ಕೋಲಾರ : ಭೀಕರ ಅಪಘಾತದಲ್ಲಿ ಮೂವರು ಯುವಕರ ದುರ್ಮರಣ
Team Udayavani, Aug 4, 2017, 11:10 AM IST
ಕೋಲಾರ: ರಾಷ್ಟ್ರೀಯ ಹೆದ್ದಾರಿ 75 ರ ಮಡೇರಹಳ್ಳಿ ಬಳಿ ಗುರುವಾರ ತಡರಾತ್ರಿ ಕಾರ್ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ದಾರುಣವಾಗಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರಿನಿಂದ ಕೋಲಾರಕ್ಕೆ ಬರುತ್ತಿದ್ದ ಐ 20 ಕಾರು ಬಸ್ಗೆ ಮುಖಾಮುಖೀ ಯಾಗಿ ಡಿಕ್ಕಿಯಾಗಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಶ್ರೀಹರಿ (23),ರೋಹನ್(22)ಸುಭಾಷ್ (21)ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಇನ್ನಿಬ್ಬರಾದ ಕಾರ್ತಿಕ್(24)ಮತ್ತು ಬಿಶ್ವಾಸ್ (25) ಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತ ದುರ್ದೈವಿಗಳು ಬರ್ತ್ಡೇ ಪಾರ್ಟಿ ಮುಗಿಸಿ ಮನೆಗಳಿಗೆ ವಾಪಾಸಾಗುತ್ತಿದ್ದರು ಎಂದು ವರದಿಯಾಗಿದೆ.
ಕೋಲಾರ ಗ್ರಾಮಂತರ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್