CONNECT WITH US  

ಸಚಿವ ಡಿಕೆಶಿಗೆ ಜಾಫ‌ರ್‌ ಶರೀಫ್ ಶಹಬ್ಟಾಸ್‌ಗಿರಿ

ಬೆಂಗಳೂರು: ಗುಂಡ್ಲುಪೇಟೆ ಹಾಗೂ ನಂಜನಗೂಡು ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದ್ದಕ್ಕೆ
ಹಿರಿಯ ನಾಯಕ ಜಾಫ‌ರ್‌ ಶರೀಫ್ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದ್ದು, ಸಚಿವ ಡಿ.ಕೆ.ಶಿವಕುಮಾರ್‌ ಬಗ್ಗೆ ವಿಶೇಷ ಮೆಚ್ಚುಗೆಯ ಮಾತನಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಆಕಾಂಕ್ಷಿಯೂ ಆಗಿರುವ ಡಿ.ಕೆ.ಶಿವಕುಮಾರ್‌ಗೆ ಜಾಫ‌ರ್‌ ಶರೀಫ್ ವಿಶೇಷ ಶಹಬ್ಟಾಸ್‌ಗಿರಿ ನೀಡಿರುವುದು ರಾಜಕೀಯ ವಲಯಗಳಲ್ಲಿ ಕುತೂಹಲ ಮೂಡಿಸಿದೆ. ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಯಾವುದೇ ಚುನಾವಣೆ ಆಗಿರಲಿ ಸದಾ ಕ್ರಿಯಾಶೀಲ, ಸ್ಪರ್ಧಾ ಮನೋಭಾವದಲ್ಲಿರುತ್ತಾರೆ ಎಂದು ಪತ್ರದಲ್ಲಿ ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ.

ಪತ್ರದಲ್ಲಿ ಏನಿದೆ?: ಆತ್ಮೀಯ ಸಿದ್ದರಾಮಯ್ಯನವರೇ, ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಜಯಸಾಧಿಸಿದ್ದಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ವಿಶೇಷವಾಗಿ
ಉತ್ತರಪ್ರದೇಶ ಹಾಗೂ ಉತ್ತರಾಖಂಡ, ಅಸ್ಸಾಂ ಸೇರಿ ಕೆಲವು ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾದ ಸಂದರ್ಭದಲ್ಲೇ ಪಕ್ಷಕ್ಕೆ ಎರಡು ಕ್ಷೇತ್ರಗಳಲ್ಲಿ ಲಭಿಸಿದ ವಿಜಯ ಒಂದಷ್ಟು ನಿರಾಳ ತರಿಸಿದೆ. ಬಡವರ್ಗದ ಪರ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳು ಕೈ ಹಿಡಿದಿವೆ. ಜತೆಗೆ ಎರಡೂ ಕ್ಷೇತ್ರಗಳ ಬಗ್ಗೆ ನೀವು ವೈಯಕ್ತಿಕವಾಗಿ ಆಸಕ್ತಿ ವಹಿಸಿದ್ದು ಗೆಲುವಿಗೆ ಕಾರಣವಾಗಿದೆ. ನಾನು ನಿಮಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌, ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಮತ್ತು ಎಲ್ಲ ಕಾಂಗ್ರೆಸಿನ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ.

ವಿಶೇಷವಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಯಾಕೆಂದರೆ ಯಾವುದೇ ಚುನಾವಣೆ ಇರಲಿ ಸದಾ ಕ್ರಿಯಾಶೀಲ ಹಾಗೂ ಸ್ಪರ್ಧಾ ಮನೋಭಾವದಲ್ಲಿ ಕೆಲಸ ಮಾಡುತ್ತಾರೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಜಯಗಳಿಸಿರುವ ಇಬ್ಬರಿಗೂ ನನ್ನ ಅಭಿನಂದನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಪತ್ರದ ಪ್ರತಿಗಳನ್ನು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌, ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌, ಇಂಧನ ಸಚಿವ
ಡಿ.ಕೆ.ಶಿವಕುಮಾರ್‌ ಅವರಿಗೂ ಕಳುಹಿಸಿದ್ದಾರೆ.

Trending videos

Back to Top