ಗೊಂದಲಗಳ ನಡುವೆ ಆರ್‌ಟಿಇ ಸೀಟು ಹಂಚಿಕೆಗೆ ಸಿದ್ಧತೆ

Team Udayavani, Jul 20, 2017, 5:35 AM IST

RTE-19.gif

ಬೆಂಗಳೂರು: ಕಡ್ಡಾಯ ಶಿಕ್ಷಣ ಹಕ್ಕು (ಆರ್‌ಟಿಇ ) ಅಡಿ ಸೀಟು ಸಿಗುವುದೆಂದು ಕಾದು ಕುಳಿತು ಸೀಟು ಲಭ್ಯವಾಗದ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿ ಒಂದೂವರೆ ತಿಂಗಳು ಕಳೆದ ನಂತರ ಇದೀಗ ನಾಲ್ಕನೇ ಸುತ್ತಿನ ಸೀಟು ಹಂಚಿಕೆಗೆ ಶಿಕ್ಷಣ ಇಲಾಖೆ ಮುಂದಾಗಿದೆ.

ಈ ಮಧ್ಯೆ, ಮೂರನೇ ಸುತ್ತಿನ ಪ್ರಕ್ರಿಯೆ ಮುಗಿದ ನಂತರ ಖಾಲಿ ಉಳಿದಿದ್ದ ಸೀಟುಗಳನ್ನು ಭರ್ತಿ ಮಾಡಿಕೊಂಡಿರುವ ಬಹುತೇಕ ಖಾಸಗಿ ಶಿಕ್ಷಣ ಸಂಸ್ಥೆಗಳು ನಾಲ್ಕನೇ ಸುತ್ತು ಪ್ರವೇಶ ಬೇಡವೇ ಬೇಡ ಎಂದು ವಿರೋಧ ವ್ಯಕ್ತಪಡಿಸುತ್ತಿವೆ.

ಇದರ ನಡುವೆ, ಖಾಸಗಿ ಶಾಲೆಯಲ್ಲಿ ದುಬಾರಿ ಶುಲ್ಕ ಕೊಟ್ಟು ಪಡೆದಿರುವ ಸೀಟಿನಡಿ ಮಗುವಿನ ಶಿಕ್ಷಣ ಮುಂದುವರಿಸುವುದಾ? ಅಥವಾ ನಾಲ್ಕನೇ ಆರ್‌ಟಿಇ ಸುತ್ತಿನಲ್ಲಿ ಸೀಟು ಸಿಕ್ಕರೆ ಅಲ್ಲಿಂದ ಮಗುವನ್ನು ಬಿಡಿಸಿ ಆರ್‌ಟಿಇ ಅಡಿ ಸೇರಿಸುವುದಾ ಎಂಬ ಗೊಂದಲ ಪೋಷಕರದು.

ಕಡ್ಡಾಯ ಶಿಕ್ಷಣ ಹಕ್ಕು (ಆರ್‌ಟಿಇ )ಅಡಿ ಮೂರನೇ ಸುತ್ತಿನ ಸೀಟು ಹಂಚಿಕೆಯಾಗಿ ತಿಂಗಳು ಕಳೆದರೂ, ಎಷ್ಟು ಮಕ್ಕಳು ದಾಖಲಾಗಿದ್ದಾರೆಂಬ ನಿರ್ದಿಷ್ಟ ಮಾಹಿತಿಯೂ ಸಾರ್ವಜನಿಕ ಶಿಕ್ಷಣ ಇಲಾಖೆ ಬಳಿ ಇಲ್ಲ. ಹೀಗಾಗಿ, ಒಟ್ಟಾರೆ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯ ನಾಲ್ಕನೇ ಸುತ್ತಿನ ಸೀಟು ಹಂಚಿಕೆ ಸಂಪೂರ್ಣ ಗೋಜಲುಮಯವಾಗಿದೆ.

ಲಭ್ಯ ಸೀಟು: 2017 18ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿ ಖಾಸಗಿ ಶಾಲೆಯಲ್ಲಿ 1.28 ಲಕ್ಷ ಸೀಟು
ಲಭ್ಯವಿದ್ದು, ಮೊದಲ ಸುತ್ತಿನ ಆನ್‌ಲೈನ್‌ ಲಾಟರಿಯಲ್ಲಿ 86 ಸಾವಿರ ಮಕ್ಕಳು ಸೀಟು ಪಡೆದಿದ್ದರು. ಉಳಿದ 40 ಸಾವಿರ ಸೀಟಿಗೆ ಎರಡನೇ ಸುತ್ತಿನ ಸೀಟು ಹಂಚಿಕೆ ನಡೆದು, 10 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಸೀಟು ಪಡೆದಿದ್ದರು. ಮೂರನೇ ಸುತ್ತಿನ ಸೀಟು ಹಂಚಿಕೆಯನ್ನು ಜಿಲ್ಲಾಧಿಕಾರಿಗಳ ಮೂಲಕ ಜಿಲ್ಲಾ ಹಂತದಲ್ಲೇ ಮಾಡುವ ತೀರ್ಮಾನಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜೂನ್‌ 14ರಂದು ಶಿಕ್ಷಣ ಇಲಾಖೆ ಕಚೇರಿಯಲ್ಲೆ ಆನ್‌ ಲೈನ್‌ ಲಾಟರಿ ಮೂಲಕ ಹಂಚಿಕೆ ಮಾಡಲಾಗಿತ್ತು.

ಮೂರನೇ ಸುತ್ತಿನಲ್ಲಿ 20 ಸಾವಿರಕ್ಕೂ ಅಧಿಕ ಸೀಟುಗೆ 95,898 ಅರ್ಜಿಯನ್ನು ಪರಿಗಣಿಸಲಾಗಿತ್ತು. ಆದರೆ, ಸೀಟು ಹಂಚಿಕೆಯಾಗಿರುವ ವಿದ್ಯಾರ್ಥಿಗಳ ಪೈಕಿ ಎಷ್ಟು ಮಂದಿ ಶಾಲೆಗೆ ದಾಖಲಾಗಿದ್ದಾರೆಂಬ ಸ್ಪಷ್ಟ ಮಾಹಿತಿ ಇನ್ನೂ ಶಿಕ್ಷಣ ಇಲಾಖೆಗೆ ಸಿಕ್ಕಿಲ್ಲ. ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಹಂಚಿಕೆಯಾಗಿರುವ ಮತ್ತು ಹಂಚಿಕೆಯಾಗದೇ ಉಳಿದ ಸೀಟುಗಳ ಮಾಹಿತಿಯನ್ನು ಈಗಷ್ಟೆ ಪಡೆಯುತ್ತಿದ್ದಾರೆ.

ಅರ್ಜಿ ತಿದ್ದುಪಡಿಗೆ ಅವಕಾಶ: ಮೂರನೇ ಸುತ್ತಿನ ಸೀಟು ಹಂಚಿಕೆ ನಂತರ ದಾಖಲಾದ ವಿದ್ಯಾರ್ಥಿಗಳ ಮಾಹಿತಿ ಶಿಕ್ಷಣ ಇಲಾಖೆಗೆ ತಲುಪಿದ ನಂತರ ನಾಲ್ಕನೇ ಸುತ್ತಿನ ಸೀಟು ಹಂಚಿಕೆ ನಡೆಯಲಿದೆ. ಈಗಾಗಲೇ ಅರ್ಜಿ ಸಲ್ಲಿಸಿ, ಸೀಟು ಹಂಚಿಕೆಯಾಗಿದೆ ಇರುವ ಪಾಲಕರು ತಮ್ಮ ಸಮೀಪದ ಶಾಲೆಯಲ್ಲಿ ಆರ್‌ಟಿಇ ಅಡಿ ಸೀಟು ಲಭ್ಯವಿರುವ ಬಗ್ಗೆ www.schooleducation.com ನಲ್ಲಿ ಮಾಹಿತಿ ಪಡೆದು, ಮೂಲ ಅರ್ಜಿಯನ್ನು ತಿದ್ದುಪಡಿ ಮಾಡಿಕೊಳ್ಳಬಹುದು. ಜು.20ರ ತನಕ ಅರ್ಜಿ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.

ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಇಂಥ ನಿರ್ಧಾರಗಳು ಖಾಸಗಿ ಶಾಲೆಯ ವ್ಯವಸ್ಥೆಯನ್ನೇ ಹಾಳು ಮಾಡುತ್ತಿದೆ.
ಕೆಲವರನ್ನು ಓಲೈಸಿಕೊಳ್ಳಲು ನಾಲ್ಕನೇ ಸುತ್ತಿನ ಆರ್‌ಟಿಇ ಸೀಟು ಹಂಚಿಕೆ ಮಾಡುತ್ತಿದ್ದಾರೆ. ಅರ್‌ಟಿಇ ಮಕ್ಕಳಿಗೆ ಬಟ್ಟೆ ಮತ್ತು ಪಠ್ಯಪುಸ್ತಕವನ್ನೇ ಸರಿಯಾಗಿ ಹಂಚಿಕೆ ಮಾಡಿಲ್ಲ. ನಾಲ್ಕನೇ ಸುತ್ತಿನ ಸೀಟು ಹಂಚಿಕೆ ಸರ್ಕಾರದ ತಲೆಕೆಟ್ಟ ನಿರ್ಧಾರ.

  – ಡಿ. ಶಶಿಕುಮಾರ್‌, ಪ್ರಧಾನ ಕಾರ್ಯದರ್ಶಿ, ರಾಜ್ಯ
ಖಾಸಗಿ ಅನುದಾನರಹಿತ ಶಾಲೆಗಳ ಸಂಘಟನೆ

ನಾಲ್ಕನೇ ಸುತ್ತಿನ ಸೀಟು ಹಂಚಿಕೆಗೆ ಬೇಕಾದ ರೀತಿಯಲ್ಲಿ ಅರ್ಜಿ ತಿದ್ದುಪಡಿಗೆ ಅವಕಾಶ ನೀಡಿದ್ದೇವೆ. 
ಉಳಿಕೆಯಾಗಿರುವ ಎಲ್ಲಾ ಸೀಟುಗಳನ್ನು ಹಂಚಿಕೆ ಮಾಡುವ ಮೂಲಕ ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ ಕುಟುಂಬದ ಮಕ್ಕಳ ಶಿಕ್ಷಣಕ್ಕೆ ದಾರಿಯಾಗಲಿದೆ.

– ಬಿ.ಕೆ.ಬಸವರಾಜು, ನಿರ್ದೇಶಕ, ಪ್ರಾಥಮಿಕ ಶಿಕ್ಷಣ

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.