕೆ ಎರಡನೇ ಲಾಂಗ್ ಬೆಲ್ ಆದಾಗ ಮುಖ್ಯ ಅಧೀಕ್ಷಕರಿಂದ ಕೊಠಡಿ ಮೇಲ್ವೀಚಾರಕರ ಕೈಗೆ ಪ್ರಶ್ನೆ ಪತ್ರಿಕೆ ನೀಡಲಾಗುತ್ತದೆ. 9.30ಕ್ಕೆ ಮೂರನೇ ಲಾಂಗ್ ಬೆಲ್ ಆದಾಗ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ವಿತರಣೆ ಮಾಡಲಾಗುತ್ತದೆ. 9.30ರ ನಂತರ ತಡವಾಗಿ ಬರುವ ವಿದ್ಯಾರ್ಥಿಗಳಿಗೆ ಪ್ರವೇಶವಿಲ್ಲ. ಈ ಬಗ್ಗೆ ಎಸ್ಎಸ್ಎಲ್ಸಿ ಬೋರ್ಡ್, ಡಿಡಿಪಿಐಗಳು ಹಾಗೂ ಬಿಇಓಗಳ ಮೂಲಕ ಎಲ್ಲ ಶಾಲೆಗಳಿಗೆ ಸುತ್ತೋಲೆ ಕಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!