13ರಂದು ಪೆಟ್ರೋಲ್‌ ಬಂಕ್‌ಗಳ ಸ್ಥಗಿತ

Team Udayavani, Oct 10, 2017, 10:15 AM IST

10-8.jpg

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ಮಾರಾಟದ ಮೇಲೆ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮಾರ್ಗದರ್ಶಿ ಸೂತ್ರಗಳ ಬಗ್ಗೆ ಯುನೈಟೆಡ್‌ ಪೆಟ್ರೋಲಿಯಂ ಫ್ರಂಟ್‌ ಅಸಮಾಧಾನ ವ್ಯಕ್ತಪಡಿಸಿದ್ದು, ಸರ್ಕಾರದ  ನೀತಿ ಖಂಡಿಸಿ ದೇಶವ್ಯಾಪಿ ಅ.13 ರಂದು ಬಂಕ್‌ಗಳ ಸ್ಥಗಿತಕ್ಕೆ ಮುಂದಾಗಿದೆ. ಅಲ್ಲದೆ ಒಂದು ದಿನದ ಮಟ್ಟಿಗೆ ತೈಲ ಖರೀದಿ ಮತ್ತು ಮಾರಾಟವನ್ನು ಕೂಡ
ಸ್ಥಗಿತಗೊಳಿಸಲು ನಿರ್ಧರಿಸಿದೆ. 

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖೀಲ ಕರ್ನಾಟಕ ಪೆಟ್ರೋಲಿಯಂ ಡೀಲರ್ ಅಸೋಸಿಯೇಷನ್‌ನ ಬೆಂಗಳೂರು ಅಧ್ಯಕ್ಷ ರವೀಂದ್ರನಾಥ್‌, ಕೇಂದ್ರ ಸರ್ಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ತೈಲ ಉತ್ಪನ್ನಗಳ ಮೇಲೆ ಕೇಂದ್ರ ಸರ್ಕಾರ ವಿಧಿಸಿರುವ ಹೊಸ ನಿಯಮಾವಳಿಗಳಿಂದಾಗಿ ಡೀಲರ್‌ಗಳು ದಿನನಿತ್ಯ ಹಿಂಸೆ ಅನುಭವಿಸುವಂತಾಗಿದೆ. ತೈಲಬೆಲೆಯ ದೈನಂದಿನ ಪರಿಷ್ಕರಣೆಯೂ ಕೂಡ ಬಾಲಿಶತನದಿಂದ ಕೂಡಿದೆ. ಬಂಕ್‌ನಲ್ಲಿ ಶೌಚಾಲಯವನ್ನು ಸಾರ್ವಜನಿಕರ ಬಳಕೆಗೂ ಅವಕಾಶ ನೀಡ ಬೇಕೆಂಬ ಆದೇಶ ಹೊರಡಿಸಿ ಒಂದು ವೇಳೆ ಸ್ವಚ್ಛತೆ ಕಾಪಾಡದಿದ್ದರೆ 2 ಲಕ್ಷ ರೂ.ದಂಡ ವಿಧಿಸುವ
ನಿಯಮ ರೂಪಿಸಿದೆ. ಇಂತಹ ದಬ್ಟಾಳಿಕೆ ನೀತಿಯನ್ನು ಕೇಂದ್ರ ಸರ್ಕಾರ ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿದರು.

ಒಂದೇರಾಷ್ಟ್ರ ಒಂದೇ ತೆರಿಗೆ ವ್ಯವಸ್ಥೆ ತೈಲೋತ್ಪನ್ನ ಕ್ಷೇತ್ರಕೂ ಜಾರಿಯಾಗಬೇಕು. ಗ್ರಾಹಕರಿಗೂ ಇಂಧನ ಬೆಲೆಯಲ್ಲಿನ ಏರಿಳಿತದ ಲಾಭ ಸಿಗಬೇಕು. ದೇಶದ ಹಲವು ಕ್ಷೇತ್ರಗಳಲ್ಲಿ ಸುರಕು-ಸೇವಾ ತೆರಿಗೆ ಪದ್ಧತಿ ಜಾರಿಯಲ್ಲಿದ್ದು, ಈ ವ್ಯವಸ್ಥೆ ಇದೀಗ ಪೆಟ್ರೋಲಿಯಂ ಉತ್ವನ್ನಗಳಿಗೂ ಅನ್ವಯವಾಗಬೇಕು. ಗ್ರಾಹಕರ ಅನುಕೂಲಕವಾಗುವ ಜಿಎಸ್ಟಿ ವ್ಯವಸ್ಥೆಯನ್ನು ಪೆಟ್ರೋಲ್‌ ಮತ್ತು ಡೀಸೆಲ್‌ ಮಾರಾಟ ಕ್ಷೇತ್ರಕ್ಕೂ ಜಾರಿಗೆ ತರಲು ಕೇಂದ್ರ ಸರ್ಕಾರ ಏಕೆ ಹಿಂದೇಟು ಹಾಕುತ್ತಿದೆ ಎಂಬುವುದು ತಮಗೆ ಅರ್ಥವಾಗುತ್ತಿಲ್ಲ ಎಂದರು.
ಪೆಟ್ರೋಲಿಯಂ ಇಲಾಖೆ, ಅಧಿಕಾರಿಗಳ ದಿಕ್ಕು ತಪ್ಪಿಸುವ ಕೆಲಸದಲ್ಲಿ ನಿರತವಾಗಿದೆ. ಗ್ರಾಹಕರಿಗೆ ಮನೆ ಇಂಧನವನ್ನು ತಲುಪಿಸುವ ಯೋಜನೆ ರೂಪಿಸಿದ್ದು, ಇದು ಸುರಕ್ಷತಾ ದೃಷ್ಠಿಯಿಂದ ಒಳ್ಳೆಯ ಯೋಜನೆ ಅಲ್ಲ. ಈ ಯೋಜನೆ ಕಾರ್ಯಗತವಾಗುವ ಮೊದಲು ಸರ್ಕಾರ ಇದರ ಸಾಧಕ-ಬಾಧಕಗಳ ಬಗ್ಗೆ ಪರಿಶೀಲನೆ ನಡೆಸಬೇಕಿತ್ತು. ಆದರೆ ಆ ಕೆಲಸವನ್ನು ಸರ್ಕಾರ ಮಾಡಿಲ್ಲ ಎಂದು ಆರೋಪಿಸಿದರು.

ಅಪೂರ್ಣ ಚಂದ್ರ ಕಮಿಟಿಯ ವರದಿ ಜಾರಿ ಸೇರಿದಂತೆ ತಮ್ಮ ಸಂಘಟನೆಯ ಹಲವು ಬೇಡಿಕೆಗಳನ್ನು ಸರ್ಕಾರ ಈಡೇರಿಸಲು ಮುಂದಾಗದಿದ್ದರೆ ಮತ್ತೆ ಅ.27 ರಿಂದ ಅನಿರ್ದಿಷ್ಟ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.