ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿಚಾರಣೆ


Team Udayavani, May 19, 2017, 3:45 AM IST

170518kpn93.jpg

ಬೆಂಗಳೂರು: ಜಂತಕಲ್‌ ಮೈನಿಂಗ್‌ ಕಂಪನಿಗೆ ಅಕ್ರಮವಾಗಿ ಪರವಾನಗಿ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಶೇಷ ತನಿಖಾ ದಳದ ಮುಂದೆ ಗುರುವಾರ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿಚಾರಣೆಗೆ ಹಾಜರಾದರು.

ಬೆಂಗಳೂರಿನ ಹೆಬ್ಟಾಳದಲ್ಲಿರುವ ಲೋಕಾಯುಕ್ತ ವಿಶೇಷ ತನಿಖಾ ದಳದ ಕಚೇರಿಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ವಿಚಾರಣೆ ನಡೆಸಿದ ಅಧಿಕಾರಿಗಳು 60 ಪ್ರಶ್ನೆಗಳಿಗೆ ಉತ್ತರ ಪಡೆದರು.

ವಿಚಾರಣೆ ವೇಳೆ ಕುಮಾರಸ್ವಾಮಿ ಅವರು ಅಧಿಕಾರಿಗಳು ಕೇಳಿದ ಎಲ್ಲ ಪ್ರಶ್ನೆಗಳಿಗೂ ಸಮಾಧಾನದಿಂದಲೇ ಉತ್ತರ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮತ್ತೂಮ್ಮೆ ವಿಚಾರಣೆ ಅಗತ್ಯವಾದರೆ ತಮಗೆ ಮೂರು ದಿನ ಮುಂಚೆ ನೋಟಿಸ್‌ ಕೊಡಬೇಕು ಎಂದು ಇದೇ ಸಂದರ್ಭದಲ್ಲಿ ಎಚ್‌.ಡಿ.ಕುಮಾರಸ್ವಾಮಿಯವರು ಅಧಿಕಾರಿಗಳಿಗೆ ಹೇಳಿದರು. ಮಧ್ಯಾಹ್ನ 12 ಗಂಟೆ ವೇಳಗೆ ಎಸ್‌ಐಟಿ ಕಚೇರಿಗೆ ಆಗಮಿಸಿದ ಕುಮಾರಸ್ವಾಮಿ ಮಧ್ಯಾಹ್ನ 1.50 ಕ್ಕೆ ನಿರ್ಗಮಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಇಲಾಖೆ ಕಾರ್ಯದರ್ಶಿ ಗಂಗಾರಾಮ್‌ ಬಡೇರಿಯಾ ಅವರನ್ನು ಈಗಾಗಲೇ ಬಂಧಿಸಿ, ವಿಚಾರಣೆಗೊಳಪಡಿಸಲಾಗಿದೆ. ಈ ವೇಳೆ ಅಂದಿನ ಮುಖ್ಯಮಂತ್ರಿಗಳಾದ ಎಚ್‌.ಡಿ. ಕುಮಾರಸ್ವಾಮಿ ಅವರ ಒತ್ತಡಕ್ಕೆ ಮಣಿದು ಅವರ ಮೌಖೀಕ ಸೂಚನೆ ಮೇರೆಗೆ ಪರವಾನಗಿ ನೀಡಿರುವುದಾಗಿ ಹೇಳಿಕೆ ನೀಡಿದ್ದರು. ಅಲ್ಲದೇ ಇದನ್ನು ಕಡತದಲ್ಲೂ ಉಲ್ಲೇಖೀಸಿದ್ದರು. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರನ್ನು ವಿಚಾರಣೆ ನಡೆಸಲಾಗಿದೆ ಎಂದು ಎಸ್‌ಐಟಿ ಅಧಿಕಾರಿಗಳು ಸ್ಪಷ್ಟಪಡಿಸಿದರು.

ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ  ಅವರನ್ನು ಹೊರತು ಪಡಿಸಿ, ಇತರ ಎಲ್ಲರನ್ನು ವಿಚಾರಣೆ ನಡೆಸಿ ಮೂರು ತಿಂಗಳ ಒಳಗೆ ವರದಿ ನೀಡುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಸದ್ಯ 3 ಮಂದಿಯನ್ನು ಮಾತ್ರ ವಿಚಾರಣೆಗೆ ಕರೆಸಲಾಗಿದೆ. ಅಗತ್ಯ ಬಿದ್ದರೆ ಇನ್ನುಳಿದ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡುತ್ತೇವೆ ಎಂದು ತಿಳಿಸಿದರು.

ಯಾವುದೇ ಭೀತಿಯಿಲ್ಲ:
ವಿಚಾರಣೆ ನಂತರ ಸುದ್ದಿಗಾರರ ಜತೆ ಮಾತನಾಡಿದ ಎಚ್‌.ಡಿ.ಕುಮಾರಸ್ವಾಮಿ, ಎಸ್‌ಐಟಿ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡಿದ್ದೇನೆ. ಏನು ಪ್ರಶ್ನೆ ಕೇಳಿದ್ದಾರೆ? ನಾನು ಏನು ಹೇಳಿದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ. ಮತ್ತೆ ವಿಚಾರಣೆ ಅಗತ್ಯವಿದ್ದಲ್ಲಿ ಮೂರು ದಿನಗಳ ಮೊದಲೇ ನೋಟಿಸ್‌ ನೀಡುವಂತೆ ಹೇಳಿದ್ದೇನೆ. ಕೇವಲ ಜಂತಕಲ್‌ ಮೈನಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತ್ರ ವಿಚಾರಣೆ ನಡೆಯಿತು. ಕೆಲವರು ನನಗೆ ಬಂಧನ ಭೀತಿ ಎಂದು ಹೇಳುತ್ತಿದ್ದಾರೆ. ಅಂತಹ ಯಾವುದೇ ಭೀತಿ ನಮಗಿಲ್ಲ ಎಂದು ಹೇಳಿದರು.

ಬಡೇರಿಯಾ ಮತ್ತೆ ಪೊಲೀಸ್‌ ವಶಕ್ಕೆ
ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಹಿರಿಯ ಐಎಎಸ್‌ ಅಧಿಕಾರಿ ಗಂಗಾರಾಮ್‌ ಬಡೇರಿಯಾ ಅವರನ್ನು ಮೇ20ರವರೆಗೆ ಮತ್ತೆ ಪೊಲೀಸ್‌ ವಶಕ್ಕೆ ಪಡೆಯಲಾಗಿದೆ. ಮೇ 18ರವರೆಗೆ ಪೊಲೀಸ್‌ ವಶಕ್ಕೆ ಪಡೆಯಲಾಗಿತ್ತು. ಆದರೆ, ಈ ಸಂದರ್ಭದಲ್ಲಿ ಗಂಗಾರಾಮ್‌ ಬಡೇರಿಯಾ ಅವರಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಎರಡು ದಿನಗಳ ವಿಚಾರಣೆ ನಡೆಸಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಮತ್ತೆ ಪೊಲೀಸ್‌ ವಶಕ್ಕೆ ಪಡೆಯಲಾಗಿದೆ.

ಟಾಪ್ ನ್ಯೂಸ್

love birds

Married ಮುಸ್ಲಿಮರಿಗೆ ಲಿವ್‌ ಇನ್‌ ಸಂಬಂಧ ಹಕ್ಕು ಇಲ್ಲ: ಹೈಕೋರ್ಟ್‌

1-w-eeq

Congress ಮತ್ತೊಬ್ಬ ನಾಯಕನ ವಿವಾದ;ಭಾರತೀಯರು ನಿಗ್ರೋ!

1-wewewe

Kerala ದೇಗುಲಗಳಲ್ಲಿ ವಿಷಕಾರಿ ಅರಳಿ ಹೂಗಳ ಬಳಕೆಗೆ ನಿರ್ಬಂಧ

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

1-wqeeqw

K. Vasantha Bangera; ಬೆಳ್ತಂಗಡಿಯ ಬಂಗಾರ ಕೇದೆಯ ಮಣ್ಣಲ್ಲಿ ಲೀನ; ಸಕಲ ಸರಕಾರಿ ಗೌರವ

1-qwewqwqe

IPL;ಪಂಜಾಬ್ ವಿರುದ್ಧ 60 ರನ್ ಗಳ ಗೆಲುವು ಸಾಧಿಸಿದ ಆರ್ ಸಿಬಿ: ಪ್ಲೇ ಆಫ್ ಆಸೆ ಜೀವಂತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: 12ರಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

Rain: 12ರಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

32

Arrested: ಸಂತ್ರಸ್ತೆ ಅಪಹರಣ ಪ್ರಕರಣ: ಮತ್ತೆ ಐವರ ಬಂಧನ

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

1-wqeeqw

K. Vasantha Bangera; ಬೆಳ್ತಂಗಡಿಯ ಬಂಗಾರ ಕೇದೆಯ ಮಣ್ಣಲ್ಲಿ ಲೀನ; ಸಕಲ ಸರಕಾರಿ ಗೌರವ

suicide

Heatstroke; ಬಸವಕಲ್ಯಾಣದಲ್ಲಿ ಬಿಸಿಲಿನ ಝಳಕ್ಕೆ ಕಾರ್ಮಿಕ‌ ಸಾವು‌?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Rain: 12ರಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

Rain: 12ರಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

love birds

Married ಮುಸ್ಲಿಮರಿಗೆ ಲಿವ್‌ ಇನ್‌ ಸಂಬಂಧ ಹಕ್ಕು ಇಲ್ಲ: ಹೈಕೋರ್ಟ್‌

1-w-eeq

Congress ಮತ್ತೊಬ್ಬ ನಾಯಕನ ವಿವಾದ;ಭಾರತೀಯರು ನಿಗ್ರೋ!

32

Arrested: ಸಂತ್ರಸ್ತೆ ಅಪಹರಣ ಪ್ರಕರಣ: ಮತ್ತೆ ಐವರ ಬಂಧನ

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.