CONNECT WITH US  
Please Select Your Default Edition         ಕರ್ನಾಟಕ ಆವೃತ್ತಿ    |     ಕರಾವಳಿ ಆವೃತ್ತಿ     |     English Edition

ರಾಯಚೂರು ಕೈ ಬಲಪ್ರದರ್ಶನ; ಬಡವರ ಬಗ್ಗೆ BJPಗೆ ಕಾಳಜಿ ಇಲ್ಲ;ರಾಹುಲ್

ರಾಯಚೂರು:ರೈತ ದುರ್ಬಲನಾದರೆ ದೇಶವೇ ದುರ್ಬಲವಾದಂತೆ. ಆದರೆ ಭಾರತೀಯ ಜನತಾ ಪಕ್ಷ, ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಬಡವರ ಬಗ್ಗೆ ಕಾಳಜಿ ಇಲ್ಲ. ಹಿಂದುಳಿದವರ ಧ್ವನಿ ಕೇವಲ ಕಾಂಗ್ರೆಸ್ ಮಾತ್ರ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದರು.

ಶನಿವಾರ ರಾಯಚೂರಿನಲ್ಲಿ ನಡೆದ ಬೃಹತ್ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿಗೆ ರೈತರ ಬಗ್ಗೆ ಕಾಳಜಿಯೇ ಇಲ್ಲ ಎಂದು ಆರೋಪಿಸಿದರು. ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯನವರು 2ದಿನದಲ್ಲಿಯೇ ರೈತರ ಸಾಲವನ್ನು ಮನ್ನಾ ಮಾಡಿದ್ದರು, ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಯಾಕೆ ಸಾಲ ಮನ್ನಾ ಮಾಡಿಲ್ಲ ಎಂದು ಪ್ರಶ್ನಿಸಿದರು.

ಯುಪಿಎ ಸರ್ಕಾರ ಮೂರೇ ತಿಂಗಳಿನಲ್ಲಿ ಹೈದರಬಾದ್ ಕರ್ನಾಟಕಕ್ಕೆ ಅನುದಾನವನ್ನು ಬಿಡುಗಡೆ ಮಾಡಿದೆ. ಆದರೆ ಬಿಜೆಪಿ ಸರ್ಕಾರ ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಪಕ್ಷ ಕಿತ್ತೊಗೆಯಲು ಅಸಾಧ್ಯ: ಸಿಎಂ

ಬಿಜೆಪಿ ಮಾತೆತ್ತಿದರೆ ಕಾಂಗ್ರೆಸ್ ಮುಕ್ತ ಮಾಡುವ ಹೇಳಿಕೆ ನೀಡುತ್ತಿದೆ. ಆದರೆ ಯಾರಿಂದಲೂ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಯಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.

ನಿಮ್ಮೆಲ್ಲರ ಆಶೀರ್ವಾದದಿಂದ ನಾವು ನುಡಿದಂತೆ ನಡೆದಿದ್ದೇವೆ. ಇನ್ನು 8 ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಹಾಗಾಗಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿಕೊಂಡರು. ಹಿಂದುಳಿದ ವರ್ಗಗಳ ಬಗ್ಗೆ ಮೋದಿ ಸರ್ಕಾರ ಮೊಸಳೆ ಕಣ್ಣೀರು ಹಾಕುತ್ತಿದೆ ಎಂದು ದೂರಿದರು.

Back to Top