ಉಪಸಮರಕ್ಕೆ ತೆರೆ: ಈಗ ಸೋಲು-ಗೆಲುವಿನ ಲೆಕ್ಕಾಚಾರ 

Team Udayavani, Apr 10, 2017, 11:10 AM IST

BJP-congress-logo.jpg

ಬೆಂಗಳೂರು:ರಾಜ್ಯದಲ್ಲಿ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಸಮರ ಮುಗಿದಿದ್ದು, ಇದೀಗ ಸೋಲು-ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ.

ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಗೆಲುವಿಗೆ ನಿರ್ಣಾಯಕವಾಗಿರುವ ದಲಿತ ಮತ್ತು ಲಿಂಗಾಯತ ಮತಗಳು ವಿಭಜನೆಯಾಗಿದೆಯೇ ಎಂಬ ಅಂಶದ ಮೇಲೆ ಫ‌ಲಿತಾಂಶ ನಿರ್ಧಾರವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಈ ಎರಡೂ ಕ್ಷೇತ್ರಗಳಲ್ಲಿ ಒಟ್ಟು ಮತಗಳ ಪೈಕಿ ದಲಿತ ಮತ್ತು ಲಿಂಗಾಯತ ಮತಗಳೇ ಸರಿ ಸುಮಾರು ಶೇ. 50ರಷ್ಟಿದೆ. ಹಾಗಾಗಿ ಈ ಸಮುದಾಯದ ಮತಗಳನ್ನು ಹೆಚ್ಚಾಗಿ ಗಳಿಸುವವರೇ ಗೆಲ್ಲುತ್ತಾರೆ. ಇದುವರೆಗಿನ ಚುನಾವಣೆಗಳಲ್ಲೂ ಈ ಅಂಶ ಸಾಬೀತಾಗಿದೆ.

ಈ ಕಾರಣದಿಂದಾಗಿ ಎರಡೂ ಕ್ಷೇತ್ರಗಳಲ್ಲಿ ನಿರ್ಣಾಯಕವಾಗಿರುವ ದಲಿತರು ಮತ್ತು ಲಿಂಗಾಯತ ಮತಗಳ ಆಧಾರದ ಮೇಲೆಯೇ ಕಾಂಗ್ರೆಸ್‌ ಮತ್ತು ಬಿಜೆಪಿ ಸೋಲು-ಗೆಲುವಿನ ಲೆಕ್ಕಾಚಾರ ಹಾಕುತ್ತಿದೆ. ಈ ಮತಗಳು ವಿಭಜನೆಯಾದರೆ ಪಕ್ಷದ ಅಭ್ಯರ್ಥಿಗಳಿಗೆ ಗೆಲುವು ಖಚಿತ ಎಂಬುದು ಕಾಂಗ್ರೆಸ್‌ ಲೆಕ್ಕಾಚಾರವಾದರೆ, ಮತ ವಿಭಜನೆಯಾಗದೇ ಇದ್ದರೆ ಗೆಲುವು ನಮ್ಮದು ಎಂಬುದು ಬಿಜೆಪಿಯ ವಾದ.

ನಂಜನಗೂಡು ಕ್ಷೇತ್ರದಲ್ಲಿ ದಲಿತ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದರೆ, ಲಿಂಗಾಯತರದ್ದು ಎರಡನೇ ಸ್ಥಾನ. ಒಟ್ಟು 2 ಲಕ್ಷ ಮತದಾರರ ಪೈಕಿ 55 ಸಾವಿರ ದಲಿತರು ಮತ್ತು 45 ಸಾವಿರ ಲಿಂಗಾಯತರಿದ್ದಾರೆ. ಗುಂಡ್ಲುಪೇಟೆ ಕ್ಷೇತ್ರದಲ್ಲಿ ಇಬ್ಬರೂ ಸಮಾನವಾಗಿದ್ದು, ಸುಮಾರು 2 ಲಕ್ಷ ಮತದಾರರ ಪೈಕಿ ತಲಾ ಶೇ. 25ರಷ್ಟು ದಲಿತ, ಲಿಂಗಾಯತರಿದ್ದಾರೆ. ಹೀಗಾಗಿ ಈ ಮತಗಳು ವಿಭಜನೆಯಾದರೆ ಮಾತ್ರ ಕಾಂಗ್ರೆಸ್‌ಗೆ ಲಾಭವಾಗುತ್ತದೆ ಎಂಬುದು ರಾಜಕೀಯ ವಿಶ್ಲೇಷಕರ ಮಾತು.

ಕಾಂಗ್ರೆಸ್‌ ಹೇಳುವುದೇನು?: ದಲಿತರು ಮೊದಲಿನಿಂದಲೂ ಕಾಂಗ್ರೆಸ್‌ ಬೆಂಬಲಿಸಿಕೊಂಡು ಬಂದಿದ್ದಾರೆ. ನಂಜನಗೂಡು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಗಿರುವುದರಿಂದ ದಲಿತ ಸಮುದಾಯದ ಮತಗಳು ಹಂಚಿಕೆಯಾಗುತ್ತದೆ. ಮೇಲಾಗಿ ಗುಂಡ್ಲುಪೇಟೆ ಕ್ಷೇತ್ರದ ಮಾಜಿ ಶಾಸಕ ಎಚ್‌.ಎಸ್‌.ಮಹದೇವಪ್ರಸಾದ್‌ ಅವರ ಪ್ರಭಾವ ಈ ಕ್ಷೇತ್ರದಲ್ಲೂ ಇತ್ತು. ಹೀಗಾಗಿ ಲಿಂಗಾಯತ ಮತಗಳೂ ಸ್ವಲ್ಪ ಮಟ್ಟಿಗೆ ಕಾಂಗ್ರೆಸ್‌ಗೆ ಬೀಳಲಿದೆ. ಜತೆಗೆ ಹಿಂದಿಳಿದ ಸಮುದಾಯದ ಮತಗಳಲ್ಲಿ ಹೆಚ್ಚಿನ ಪಾಲು ಸೇರಿದಂತೆ ಇತರೆ ಸಮುದಾಯಗಳ ಮತಗಳೂ ಬರಲಿದ್ದು, ಕಾಂಗ್ರೆಸ್‌ ಗೆಲುವು ಖಚಿತ ಎನ್ನುವುದು ಕಾಂಗ್ರೆಸ್‌ ಲೆಕ್ಕಾಚಾರ.

ಗುಂಡ್ಲುಪೇಟೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಹದೇವಪ್ರಸಾದ್‌ ಅವರ ಪತ್ನಿಯೇ ಕಣಕ್ಕಿಳಿದಿರುವುದರಿಂದ ಅನುಕಂಪದ ಆಧಾರದ ಮೇಲೆ ಮತಗಳು ಅವರಿಗೆ ಬೀಳುತ್ತದೆ. ಅಲ್ಲದೆ, ಇಲ್ಲಿ ದಲಿತರ ಮತಗಳು ಪಕ್ಷಕ್ಕೆ ಬರುವುದರಲ್ಲಿ ಯಾವುದೇ ಸಮಸ್ಯೆ ಇಲ್ಲ. ಉಳಿದಂತೆ ಹಿಂದುಳಿದವರು ಸೇರಿದಂತೆ ಇತರೆ ಸಮುದಾಯದ ಮತಗಳು ಹಂಚಿಕೆಯಾದರೆ ಕಾಂಗ್ರೆಸ್‌ ಗೆಲುವಿಗೆ ಸಮಸ್ಯೆಯಾಗದು ಎಂಬ ಲೆಕ್ಕಾಚಾರ ಹಾಕಲಾಗಿದೆ.

ಬಿಜೆಪಿ ಲೆಕ್ಕಾಚಾರವೇನು?: ನಂಜನಗೂಡು ಕ್ಷೇತ್ರದ ಶಾಸಕರಾಗಿದ್ದ ಶ್ರೀನಿವಾಸ ಪ್ರಸಾದ್‌ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು ಕಾಂಗ್ರೆಸ್‌ ಒಬ್ಬ ದಲಿತ ಸಮುದಾಯದ ನಾಯಕನಿಗೆ ಅನ್ಯಾಯ ಮಾಡಿದ್ದರಿಂದ ಅವರು ಬಿಜೆಪಿ ಸೇರಿ ಸ್ಪರ್ಧೆಗಿಳಿದಿದ್ದಾರೆ. ಹೀಗಾಗಿ ದಲಿತರ ಮತಗಳು ಬಿಜೆಪಿಯತ್ತ ಕ್ರೋಢೀಕೃತವಾಗುತ್ತದೆ. ಜತೆಗೆ ಪ್ರಸ್ತುತ ಲಿಂಗಾಯತ ಸಮುದಾಯದ ರಾಜಕೀಯ ನಾಯಕ ಎನಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ರೊಚ್ಚಿಗೆದ್ದು ಪ್ರಚಾರ ನಡೆಸಿದ್ದರಿಂದ ಆ ಸಮುದಾಯದ ಮತಗಳು ಬೀಳುತ್ತವೆ. ಉಳಿದಂತೆ ಮೇಲ್ವರ್ಗದವರ ಮತಗಳು ಹೆಚ್ಚಾಗಿ ಬಿಜೆಪಿ ಪಾಲಾಗಲಿದ್ದು, ಗೆಲುವಿಗೆ ಸಮಸ್ಯೆಯಾಗದು ಎನ್ನುವುದು ಬಿಜೆಪಿ ಹೊಂದಿರುವ ಭರವಸೆ.

ಅದೇ ರೀತಿ ನಂಜನಗೂಡು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ನಿರಂಜನಕುಮಾರ್‌ ಅವರ ಕುಟುಂಬ ಕಳೆದ ನಾಲ್ಕು ಚುನಾವಣೆಗಳಲ್ಲಿ ಸತತವಾಗಿ ಸೋತಿದ್ದರಿಂದ (ಎರಡು ಬಾರಿ ನಿರಂಜನಕುಮಾರ್‌, ಎರಡು ಬಾರಿ ಅವರ ತಂದೆ) ಅನುಕಂಪ ತಮ್ಮ ಅಭ್ಯರ್ಥಿ ಮೇಲೂ ಇದೆ. ನಂಜನಗೂಡು ಕ್ಷೇತ್ರದಲ್ಲಿ ದಲಿತರು ಕಾಂಗ್ರೆಸ್‌ ವಿರುದ್ಧ ಇರುವುದರಿಂದ ಅದರ ಪ್ರಭಾವ ಈ ಕ್ಷೇತ್ರದ ಮೇಲೂ ಬೀರುತ್ತದೆ. ಜತೆಗೆ ಯಡಿಯೂರಪ್ಪ ಅವರ ಸತತ ಪ್ರಚಾರ ಲಿಂಗಾಯತ ಸಮುದಾಯದವನ್ನು ಬಿಜೆಪಿಯತ್ತ ಸೆಳೆದಿದೆ. ಜತೆಗೆ ಮೇಲ್ವರ್ಗದ ಮತಗಳು ಸೇರಿ ಬಿಜೆಪಿ ಗೆಲುವು ನಿಶ್ಚಿತ ಎನ್ನುವುದು ಪಕ್ಷದ ಲೆಕ್ಕಾಚಾರ.

ಏನೇ ಆದರೂ ಈಗ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಭವಿಷ್ಯ ಎಲೆಕ್ಟ್ರಾನಿಕ್‌ ಮತಯಂತ್ರದಲ್ಲಿ ಭದ್ರವಾಗಿದ್ದು, ಕಾಂಗ್ರೆಸ್‌ ಮತ್ತು ಬಿಜೆಪಿ ಮಾಡುತ್ತಿರುವ ಸೋಲು-ಗೆಲುವಿನ ಲೆಕ್ಕಾಚಾರಗಳಿಗೆ ಏ. 13ರಂದು ಉತ್ತರ ಸಿಗಲಿದೆ.

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.