CONNECT WITH US  

ಡಿಕೆಶಿ ಪರಮಾಪ್ತ ವರಪ್ರಸಾದ್‌ ರೆಡ್ಡಿ ಬಿಜೆಪಿ ಸೇರ್ಪಡೆ !

ಬೆಂಗಳೂರು : ಸಚಿವ ಡಿ.ಕೆ.ಶಿವಕುಮಾರ್‌ ಅವರ ಪರಮಾಪ್ತ ರಾಗಿದ್ದ ಕಾಂಗ್ರೆಸ್‌ ಮುಖಂಡ ವರಪ್ರಸಾದ್‌ ರೆಡ್ಡಿ ಅವರು ಭಾನುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. 

ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಬೆಂಬಲಿಗರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸಮ್ಮುಖದಲ್ಲಿ  ಬಿಜೆಪಿಗೆ ಸೇರ್ಪಡೆಯಾದರು. 

ವರಪ್ರಸಾದ್‌ ರೆಡ್ಡಿ ಉತ್ತರಳ್ಳಿ ವಾರ್ಡ್‌ನಿಂದ ಬಿಬಿಎಂಪಿ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದರು. 

2015 ರಲ್ಲಿ ವರಪ್ರಾಸಾದ್‌ ರೆಡ್ಡಿ ನಿವಾಸದ ಮೇಲೂ ಐಟಿ ದಾಳಿ ನಡೆದಿತ್ತು. ಆ ವೇಳೆ 1.15 ಕೋಟಿ ರೂಪಾಯಿ ಪತ್ತೆಯಾಗಿತ್ತು. 


Trending videos

Back to Top