ನಾನು ಈಶ್ವರಪ್ಪ ಅಣ್ಣ ತಮ್ಮ! ಪಕ್ಷ ಅಧಿಕಾರಕ್ಕೆ ತರುವುದೇ ನಮ್ಮ ಗುರಿ
Team Udayavani, Feb 10, 2017, 11:20 AM IST
ಬಾಗಲಕೋಟೆ: ‘ನಾನು ಮತ್ತು ಈಶ್ವರಪ್ಪ ಅಣ್ಣ ತಮ್ಮಂದಿರಿದ್ದಂತೆ ,ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ನನ್ನ ಮತ್ತು ಈಶ್ವರಪ್ಪ ನಡುವೆ ಈಗ ಯಾವುದೇ ಗೊಂದಲ ಇಲ್ಲ. ಇಬ್ಬರೂ ರಾಜ್ಯ ಪ್ರವಾಸ ಮಾಡಿ ಪಕ್ಷವನ್ನು ಸಂಘಟಿಸುತ್ತೇವೆ. ಇನ್ನು ಯಾರೂ ನಮ್ಮ ನಡುವೆ ಅನಗತ್ಯ ಗೊಂದಲ ನಿರ್ಮಿಸಬೇಡಿ’ ಎಂದು ಮನವಿ ಮಾಡಿದರು.
ಮಾಜಿ ಸಚಿವ ಅಂಬರೀಷ್ ಅವರು ಬಿಜೆಪಿ ಸೇರ್ಪಡೆಯಾಗುತ್ತಾರ ಎಂದು ಕೇಳಿದ್ದಕ್ಕೆ ‘ಆ ಬಗ್ಗೆ ನನಗೆ ಮಾಹಿತಿ ಇಲ್ಲ’ ಎಂದರು.
‘ಎಸ್.ಎಂ.ಕೃಷ್ಣ ಅವರು ಪಕ್ಷ ಸೇರ್ಪಡೆಯಾಗುವ ಕುರಿತು ಯಾವುದೇ ಚರ್ಚೆ ನಡೆದಿಲ್ಲ’ ಎಂದು ಸ್ಪಷ್ಟನೆ ನೀಡಿದರು.
ಇದೇ ವೇಳೆ ‘ಯಾವುದೇ ಪಕ್ಷವಾಗಲಿ ಶಾಸಕರು ಕಲಾಪಕ್ಕೆ ಹಾಜರಾಗಬೇಕು. ಕಲಾಪಕ್ಕೆ ಹಾಜರಾಗುವುದು ಶಾಸಕರ ಕರ್ತವ್ಯ.ಜನರು ನಮ್ಮನ್ನು ಆಯ್ಕೆ ಮಾಡಿ ಕಳುಹಿಸಿರುತ್ತಾರೆ. ಕಲಾಪದಲ್ಲಿ ಭಾಗಿಯಾದದಿದ್ದರೆ ಅದು ಜನರಿಗೆ ಮಾಡುವ ಅವಮಾನ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ವಿಜಯ್ ಮಲ್ಯ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ