ವಸತಿ ಶಾಲೆ ಮಾದರಿಯಲ್ಲಿ “ವಸತಿ ಪದವಿ ಕಾಲೇಜು’ ಶಿಕ್ಷಣ

Team Udayavani, Jun 4, 2017, 3:45 AM IST

Ban04061703Medn-New.jpg

ಬೆಂಗಳೂರು: ರಾಜ್ಯದಲ್ಲಿ ಪಿಯುಸಿವರೆಗೂ ವಸತಿ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿಗಳಿಗೆ ಇದು ಸಿಹಿ ಸುದ್ದಿ. ಕಾರಣ ಇಷ್ಟೆ, ಇನ್ಮುಂದೆ ಪದವಿಯಲ್ಲಿಯೂ “ವಸತಿ ಕಾಲೇಜು’ ವ್ಯವಸ್ಥೆಯಲ್ಲಿ ವಿದ್ಯಾಭ್ಯಾಸ ಪಡೆಯುವ ಭಾಗ್ಯ ದೊರೆಯಲಿದೆ.

ಈ ವರ್ಷದಿಂದಲೇ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಾದರಿಯಲ್ಲಿಯೇ ಉನ್ನತ ಶಿಕ್ಷಣ ಅಧ್ಯಯನಕ್ಕಾಗಿ ಸರಕಾರ ಹೊಸದಾಗಿ “ವಸತಿಯುತ ಪದವಿ ಕಾಲೇಜು’ ಆರಂಭಕ್ಕೆ  ನಿರ್ಧರಿಸಿದೆ. ಬರುವ ತಿಂಗಳು ಜುಲೈನಲ್ಲಿ 16 ವಸತಿ ಸಹಿತ ಪದವಿ ಕಾಲೇಜುಗಳು ತಲೆಯೆತ್ತಲಿವೆ.

ರಾಜ್ಯದ ಹಿಂದುಳಿದ ಜಿಲ್ಲೆಗಳಲ್ಲಿ ಈ ಹೊಸ ಕಾಲೇಜುಗಳ ಸ್ಥಾಪನೆ ಮಾಡಲು ಸರಕಾರ ತೀರ್ಮಾನಿಸಿದ್ದು  ಬಿಎ, ಬಿಎಸ್ಸಿ ಮತ್ತು ಬಿಕಾಂ ತರಗತಿಗಳನ್ನ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯಬಹುದಾಗಿದೆ. ಪ್ರತಿ ಕಾಲೇಜಿಗೆ 20ರಿಂದ 25 ಕೋಟಿ ರೂಪಾಯಿ ವೆಚ್ಚದಲ್ಲಿ ಸೌಲಭ್ಯ ಒದಗಿಸಲಾಗುತ್ತಿದೆ.

ಯಾಕೆ ಈ ತೀರ್ಮಾನ ?
ದೇಶದಲ್ಲಿ ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ಶೇಕಡಾ 24 ರಷ್ಟಿದ್ದು, ಕರ್ನಾಟಕದಲ್ಲಿ ಈ ಪ್ರಮಾಣ ಶೇಕಡಾ 27 ರಷ್ಟಿದೆ. ಆದರೆ, ಹೈದರಾಬಾದ್‌ ಕರ್ನಾಟಕದ ಕಲಬುರಗಿ ಜಿಲ್ಲೆ ಹೊರತು ಪಡಿಸಿ, ಐದು ಜಿಲ್ಲೆಗಳು ಸೇರಿದಂತೆ ರಾಜ್ಯದ 16 ಜಿಲ್ಲೆಗಳಲ್ಲಿ ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಇದೆ. ಈ ಕುರಿತು ರಾಜ್ಯ ಉನ್ನತ ಶಿಕ್ಷಣ ಇಲಾಖೆ ಬಳ್ಳಾರಿ ವಿಶ್ವ ವಿದ್ಯಾಲಯದ ಕುಲಪತಿಯಿಂದ ಸಮೀಕ್ಷೆ ನಡೆಸಿದ್ದು, ಯಾದಗಿರಿ ಜಿಲ್ಲೆಯಲ್ಲಿ ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ಶೇ.4ಕ್ಕಿಂತಲೂ ಕಡಿಮೆ ಇದೆ.

ಹೈದರಾಬಾದ್‌ ಕರ್ನಾಟಕದ ಯಾದಗಿರಿ, ರಾಯಚೂರು,ಬಳ್ಳಾರಿ, ಕೊಪ್ಪಳ ಹಾಗೂ ಬೀದರ್‌ ಜಿಲ್ಲೆಗಳು, ಅದರ ಹೊರತಾಗಿ ವಿಜಯಪುರ, ಹಾವೇರಿ,  ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಕೊಡಗು,  ಚಿಕ್ಕಬಳ್ಳಾಪುರ, ಮಂಡ್ಯ, ಕೋಲಾರ, ಉತ್ತರ ಕನ್ನಡ, ಗದಗ ಹಾಗೂ ಚಾಮರಾಜನಗರ ಸೇರಿ ಇತರೆ ಜಿಲ್ಲೆಗಳಲ್ಲಿ ದೇಶದ ಪ್ರತಿಶತ ಉನ್ನತ ಶಿಕ್ಷಣ ಪಡೆಯುವವರ ಪ್ರಮಾಣಕ್ಕಿಂತ ಕಡಿಮೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಜಿಲ್ಲೆಗಳಲ್ಲಿ ಉನ್ನತ ಶಿಕ್ಷಣ ಪಡೆಯುವವರ ಪ್ರಮಾಣ ಹೆಚ್ಚಿಸಲು ಈ ತೀರ್ಮಾನ ತೆಗೆದುಕೊಂಡಿದೆ.

ರಾಜ್ಯ ಸರ್ಕಾರ ಹೈದರಾಬಾದ್‌ ಕರ್ನಾಟಕದ ಬಳ್ಳಾರಿ ಹೊರತು ಪಡೆಸಿ ಐದು ಜಿಲ್ಲೆಗಳು, ಚಾಮರಾಜನಗರ, ಕೋಲಾರ, ಚಿತ್ರದುರ್ಗ, ಹಾವೇರಿ ಹಾಗೂ ವಿಜಯಪುರ ಜಿಲ್ಲೆಗಳ 10 ಕಡೆಗಳಲ್ಲಿ ವಸತಿ ಪದವಿ ಕಾಲೇಜುಗಳನ್ನು ತೆರೆಯಲಿದೆ. ಇದಲ್ಲದೆ  ಹೈದರಾಬಾದ್‌ ಕರ್ನಾಟಕ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರತ್ಯೇಕವಾಗಿ ಹೈದರಾಬಾದ್‌ ಕರ್ನಾಟಕ ವ್ಯಾಪ್ತಿಯ ಆರು ಜಿಲ್ಲೆಗಳಲ್ಲಿ  ಆರು ವಸತಿ ಸಹಿತ ಪದವಿ ಕಾಲೇಜುಗಳನ್ನು ತೆರೆಯಲು ನಿರ್ಧರಿಸಲಾಗಿದೆ.  ಪ್ರತಿ ಕಾಲೇಜಿಗೂ ಸುಮಾರು 20 ರಿಂದ 25  ಕೋಟಿ ರೂಪಾಯಿ ವೆಚ್ಚವಾಗಲಿದ್ದು, ಇದೇ ಶೈಕ್ಷಣಿಕ ವರ್ಷದಿಂದ ತರಗತಿ ಆರಂಭಿಸಲು ನಿರ್ಧರಿಸಿದೆ.

ಪ್ರತಿ ಕಾಲೇಜು ಸುಮಾರು 10 ಎಕರೆ ಪ್ರದೇಶದಲ್ಲಿ  ಆರಂಭವಾಗಲಿದ್ದು, ಕಾಲೇಜು ಕಟ್ಟಡ, ವಸತಿ ನಿಲಯ, ಗ್ರಂಥಾಲಯ, ಆಟದ ಮೈದಾನ, ಪ್ರಯೋಗಾಲಯ ಸೇರಿ ಎಲ್ಲ ಮೂಲ ಸೌಕರ್ಯಗಳನ್ನು ಕಲ್ಪಿಸಲು ಇಲಾಖೆ ನಿರ್ಧರಿಸಿದೆ. ಪ್ರತಿ ವಸತಿ ಕಾಲೇಜಿನಲ್ಲಿ ಕನಿಷ್ಠ 700 ರಿಂದ ಒಂದು ಸಾವಿರ ವಿದ್ಯಾರ್ಥಿಗಳಿಗೆ ಪ್ರವೇಶ ಹಾಗೂ ವಸತಿ ವ್ಯವಸ್ಥೆ ಕಲ್ಪಿಸುವ ಗುರಿ ಹೊಂದಲಾಗಿದೆ. ಆರಂಭದ ಎರಡು ವರ್ಷ ಕಟ್ಟಡ ಹಾಗೂ ಹಾಸ್ಟೆಲ್‌ ನಿರ್ಮಿಸಲು ಸಮಯಾವಕಾಶ ಬೇಕಿರುವುದರಿಂದ ಎರಡು ವರ್ಷ ಬಾಡಿಗೆ ಕಟ್ಟಡಗಳಲ್ಲಿ ಕಾಲೇಜು ನಡೆಸುವ ನಿರ್ಧಾರಕ್ಕೆ ಬಂದಿದೆ.

ಉನ್ನತ ಶಿಕ್ಷಣ ಇಲಾಖೆ ಈಗಾಗಲೇ ವಸತಿ ಕಾಲೇಜು ಆರಂಭ ಮಾಡುವ ಪ್ರಸ್ತಾವನೆ ಸಿದ್ದ ಪಡಿಸಿದ್ದು, ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದು, ಜುಲೈನಿಂದಲೇ ಕಾಲೇಜುಗಳನ್ನು ಆರಂಭಿಸಲು ಇಲಾಖೆ ತೀರ್ಮಾನಿಸಿದೆ. ವಸತಿ ಕಾಲೇಜ್‌ ಪ್ರವೇಶ ಪಡೆಯಲು ಈಗಿರುವ ಪ್ರವೇಶಾತಿ ನಿಯಮಗಳಂತೆಯೇ ಮೆರಿಟ್‌ ಮತ್ತು ಮೀಸಲಾತಿ ನಿಯಮಗಳ ಅನ್ವಯ ಪ್ರವೇಶ ದೊರೆಯಲಿದೆ. ಆಯಾ ಜಿಲ್ಲೆಗಳು ಒಳಪಡುವ ವಿಶ್ವ ವಿದ್ಯಾಲಯದ ವ್ಯಾಪ್ತಿಗೇ ಈ ಕಾಲೇಜುಗಳು ಒಳಪಡಲಿವೆ.

ದೇಶದಲ್ಲಿ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳ ಪ್ರಮಾಣ ನೋಡಿದರೆ, ನಮ್ಮ ರಾಜ್ಯ ಶೇಕಡಾ 3 ರಷ್ಟು ಮುಂದಿದೆ. ಆದರೆ, ಸುಮಾರು ಅರ್ಧದಷ್ಟು ಜಿಲ್ಲೆಗಳು ರಾಷ್ಟ್ರೀಯ ಸರಾಸರಿಗಿಂತಲೂ ಕಡಿಮೆ ಇವೆ. ಅಂತಹ ಜಿಲ್ಲೆಗಳಲ್ಲಿ ಉನ್ನತ ಶಿಕ್ಷಣ ಪಡೆಯುವವರ ಪ್ರಮಾಣ ಹೆಚ್ಚಿಸಲು, ವಸತಿ ಸಹಿತ ಪದವಿ ಕಾಲೇಜುಗಳನ್ನು ತೆರೆಯಲು ತೀರ್ಮಾನಿಸಿದ್ದೇವೆ. ರಾಜ್ಯದಲ್ಲಿ ಇದು ಮೊದಲ ಪ್ರಯತ್ನವಾಗಿದೆ. ಮುಂದಿನ ಹತ್ತು ವರ್ಷದಲ್ಲಿ ರಾಜ್ಯದಲ್ಲಿ ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ಶೇಕಡಾ 40 ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ.
-ಬಸವರಾಜ್‌ ರಾಯರಡ್ಡಿ , ಉನ್ನತ ಶಿಕ್ಷಣ ಸಚಿವ.

ಉನ್ನತ ಶಿಕ್ಷಣ ಪಡೆಯುವ ಜಿಲ್ಲೆಗಳ ಸರಾಸರಿ
ಯಾದಗಿರಿ         3.42
ಕೊಪ್ಪಳ             11.03
ಚಾಮರಾಜನಗರ    11.66
ಹಾವೇರಿ            15.79
ರಾಯಚೂರು        16.82
ಚಿತ್ರದುರ್ಗ        17.92
ಬೆಂ. ಗ್ರಾಮಾಂತರ    18.78
ಬಳ್ಳಾರಿ            19.83
ಕೊಡಗು            19.98
ಚಿಕ್ಕಮಗಳೂರು        20.46
ಚಿಕ್ಕಬಳ್ಳಾಪುರ        20.64
ಮಂಡ್ಯ            21.83
ಕೋಲಾರ        21.85
ವಿಜಯಪುರ        22.71
ಬೀದರ್‌            22.90
ಉತ್ತರ ಕನ್ನಡ        23.03
ಗದಗ            23.39
ದಾವಣಗೆರೆ        24.05
ಬೆಳಗಾವಿ            24.06
ರಾಮನಗರ        24.80
ಬಾಗಲಕೋಟೆ         25.46
ಹಾಸನ            25.87
ತುಮಕೂರು        28.70
ಶಿವಮೊಗ್ಗ        30.04
ಕಲಬುರಗಿ        32.09
ಧಾರವಾಡ        35.91
ಉಡುಪಿ            45.12
ಬೆಂಗಳೂರು        45.49
ಮೈಸೂರು        47.13
ದಕ್ಷಿಣ ಕನ್ನಡ        69.23

– ಶಂಕರ ಪಾಗೋಜಿ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.