“ಬಿಗ್‌ ಬಾಸ್‌’ ಕಾರ್ಯಕ್ರಮದಲ್ಲಿ ಅನೈತಿಕ ಚಟುವಟಿಕೆ ನಡೆದಿಲ್ಲ

Team Udayavani, Oct 13, 2017, 6:20 AM IST

BIGG-BOSS-SUDEEP-2017.jpg

ಬೆಂಗಳೂರು: “ಬಿಗ್‌ ಬಾಸ್‌’ ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಅನೈತಿಕ ಚಟುವಟಿಕೆಗಳು ನಡೆದಿಲ್ಲ. ನಮಗೂ ಒಂದು ಸಾಮಾಜಿಕ ಜವಾಬ್ದಾರಿಯಿದೆ. ಇಂತಹ ಘಟನೆಗಳು “ಬಿಗ್‌ ಬಾಸ್‌’ ಮನೆಯಲ್ಲಿ ನಡೆದರೆ ನಾನು ಅಲ್ಲಿ ಇರುವುದಿಲ್ಲ. ಜನರ ಪ್ರೀತಿ, ವಿಶ್ವಾಸಕ್ಕಿಂತ ದೊಡ್ಡದು ಬೇರೆ ಏನೂ ಇಲ್ಲ’ ಎಂದು ಸುದೀಪ್‌ ಹೇಳಿದ್ದಾರೆ.

ಕಿರುತೆರೆಯ ಜನಪ್ರಿಯ ಕಾರ್ಯಕ್ರಮವಾದ “ಬಿಗ್‌ ಬಾಸ್‌’ನ ಐದನೇ ಅವತರಣಿಕೆ ಅಕ್ಟೋಬರ್‌ 15ರಿಂದ ಪ್ರಾರಂಭವಾಗಲಿದೆ. ಈ ಕಾರ್ಯಕ್ರಮ ಕುರಿತು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಕಳೆದ ವರ್ಷದ “ಬಿಗ್‌ ಬಾಸ್‌’ನ ನಾಲ್ಕನೆಯ ಸೀಸನ್‌ನಲ್ಲಿ ನಡೆದ ಒಂದು ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಸುದ್ದಿಯಾಗಿದೆ. ಸಿಕ್ರೇಟ್‌ ರೂಂಗೆ ಬಿಟ್ಟು ಬರುವ ಸಂದರ್ಭದಲ್ಲಿ ಚಾನಲ್‌ನ ಬಿಝಿನೆಸ್‌ ಹೆಡ್‌ ಹಾಗೂ ಕಾರ್ಯಕ್ರಮದ ನಿರ್ದೇಶಕ ಪರಮೇಶ್ವರ ಗುಂಡ್ಕಲ್‌ ನಡುವಿನ ದೃಶ್ಯವೊಂದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿತ್ತು. ಈ ಕುರಿತು ಮಾತನಾಡುವ ಸುದೀಪ್‌, “ನನಗೆ ಪರಮೇಶ್‌ ಮತ್ತು ಮಾಳವಿಕಾ ಇಬ್ಬರೂ ಚೆನ್ನಾಗಿ ಗೊತ್ತು. ಮಾಳವಿಕಾ ಅವರು ಕಾರ್ಯಕ್ರಮಕ್ಕೆ ಬಂದ ಸಂದರ್ಭದಲ್ಲಿ ಸಾಕಷ್ಟು ಅಳುಕಿತ್ತು. ಜನ ತಮ್ಮನ್ನು ಹೇಗೆ ಸ್ವೀಕರಿಸುತ್ತಾರೋ ಎಂಬ ಭಯವಿತ್ತು. ಆಗ ಅವರಿಗೆ ಪರಮೇಶ್‌ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಆ ಸಂದರ್ಭದಲ್ಲಿ ಮಾಳವಿಕಾ ಅವರು ಹಗ್‌ ಮಾಡಿ ಮುತ್ತು ಕೊಟ್ಟಿದ್ದಾರೆ. ಇದರಲ್ಲಿ ಯಾವುದೇ ರೀತಿಯ ಅಪಾರ್ಥ ಕಲ್ಪಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಇಡೀ ಕಾರ್ಯಕ್ರಮ ಸ್ಕ್ರಿಪ್ಟೆಡ್‌ ಆಗಿದ್ದರೆ, ಮಾಳವಿಕಾ ಅವರು ಗೆಲ್ಲಬೇಕಿತ್ತು. ಆದರೆ, ಕಳೆದ ಬಾರಿ ಗೆದ್ದಿದ್ದು ಇನ್ನಾéರೋ ಬೇರೆ. ಹಾಗಾಗಿ ಇದೆಲ್ಲ ಸುಳ್ಳು. ಈ ಕುರಿತು ಪರಮೇಶ್‌ ಅವರಿಗೆ ಫೋನ್‌ ಬಂದಿದೆ. ಇಷ್ಟು ದುಡ್ಡು ಕೊಟ್ಟರೆ, ಈ ವಿಡಿಯೋ ಅಪ್‌ಲೋಡ್‌ ಮಾಡುವುದಿಲ್ಲವೆಂದು ಯಾರೋ ಹೆದರಿಸಿದ್ದಾರೆ. ಅವರು ಅದಕ್ಕೆ ಕೇರ್‌ ಮಾಡದ ಕಾರಣ, ವಿಡಿಯೋ ಹೊರಬಂದಿದೆ’ ಎಂದು ಅವರು ತಿಳಿಸಿದರು.

ಶತ್ರು ಒಳಗೇ ಇದ್ದಾರೆ:
ಇದು ಯಾರ ಷಡ್ಯಂತ್ರವೆಂಬ ಸತ್ಯ ಒಂದಲ್ಲ ಒಂದು ದಿನ ಬಂದೇ ಬರುತ್ತದೆ ಎನ್ನುವ ಸುದೀಪ್‌, “ಶತ್ರು ಎಲ್ಲೋ ಇಲ್ಲ. ಒಳಗೇ ಇದ್ದಾರೆ. ಎಷ್ಟು ಜಾಣ್ಮೆಯಿಂದ ಕೆಲಸ ಮಾಡಿದ್ದಾರೆಂದರೆ, ಎಷ್ಟು ಬೇಕೋ ಅಷ್ಟೇ ಬಿಟ್ಟಿದ್ದಾರೆ. ಆ ಕಾರ್ಯಕ್ರಮದಲ್ಲಿ ಸುಮಾರು ಎರಡು ಸಾವಿರ ಜನ ಕೆಲಸ ಮಾಡುತ್ತಾರೆ. ಕೆಲವರಿಗೆ ಮಾತ್ರ ಒಳಗೆ ಹೋಗುವ ಅವಕಾಶವಿದೆ. ಹಾಗಾಗಿ ಒಳಗಿರುವವರು ಮಾತ್ರ ಈ ಕೆಲಸ ಮಾಡುವುದಕ್ಕೆ ಸಾಧ್ಯ. ಒಂದಲ್ಲ ಒಂದು ದಿನ ಆ ಕೆಲಸ ವಿಡಿಯೋ ಅಪ್‌ಲೋಡ್‌ ಮಾಡಿ, ಸುಳ್ಳು ಸುದ್ದಿ ಹಬ್ಬಿಸಿದ್ದು ಯಾರು ಎಂದು ಗೊತ್ತಾಗುತ್ತದೆ’ ಎಂದರು.

ಈ ಬಾರಿ ಸೆಲೆಬ್ರಿಟಿಗಳ ಜತೆಗೆ ಸಾಮಾನ್ಯ ಮನುಷ್ಯರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸುವುದರ ಕುರಿತು ಮಾತನಾಡಿದ ಅವರು, “ಬಹಳಷ್ಟು ಜನರಿಗೆ ಒಂದೊಳ್ಳೆಯ ವೇದಿಕೆ ಸಿಗುವುದಿಲ್ಲ. ಆ ನಿಟ್ಟಿನಲ್ಲಿ ಜನ ಸಾಮಾನ್ಯರಿಗೆ ಇದೊಂದು ಒಳ್ಳೆಯ ವೇದಿಕೆಯಾಗಲಿದೆ’ ಎಂದರು. ಶುಕ್ರವಾರ ಆದರೆ ಬಹಳ ಹಿಂಸೆ. ಏಕೆಂದರೆ, ತಮ್ಮ ನೋವನ್ನು ಹೇಳಿಕೊಳ್ಳುವುದಕ್ಕೆ ಸ್ಪರ್ಧಿಗಳು ಕಾಯುತ್ತಿರುತ್ತಾರೆ. ಅವರನ್ನೆಲ್ಲ ಸಮಾಧಾನ ಮಾಡೋದೇ ದೊಡ್ಡ ಕೆಲಸ. ನಿಜ ಹೇಳಬೇಕೆಂದರೆ, ನನ್ನ ಕಪ್ಪು ಕೂದಲು ಬಿಳಿಯಾಗೋಕೆ ಕಾರಣ “ಬಿಗ್‌ ಬಾಸ್‌’, ಸಿಸಿಎಲ್‌ ಮತ್ತು ನಿರ್ದೇಶಕ ಪ್ರೇಮ್‌’ ಎಂದು ನಗೆ ಚಟಾಕಿ ಹಾರಿಸಿದರು ಸುದೀಪ್‌.

ಜಗತ್ತು ನೋಡುವ ರೀತಿ ಬದಲಾಗಿದೆ
“ಬಿಗ್‌ ಬಾಸ್‌’ ಕಾರ್ಯಕ್ರಮದಿಂದ ಏನು ಕಲಿತಿರಿ ಎಂಬ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, “ಯಾರಿಗೂ ಹೊಡೆಯಬಾರದು, ಸೀಕ್ರೆಟ್‌ ರೂಂ ಹತ್ತಿರ ಹೋಗಬಾರದು’ ಎಂದು ನಗೆಚಟಾಕಿ ಹಾರಿಸಿದರು. “ನಿಜ ಹೇಳಬೇಕೆಂದರೆ, ಈ ಕಾರ್ಯಕ್ರಮ ನಡೆಸಿಕೊಡುವುದಕ್ಕೆ ಪ್ರಾರಂಭಿಸಿದ ಮೇಲೆ ಸಾಕಷ್ಟು ತಾಳ್ಮೆ ಬಂದಿದೆ. ಅಷ್ಟೇ ಅಲ್ಲ, ನಾನು ಜಗತ್ತನ್ನು ನೋಡುವ ರೀತಿ ಬದಲಾಗಿದೆ. ಇದೆಲ್ಲಕ್ಕಿಂತ ಹೆಚ್ಚಾಗಿ ನಾನೊಬ್ಬ ಒಳ್ಳೆಯ ಕೇಳುಗನಾಗುವುದರ ಜೊತೆಗೆ, ಏನೇನು ಮಾಡಬಾರದು ಎಂದು ಅರಿತುಕೊಂಡಿದ್ದೇನೆ. ಒಟ್ಟಾರೆ ನನ್ನ ದೃಷ್ಟಿಕೋನವೇ ಬದಲಾಗಿದೆ’ ಎಂದು ಹೇಳಿದರು.

ಕಲರ್ಸ್‌ ಕನ್ನಡ ಹಾಗೂ ಕಲರ್ಸ್‌ ಸೂಪರ್‌ನ ಬಿಝಿನೆಸ್‌ ಹೆಡ್‌ ಹಾಗೂ “ಬಿಗ್‌ ಬಾಸ್‌’ ನಿರ್ದೇಶಕ ಪರಮೇಶ್ವರ ಗುಂಡ್ಕಲ್‌, ಚಾನಲ್‌ನ ನಾನ್‌-ಫಿಕ್ಷನ್‌ ಹೆಡ್‌ ವೈಷ್ಣವಿ, ಎಂಡೆಮಾಲ್‌ ಶೈನ್‌ ಇಂಡಿಯಾದ ಸಿಒಒ ಅಭಿಷೇಕ್‌ ರೇ ಹಾಜರಿದ್ದರು.

ಪ್ರತಿ ಭಾನುವಾರ ಸುದೀಪ್‌ ಅಡುಗೆ
ಇನ್ನು “ಬಿಗ್‌ ಬಾಸ್‌’ನ ಐದನೆಯ ಅವತರಣಿಕೆ ಅಕ್ಟೋಬರ್‌ 15ರಿಂದ ಕಲರ್ಸ್‌ ಸೂಪರ್‌ ಚಾನಲ್‌ನಲ್ಲಿ ಪ್ರಾರಂಭವಾಗಲಿದೆ. 16ರಿಂದ ಪ್ರತಿ ರಾತ್ರಿ 8ರಿಂದ 9ರವರೆಗೂ ಪ್ರಸಾರವಾಗಲಿದೆ. ಈ ಬಾರಿ ಒಟ್ಟು 17 ಸ್ಪರ್ಧಿಗಳಿದ್ದು, ಆ ಪೈಕಿ 11 ಜನ ಸೆಲೆಬ್ರಿಟಿಗಳಿದ್ದರೆ, ಆರು ಸಾಮಾನ್ಯ ಜನರಿರುತ್ತಾರೆ. ಈ ಆರು ಜನಸಾಮಾನ್ಯರನ್ನು ಸುಮಾರು 40 ಸಾವಿರ ಜನರ ಪೈಕಿ ಆಯ್ಕೆ ಮಾಡಲಾಗಿದೆ. ಈ ಬಾರಿಯ ಕಾರ್ಯಕ್ರಮದ ವಿಶೇಷತೆಯೆಂದರೆ, ಸುದೀಪ್‌ ಪ್ರತಿ ಭಾನುವಾರ ರಾತ್ರಿ ಅಡುಗೆ ಮಾಡಿ ಬಡಿಸುತ್ತಾರೆ.

ಟಾಪ್ ನ್ಯೂಸ್

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.