ಮಲೆ ಮಹದೇಶ್ವರ ರಥೋತ್ಸವ; ಕಾಲ್ತುಳಿತ; ಲಾಠಿ ಚಾರ್ಜ್
Team Udayavani, Oct 20, 2017, 1:44 PM IST
ಕೊಳ್ಳೇಗಾಲ: ಇತಿಹಾಸ ಪ್ರಸಿದ್ದ ಮಲೆ ಮಹದೇಶ್ವರ ಸನ್ನಿಧಿಯಲ್ಲಿ ಶುಕ್ರವಾರ ಮಹಾ ರಥೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ರಾಜ್ಯ ಸೇರಿದಂತೆ ಹೊರ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಆಗಮಿಸಿದ್ದಾರೆ.
3 ದಿನಗಳಿಂದ ನಡೆಯುತ್ತಿರುವ ಜಾತ್ರೆಯ ಆಚರಣೆಯ ವೇಳೆ ನೂಕುನುಗ್ಗಲು ಉಂಟಾಗಿದ್ದು , ಭಕ್ತರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಭ್ರದತೆಗೆ ನಿಯೋಜನೆಗೊಂಡಿದ್ದ ಸಿಬಂದಿಗಳು ಸೇರಿ ಕೆಲವರು ನೂಕು ನುಗ್ಗಲಿನಲ್ಲಿ ಸಣ್ಣಪುಟ್ಟ ಗಾಯಗಳಿಗೆ ಒಳಗಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ತಮಿಳು ನಾಡು, ಕೇರಳ ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತರು ಆಗಮಿಸಿ ರಥೋತ್ಸವವನ್ನು ಕಣ್ತುಂಬಿಸಿಕೊಂಡಿದ್ದಾರೆ. ಸಣ್ಣ ಪುಟ್ಟ ಘಟನೆಗಳ ಹೊರತಾಗಿಯೂ ರಥೋತ್ಸವ ಸಾಂಗವಾಗಿ ಶುಕ್ರವಾರ ಬೆಳಗ್ಗೆ ನೆರವೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್