ಮೇಕೆದಾಟು ಬಳಿ ಅಣೆಕಟ್ಟು: 2 ರಾಜ್ಯಗಳಿಗೂ ಉಪಯುಕ್ತ

Team Udayavani, Feb 17, 2017, 3:45 AM IST

mekedatu.jpg

ಬೆಂಗಳೂರು: ಕಾವೇರಿ ನದಿಗೆ ಮೇಕೆದಾಟು ಬಳಿ ಅಣೆಕಟ್ಟೆ ನಿರ್ಮಿಸುವ ಯೋಜನೆ ರಾಜಧಾನಿ ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆ ಜತೆಗೆ ವಿದ್ಯುತ್‌ ಉತ್ಪಾದನೆ ಯೋಜನೆಯನ್ನೂ ಒಳ ಗೊಂಡಿದೆ. ಕರ್ನಾಟಕವಷ್ಟೇ ಅಲ್ಲದೆ ತಮಿಳುನಾಡಿಗೂ ಇದರಿಂದ ಉಪಯೋಗವಾಗಲಿದೆ.  ಮೇಕೆದಾಟು ಬಳಿ ಕಾವೇರಿ ನದಿಗೆ ಅಣೆಕಟ್ಟೆ ನಿರ್ಮಾಣಕ್ಕೆ 5,912 ಕೋಟಿ ರೂ. ವೆಚ್ಚದ ಸಮಗ್ರ ಯೋಜನಾ ವರದಿ ಸಿದ್ಧಪಡಿಸಿರುವ ಸರ್ಕಾರ ಅದಕ್ಕೆ ತಾತ್ವಿಕ ಅನುಮೋದನೆಯನ್ನೂ ನೀಡಿದೆ. ವಿವಿಧ ಹಂತಗಳನ್ನು ದಾಟಿ ಯೋಜನೆ ಕಾರ್ಯರೂಪಕ್ಕೆ ಬಂದರೆ ಕರ್ನಾಟಕದಷ್ಟೇ
ಅನುಕೂಲ ತಮಿಳುನಾಡಿಗೂ ಆಗುತ್ತದೆ ಎನ್ನುತ್ತಾರೆ ನೀರಾವರಿ ತಜ್ಞರು.

ಯೋಜನೆ ಪೂರ್ಣಗೊಂಡ ಬಳಿಕ 379.5 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆಯಾಗುವುದರ ಜತೆಗೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ 16.1 ಟಿಎಂಸಿ ಕುಡಿಯುವ ನೀರು ಲಭ್ಯವಾಗಲಿದ್ದು, ಭವಿಷ್ಯದಲ್ಲಿ ಬೆಂಗಳೂರು
ನಗರದ ಕುಡಿಯುವ ನೀರಿನ ಕೊರತೆಯ ಆತಂಕವನ್ನು ದೂರ ಮಾಡಲಿದೆ.

ಯಾಕಾಗಿ ಈ ಯೋಜನೆ?: ಪ್ರಸ್ತುತ ಕಬಿನಿ ಮತ್ತು ಕೆಆರ್‌ಎಸ್‌ ಜಲಾಶಯಗಳಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತದೆ. ಈ ನೀರಿನ ಪ್ರಮಾಣವನ್ನು ಬಿಳಿಗುಂಡ್ಲುವಿನಲ್ಲಿ ಮಾಪನ ಮಾಡಲಾಗುತ್ತದೆ. ಕೆಆರ್‌ಎಸ್‌ ಮತ್ತು ಕಬಿನಿ ಜಲಾಶಯಗಳಿಂದ ಬಿಳಿಗುಂಡ್ಲುವರೆಗೆ ನೀರು ಸಂಗ್ರಹಿಸಲು ಅವಕಾಶಗಳಿಲ್ಲ.ಹೀಗಾಗಿ ರಾಜ್ಯದ ಹಿತರಕ್ಷಣೆ ಜತೆಗೆ ತಮಿಳುನಾಡಿಗೆ ಮಾಸಿಕ ಹರಿಸಬೇಕಾಗಿರುವ ನೀರಿನ ಪ್ರಮಾಣಕ್ಕೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳಲು
ಮೇಕೆದಾಟು ಬಳಿ ಸಮತೋಲನ ಜಲಾಶಯ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ.

ಉಪಯೋಗಗಳು: ವಿದ್ಯುತ್‌ ಉತ್ಪಾದನೆ ಕುಡಿವ ನೀರು ಪೂರೈಕೆ ಜತೆಗೆ ಹಲವು ಪರಿಸರ ಸಂಬಂಧಿ ಉಪಯೋಗಗಳೂ ಇದರಲ್ಲಿದೆ. ಯೋಜನೆಯಿಂದ ಪರಿಸರ ಸಮತೋಲನ ವಾಗುವುದರ ಜತೆಗೆ ಜಲಾನಯನ ಪ್ರದೇಶಗಳಲ್ಲಿ ಅಂತರ್ಜಲಮಟ್ಟ ವೃದ್ಧಿಯಾಗುತ್ತದೆ. ಸುತ್ತಲೂ ಅರಣ್ಯ ಪ್ರದೇಶ ಅಭಿವೃದ್ಧಿ, ವನ್ಯ ಪ್ರಾಣಿ ಸಂಕುಲಕ್ಕೆ ಕುಡಿವ ನೀರು ಲಭ್ಯವಾಗುತ್ತದೆ. ಪ್ರವಾಸೋದ್ಯಮ ಬೆಳವಣಿಗೆ ಜತೆಗೆ ಮೀನು ಉತ್ಪಾದನಾ ಉದ್ಯಮ ಅಭಿವೃದ್ಧಿಗೂ
ಸಹಾಯಕವಾಗುತ್ತದೆ.

ತ.ನಾಡಿಗೆ ಆಗುವ ಅನುಕೂಲ: ನ್ಯಾಯಾಧಿಕರಣದ ತೀರ್ಪಿನಂತೆ ಕರ್ನಾಟಕವು ತಮಿಳುನಾಡಿಗೆ ಪ್ರತಿ ತಿಂಗಳು ನಿಗದಿತ ಪ್ರಮಾಣದಲ್ಲಿ ಕಾವೇರಿ ನದಿಯಿಂದ ನೀರು ಹರಿಸಬೇಕಾಗಿದೆ. ಹೆಚ್ಚು ಮಳೆ ಬಂದ ಅವಧಿಯಲ್ಲಿ ನಿಗದಿಗಿಂತ ಹೆಚ್ಚು ನೀರು ತಮಿಳುನಾಡು ಸೇರುತ್ತಿದ್ದು, ಅಲ್ಲಿಯೂ ಸಂಗ್ರಹಕ್ಕೆ ಅವಕಾಶವಿಲ್ಲದೆ ಸಮುದ್ರ ಸೇರುತ್ತದೆ.

ಮೇಕೆದಾಟು ಬಳಿ ಅಣೆಕಟ್ಟೆ ನಿರ್ಮಿಸಿ ಮಳೆಗಾಲದಲ್ಲಿ ಹೆಚ್ಚಾಗಿ ಹರಿಯುವ ನೀರಿನ ಪೈಕಿ 64 ಟಿಎಂಸಿ ನೀರನ್ನು ಹಿಡಿದಿಟ್ಟುಕೊಂಡು ಅಗತ್ಯ ಸಂದರ್ಭದಲ್ಲಿ ಬಿಡುಗಡೆ ಮಾಡಲು ಅನುಕೂಲವಾಗುತ್ತದೆ.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ

Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.