ಕೈ ಹಿಡಿಯಲು ನಾಯಕರ ಕಸರತ್ತು


Team Udayavani, Apr 15, 2017, 3:50 AM IST

14-BIG-2.jpg

ಬೆಂಗಳೂರು: ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆ ಗೆದ್ದ ಹುಮ್ಮಸ್ಸಿ ನಲ್ಲಿರುವ ಕಾಂಗ್ರೆಸ್‌ನಲ್ಲಿ ಈಗ ಮುಂದಿನ ಸಾರ್ವತ್ರಿಕ ಚುನಾವಣೆಗೆ ಪಕ್ಷದ ಚುಕ್ಕಾಣಿ ಹಿಡಿಯುವವರ ನಡುವೆ ಸ್ಪರ್ಧೆ ಶುರುವಾಗಿದೆ.

ಉಪ ಚುನಾವಣೆಯ ಗೆಲುವಿನಿಂದಾಗಿ ಸಿದ್ದರಾಮಯ್ಯ ಅವರಿಗೆ ಕೊಂಚ ಶಕ್ತಿ ಬಂದಿದ್ದು, ತಾನು ಹೇಳಿದವರೇ ಪಕ್ಷದ ಅಧ್ಯಕ್ಷರಾಗಬೇಕು ಎಂದು ಪಟ್ಟು ಹಿಡಿಯಲು ಅವಕಾಶ ಸೃಷ್ಟಿಯಾ ದಂತಾಗಿದೆ. ಆದರೆ, ಎರಡೂ ಉಪ ಚುನಾವಣೆಯ ಗೆಲುವಿನಲ್ಲಿ ತಮ್ಮ ಪಾತ್ರವೂ ಮುಖ್ಯವಾಗಿತ್ತು ಎನ್ನುವುದನ್ನು ಬಿಂಬಿಸಿಕೊಳ್ಳುವ ಪ್ರಯತ್ನವನ್ನೂ ಸಾಕಷ್ಟು ನಾಯಕರು ಮಾಡುತ್ತಿದ್ದಾರೆ. ವಿಶೇಷ ವೆಂದರೆ ಇವರೆಲ್ಲರೂ ಕೆಪಿಸಿಸಿ ಅಧ್ಯಕ್ಷ ಗಾದಿ ಮೇಲೆ ಕಣ್ಣಿಟ್ಟವರೇ.

ನಂಜನಗೂಡಿನಲ್ಲಿ ಶ್ರೀನಿವಾಸ್‌ ಪ್ರಸಾದ್‌ರಂಥ ದಲಿತ ನಾಯಕನನ್ನು ಸೋಲಿಸಲು ತನ್ನ ಪ್ರಯತ್ನ ಮುಖ್ಯವಾಗಿತ್ತು. ರಾಜ್ಯ ಮಟ್ಟದಲ್ಲಿ ಈಗ ತಾನೇ ದಲಿತ ನಾಯಕ ಎಂದು ಪರಮೇಶ್ವರ್‌ ಬಿಂಬಿಸಿ ಕೊಂಡರೆ, ಇವರಿಬ್ಬರಿಗೂ ಪರ್ಯಾಯವಾಗಿ ಈ ಉಪ ಚುನಾವಣೆಯಲ್ಲಿ ತನ್ನ ಕಾರ್ಯತಂತ್ರವೇ ವಕೌìಟ್‌ ಆಗಿದೆ ಎಂದು ಬಿಂಬಿಸಿಕೊಳ್ಳಲು ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಮುಂದಾಗಿದ್ದಾರೆ. ಇದೇ ಲೆಕ್ಕಾಚಾರ ಮುಂದಿಟ್ಟು ಪರಮೇಶ್ವರ್‌ ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಉಳಿಸಿಕೊಳ್ಳಲು ಹಾಗೂ ಡಿ.ಕೆ. ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷ ಪಟ್ಟ ಒಲಿಸಿ ಕೊಳ್ಳಲು ಹೈಕಮಾಂಡ್‌ ಬಾಗಿಲು ತಟ್ಟಿದ್ದಾರೆ.

ಸಿದ್ದು ಲೆಕ್ಕಾಚಾರ ಏನು?: ಉಪ ಚುನಾವಣೆ ಫ‌ಲಿತಾಂಶ ತಾನು ಅಂದುಕೊಂಡಂತೆ ಬಂದಿದ್ದು, ರಾಜ್ಯದಲ್ಲಿ ತನ್ನ ನಾಯಕತ್ವದಲ್ಲಿಯೇ ಮುಂದಿನ ಚುನಾವಣೆ ನಡೆಯಬೇಕು ಎಂಬುದು ಸಿದ್ದ ರಾಮಯ್ಯ ಅವರ ಬಯಕೆ. ಅಲ್ಲದೇ 2018ರ ಚುನಾವಣೆಗೆ ತಾನು ಬಯಸಿದ ಹಾಗೂ ಮಾತುಕೊಟ್ಟಿರುವ ವಿಧಾನ ಪರಿಷತ್‌ ಸದಸ್ಯ ಎಸ್‌.ಆರ್‌. ಪಾಟೀಲ್‌ ಅವರನ್ನು ಅಧ್ಯಕ್ಷರನ್ನಾಗಿ ಮಾಡಬೇಕು ಎಂಬುದು ಅವರ ಉದ್ದೇಶ ಎಂದು ಹೇಳಲಾಗಿದೆ. ಎಸ್‌.ಆರ್‌. ಪಾಟೀಲ್‌ಗೆ ಅಧ್ಯಕ್ಷಗಿರಿ ಕೊಡುವ ಮೂಲಕ ಪ್ರಬಲ ಲಿಂಗಾಯತ ಸಮುದಾಯ ಹಾಗೂ ಉತ್ತರ ಕರ್ನಾಟಕ ಭಾಗಕ್ಕೆ ಪ್ರಾತಿನಿಧ್ಯ ನೀಡಿದಂತಾಗುತ್ತದೆ. ಅದು ಮುಂದಿನ ಚುನಾವಣೆಯಲ್ಲಿ ಪಕ್ಷದ ಗೆಲುವಿನ ಕಾರ್ಯತಂತ್ರ ಹೆಣೆಯಲು ಅನುಕೂಲವಾಗುತ್ತದೆ ಎಂಬ ಲೆಕ್ಕಾಚಾರ ಅವರದು.

ಪರಮೇಶ್ವರ್‌ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿದರೆ, ಪಕ್ಷದಲ್ಲಿ ಪರ್ಯಾಯ ಶಕ್ತಿಯಾಗಿ ಬೆಳೆಯುವ ಲಕ್ಷಣಗಳು ಗೋಚರಿಸುತ್ತಿದ್ದು, ಮುಂದಿನ ಬಾರಿ ದಲಿತ ಕೋಟಾದಲ್ಲಿ ಸಿಎಂ ಸ್ಥಾನಕ್ಕೆ ಪೈಪೋಟಿ ನಡೆಸಬಹುದು. ಹೀಗಾಗಿ ಈಗಲೇ ಅವರನ್ನು ಅಧ್ಯಕ್ಷಗಿರಿಯಿಂದ ಕೆಳಗಿಸಿ ತನಗೆ ಬೇಕಾದವರನ್ನು ಕೂರಿಸುವ ಯೋಜನೆ ರೂಪಿಸಿದ್ದಾರೆ ಎಂದು ಹೇಳಲಾಗಿದೆ.

ಡಿಸಿಎಂ ಹುದ್ದೆಗೆ ಪಟ್ಟು: ಇನ್ನು ಪರಮೇಶ್ವರ್‌ ಅವರು ಮಂತ್ರಿಸ್ಥಾನ ಹೋದರೂ ಚಿಂತೆಯಿಲ್ಲ. ಇದೊಂದು ಚುನಾವಣೆ ತನ್ನ ನೇತೃತ್ವದಲ್ಲಿಯೇ ನಡೆಯಬೇಕು ಎಂದು ಪಟ್ಟು ಹಿಡಿದಿದ್ದಾರೆ. ಶ್ರೀನಿವಾಸ ಪ್ರಸಾದ್‌ ಪಕ್ಷ ತೊರೆದಿರುವುದರಿಂದ ಈ ಸಂದರ್ಭದಲ್ಲಿ ದಲಿತ ನಾಯಕನನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದರೆ ಅದು ಸಮುದಾಯಕ್ಕೆ ತಪ್ಪು ಸಂದೇಶ ಹೋಗುತ್ತದೆ ಎಂಬ ವಾದವನ್ನು ಹೈಕಮಾಂಡ್‌ ಮುಂದೆ ಮಂಡಿಸಲು ತಯಾರಾಗಿದ್ದಾರೆ.

ಈಗಾಗಲೇ ಅಧ್ಯಕ್ಷರಾಗಿ ಆರು ವರ್ಷಗಳು ಕಳೆದಿರುವುದರಿಂದ ಹೈ ಕಮಾಂಡ್‌ ಕುರ್ಚಿ ಬಿಡಲು ಸೂಚನೆ ನೀಡಿದರೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬ ಬೇಡಿಕೆ ಮುಂದಿಡಲು ನಿರ್ಧರಿಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಡಿಸಿಎಂ ಬೇಡಿಕೆಯ ಲೆಕ್ಕಾಚಾರಕ್ಕೆ ಖರ್ಗೆ ಅವರೂ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.

ಡಿ.ಕೆ. ಶಿವಕುಮಾರ್‌ ತಂತ್ರ: ಪರಮೇಶ್ವರ್‌ ಅವರಿಗೆ ಪರ್ಯಾಯ ವಾಗಿ ತಮ್ಮದೇ ಆದ ಲೆಕ್ಕಾಚಾರ ಮತ್ತು ಪ್ರಯತ್ನ ನಡೆಸಿರುವ ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಅಧ್ಯಕ್ಷ ಗಾದಿಗೇರಲು ಯಾವ ತ್ಯಾಗಕ್ಕೂ ಸಿದ್ದ ಎನ್ನುವ ಸಂದೇಶ ರವಾನಿಸಿದ್ದಾರೆ. ಕೇಂದ್ರದ ಮಾಜಿ ಸಚಿವ ಎಸ್‌.ಎಂ. ಕೃಷ್ಣ ಪಕ್ಷ ತೊರೆದಿದ್ದು, ಕಾಂಗ್ರೆಸ್‌ನಲ್ಲಿ ಒಕ್ಕಲಿಗ ಸಮುದಾಯಕ್ಕೆ ನಾಯಕರಿಲ್ಲ ಎಂಬ ಕೊರಗಿದೆ. ಅದನ್ನು ಸರಿದೂಗಿಸಲು ಅಧ್ಯಕ್ಷ ಸ್ಥಾನ ತನಗೇ ನೀಡಬೇಕೆಂಬ ಲೆಕ್ಕಾಚಾರ ಹಾಕಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್‌ಗೆ ಪೈಪೋಟಿ ನೀಡಿ ಪಕ್ಷವನ್ನು ಅಧಿಕಾರಕ್ಕೆ ತರುವ ಸಾಮರ್ಥ್ಯ ತಮಗಿದೆ ಎಂಬುವುದನ್ನು ಹೈ ಕಮಾಂಡ್‌ ನಾಯಕರಿಗೆ ಮನವರಿಕೆ ಮಾಡಿಕೊಡಲು ಮುಂದಾಗಿದ್ದಾರೆ.

ಆದರೆ, ಇವರ ಪ್ರಯತ್ನಕ್ಕೆ ರಾಜ್ಯ ಕಾಂಗ್ರೆಸ್‌ ಹಿರಿಯ ನಾಯಕರ ಬೆಂಬಲ ಸಿಗುತ್ತಿಲ್ಲ ಎನ್ನಲಾಗುತ್ತಿದೆ. ಡಿ.ಕೆ. ಶಿವಕುಮರ್‌ ಕೈ ಪಕ್ಷದ ಸಾರಥ್ಯ ನೀಡಿದರೆ, ಯಾರ ಕೈಗೂ ಸಿಗದಷ್ಟು ಎತ್ತರಕ್ಕೆ ಬೆಳೆಯುತ್ತಾರೆ. ಅವರನ್ನು ನಿಯಂತ್ರಿಸುವುದು ಕಷ್ಟು ಎಂದು ಪಕ್ಷದ ಹಿರಿಯ ನಾಯಕರೇ ಹೈಕಮಾಂಡ್‌ ಕಿವಿಯೂದುತ್ತಿದ್ದಾರೆ ಎನ್ನಲಾಗುತ್ತಿದೆ. ಇದರ ಹೊರತಾಗಿಯೂ ಡಿ.ಕೆ. ಶಿವಕುಮಾರ್‌ ಹೈ ಕಮಾಂಡ್‌ ಮಟ್ಟದಲ್ಲಿ ತಮಗಿರುವ ಪ್ರಭಾವ ಬಳಸಿದ್ದಾರೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.