CONNECT WITH US  

ಸಿಎಂ ಜತೆ ಭಿನ್ನಾಭಿಪ್ರಾಯವಿಲ್ಲ: ಸತೀಶ್‌ ಜಾರಕಿಹೊಳಿ

ಹೊನ್ನಾಳಿ (ದಾವಣಗೆರೆ ಜಿಲ್ಲೆ ): ಸಿಎಂ ಸಿದ್ದರಾಮಯ್ಯ ಹಾಗೂ ತಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಮುಂದಿನ ವಿಧಾನಸಭಾ ಸಾರ್ವತ್ರಿಕ ಚುನಾವಣೆಯನ್ನು ಅವರ ನೇತೃತ್ವದಲ್ಲೇ ಎದುರಿಸಲಾಗುವುದು. ರಾಜ್ಯದಲ್ಲಿ ಕಾಂಗ್ರೆಸ್‌ ಮತ್ತೆ ಅಧಿಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜಕೀಯ ಪಕ್ಷ ಅಂದ ಮೇಲೆ ಸಣ್ಣಪುಟ್ಟ ಗೊಂದಲಗಳಿರುತ್ತವೆ. ಅದನ್ನು ನಿಭಾಯಿಸಲು ಹಾಗೂ ನಿವಾರಿಸಲು ನಮ್ಮ ಪಕ್ಷದ ಮುಖಂಡರು ಸಮರ್ಥರಿದ್ದಾರೆ. ನಾನು ಕಾಂಗ್ರೆಸ್‌ ತೊರೆದು ಯಾವುದೇ ಪಕ್ಷಕ್ಕೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ. ರಾಜ್ಯ ಉಸ್ತುವಾರಿ ದಿಗ್ವಿಜಯ್‌ ಸಿಂಗ್‌ ಬದಲಾವಣೆ ಸಹಜ ಪ್ರಕ್ರಿಯೆ. ಅದಕ್ಕೆ ರಾಜಕೀಯ ಬಣ್ಣ  ಬೇಡ. ಪ್ರತೀ ಎರಡು, ಮೂರು ವರ್ಷಗಳಿಗೊಮ್ಮೆ ಉಸ್ತುವಾರಿಗಳನ್ನು ಬದಲಾಯಿಸುವ ಹೊಣೆ ಕಾಂಗ್ರೆಸ್‌ ಹೈಕಮಾಂಡ್‌ ಮೇಲಿರುವುದರಿಂದ ಸಹಜವಾಗಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿಯಿಂದ ತೆರವುಗೊಳಿಸಿದ್ದಾರೆ. ಇದಕ್ಕೆ ಯಾವುದೇ ಕಾರಣ ಇಲ್ಲ ಎಂದು ಅವರು ತಿಳಿಸಿದ್ದಾರೆ.


Trending videos

Back to Top