ಸಹಸ್ರಾರು ಭಕ್ತರ ನಡುವೆ ಇಂದು ತಲಕಾವೇರಿಯಲ್ಲಿ ತೀರ್ಥೋದ್ಭವ
Team Udayavani, Oct 17, 2017, 9:53 AM IST
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಮಂಗಳವಾರ ಮಧ್ಯಾಹ್ನ 12.33ಕ್ಕೆ ತೀರ್ಥೋದ್ಭವ ಸಂಭವಿಸಲಿದ್ದು, ಇದನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಕಾತರರಾಗಿದ್ದಾರೆ.
ತಲಕಾವೇರಿ ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಊಟೋಪಚಾರ ಕಲ್ಪಿಸಲು ವ್ಯವಸ್ಥೆ ಮಾಡಲಾಗಿದೆ. ಮಡಿಕೇರಿ-ಭಾಗಮಂಡಲ-ತಲಕಾವೇರಿಗೆ ಹೋಗಿ ಬರಲು ಅಗತ್ಯ ಬಸ್ ಸೌಲಭ್ಯ, ತಲಕಾವೇರಿಯಲ್ಲಿ ತೀರ್ಥ ಪಡೆದುಕೊಳ್ಳುವಂತಾಗಲು ಏಕಮುಖವಾಗಿ ಭಕ್ತಾದಿಗಳು ಹೋಗಲು ಅಗತ್ಯ ಬ್ಯಾರಿಕೇಡ್ಗಳ ನಿರ್ಮಾಣ, ತಾತ್ಕಾಲಿಕ ಶೌಚಾಲಯ ಹಾಗೂ ಕುಡಿಯುವ ನೀರು ವ್ಯವಸ್ಥೆ ಮತ್ತಿತರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಪಿಂಡ ಪ್ರಧಾನ ಕಾರ್ಯಗಳಿಗೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಸಿಸಿಟಿವಿ ಅಳವಡಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಾವೇರಿ ಮಾತೆ ಕುರಿತು ಭಕ್ತಿ ಗೀತಾಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ. ಭಾಗಮಂಡಲ ಸುತ್ತಮುತ್ತ 10 ಕಿ.ಮೀ.ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ