ರೈಗೆ ಗೃಹಖಾತೆ: ಯೋಚನೆ ಮಾಡಿ ತೀರ್ಮಾನ

Team Udayavani, Jul 27, 2017, 7:30 AM IST

CM-800-247.jpg

ಬೆಂಗಳೂರು: ಗೃಹ ಖಾತೆಯನ್ನು ಅರಣ್ಯ ಸಚಿವ ರಮಾನಾಥ ರೈಗೆ ನೀಡುವ ವಿಷಯದಲ್ಲಿ ಅವರೊಂದಿಗೆ ಚರ್ಚಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷ ಹಾಗೂ ಪ್ರತಿಪಕ್ಷಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಯೋಚನೆ ಮಾಡಿ ತೀರ್ಮಾನ ಮಾಡಲು ಮುಂದಾಗಿದ್ದಾರೆ.

ಮಂಗಳವಾರ ರಮಾನಾಥ ರೈ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಗೃಹ ಸಚಿವ ಸ್ಥಾನ ಒಪ್ಪಿಕೊಳ್ಳುವಂತೆ ಸೂಚಿಸಿದ್ದರು. ಅವರ ಸೂಚನೆಯ ಮೇರೆಗೆ ಜವಾಬ್ದಾರಿ ವಹಿಸಿಕೊಳ್ಳಲು ರಮಾನಾಥ ರೈ ಕೂಡ ಒಪ್ಪಿಕೊಂಡಿದ್ದರು. ಅಲ್ಲದೇ ಮುಖ್ಯಮಂತ್ರಿ ಭೇಟಿ ನಂತರ ಸ್ವತಃ ರೈ ಅವರೇ ಬೆಳಗ್ಗೆ 10 ಗಂಟೆ ಹೊತ್ತಿಗೆ ಗೃಹ ಇಲಾಖೆ ನೀಡುವ 
ಕುರಿತಾಗಿ ಮಾಧ್ಯಮದವರೆದುರಿಗೆ ಹೇಳಿಕೆ ನೀಡಿ, “ಗೃಹ ಖಾತೆ ನಿಭಾಯಿಸಲು ಸಿದ್ಧ. ಈಗಾಗಲೇ ಹಲವಾರು 
ಖಾತೆಗಳನ್ನು ನಿಭಾಯಿಸಿರುವ ಅನುಭವ ಇದೆ.

ಮುಖ್ಯಮಂತ್ರಿಗಳು ನನ್ನ ಮೇಲೆ ವಿಶ್ವಾಸ ಇಟ್ಟು, ಗೃಹ ಖಾತೆ ನೀಡುವ ಬಗ್ಗೆ ಚರ್ಚೆ ಮಾಡಿರುವುದು ನಿಜ. ಕೋಮು ಗಲಭೆ ವಿಚಾರವಾಗಿ ಬಿಜೆಪಿ ಮುಖಂಡರು ಇಲ್ಲ ಸಲ್ಲದ ಆರೋಪ ಮಾಡಿದ್ದರು. ಸುಳ್ಳನ್ನೇ ಪದೇ ಪದೇ ಹೇಳುವುದು ಬಿಜೆಪಿ ನಾಯಕರ ಜಾಯಮಾನವಾಗಿದೆ’ ಎಂದು ಹೇಳಿದ್ದರು.

ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ತದ್ವಿರುದ್ದ ಹೇಳಿಕೆ ನೀಡಿದ್ದು, “ರಮಾನಾಥ ರೈ ಅವರನ್ನು ಗೃಹ ಸಚಿವರನ್ನಾಗಿ ಮಾಡುವುದಾಗಿ ನಾವು ಹೇಳಿದ್ವಾ? ಇನ್ನೂ ಮೂರು ಖಾತೆ ತುಂಬಬೇಕಿದೆ. ಮೂವರು ಸಚಿವರನ್ನು ನೇಮಿಸಿದ ಮೇಲೆ ಗೃಹ ಸಚಿವರನ್ನು ನೇಮಕ ಮಾಡುವುದು. ಕೂಸು ಹುಟ್ಟುವ ಮೊದಲೇ ಕುಲಾವಿ ಹಾಕೋದಾ ?’ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಈ ಹೇಳಿಕೆ ನಂತರ ಮಾತು ಬದಲಿಸಿದ ರಮಾನಾಥ ರೈ, “ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಪಕ್ಷ ಕೊಟ್ಟ ಜವಾಬ್ದಾರಿ ನಿಭಾಯಿಸುತ್ತೇನೆ. ಗೃಹ ಖಾತೆ ಯಾರಿಗೆ ಅಂತ ಮುಖ್ಯಮಂತ್ರಿ ನಿರ್ಧರಿಸುತ್ತಾರೆ. ಮುಖ್ಯಮಂತ್ರಿ ಜೊತೆ ಚರ್ಚಿಸಿರುವುದನ್ನೆಲ್ಲ ಹೇಳಲಿಕ್ಕೆ ಆಗುವುದಿಲ್ಲ’ ಎಂದು ತಿಳಿಸಿದರು. ಈ ಮಧ್ಯೆಯೇ ಪ್ರತಿಪಕ್ಷಗಳ ನಾಯಕರು ಹಾಗೂ ಸ್ವತ ಪಕ್ಷದ ಮುಖಂಡರು ಮತ್ತು ಕೆಲವು ಸಚಿವರು ರಮಾನಾಥ ರೈ ಅವರಿಗೆ ಗೃಹ ಖಾತೆ ನೀಡುವ ಕುರಿತು ವಿರೋಧ ವ್ಯಕ್ತಪಡಿಸಿದ್ದರಿಂದ ಮುಖ್ಯಮಂತ್ರಿ ಈ ಬಗ್ಗೆ “ಆಲೋಚಿಸಿ ತೀರ್ಮಾನ’ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ. 

ಕೇವಲ ದಕ್ಷಿಣ ಕನ್ನಡದ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗದ ರಮಾನಾಥ ರೈ ಅವರಿಂದ ಇಡೀ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳುವುದು ಸಾಧ್ಯವಿಲ್ಲ. ಮುಖ್ಯಮಂತ್ರಿಗಳು ಜವಾಬ್ದಾರಿ ಇರುವವರಿಗೆ ಗೃಹ ಖಾತೆ ನೀಡಬೇಕು. 
– ಜಗದೀಶ ಶೆಟ್ಟರ್‌, ಪ್ರತಿಪಕ್ಷ ನಾಯಕ

ಗೃಹಖಾತೆ ರಮಾನಾಥ ರೈಗೆ ನೀಡುವುದು “ಕಳ್ಳನ ಕೈಗೆ ಬೀಗ ಕೊಟ್ಟಂತೆ’ಗೃಹ ಸಚಿವರಾಗಲು ರಮಾನಾಥ ರೈ ಯೋಗ್ಯ ವ್ಯಕ್ತಿಯಲ್ಲ. ಈ ಹಿಂದೆ ಪೊಲೀಸ್‌ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದಲ್ಲದೆ, ಬಂಟ್ವಾಳ ಘಟನೆ ವೇಳೆ ಪಕ್ಷಪಾತಿಯಾಗಿ ನಡೆದುಕೊಂಡಿದ್ದ ಅವರಿಗೆ ಗೃಹ ಖಾತೆ ಕೊಡುವುದು ಜನತೆಯ ದುರ್ದೈವ. ಗೃಹಖಾತೆಗೆ ಮಾಡುವ ಅವಮಾನ.
– ಕೆ.ಎಸ್‌.ಈಶ್ವರಪ್ಪ, ಮೇಲ್ಮನೆ ಪ್ರತಿಪಕ್ಷ ನಾಯಕ

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.