CONNECT WITH US  

ಆಹ್ವಾನ ಪತ್ರಿಕೆಯಲ್ಲಿ ಕೇಂದ್ರ ಸಚಿವ ಹೆಗಡೆ ಹೆಸರು ಹಾಕ್ತೇವೆ!

ಟಿಪ್ಪು ಜಯಂತಿ ವಿವಾದದ ಇನ್ನೊಂದು ಸಮರ!

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಯೋಜಿಸಿರುವ ಟಿಪ್ಪು ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರು ಮುದ್ರಿಸದಂತೆ ಕೇಂದ್ರ ಸಚಿವ ಅನಂತ ಕುಮಾರ್‌ ಹೆಗಡೆ ಸರ್ಕಾರಕ್ಕೆ ಬರೆದಿರುವ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಪ್ರತಿಕ್ರಿಯೆ ನೀಡಿದ್ದು 'ನಾವು ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆಯಲ್ಲಿ ಕೇಂದ್ರ ಸಚಿವರ ಹೆಸರು ಹಾಕುತ್ತೇವೆ. ಬರುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ' ಎಂದಿದ್ದಾರೆ.

ಸುದ್ದಿಗಾರರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸಚಿವ ಹೆಗಡೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. 'ಅನಂತ್‌ ಕುಮಾರ್‌ ಹೆಗಡೆ ಓರ್ವ ಕೇಂದ್ರ ಸಚಿವರಾಗಿ ಆ ರೀತಿ ಮಾತನಾಡುವುದು ಸರಿಯಲ್ಲ' ಎಂದರು. 

'ರಾಜಕೀಯವಾಗಿ ಟಿಪ್ಪು ವನ್ನು ವಿರೋಧ ಮಾಡುವ ಮುಂಚೆ ಸರಿಯಾಗಿ ಓದಿಕೊಳ್ಳಲಿ. ಟಿಪ್ಪು ನಿಜವಾಗಿಯೂ ಮೊದಲ ಸ್ವಾತಂತ್ರ್ಯ ಹೋರಾಟಗಾರ' ಎಂದು ಸಿಎಂ ಹೇಳಿದರು.

ಟಿಪ್ಪು ಜಯಂತಿ ಆಚರಣೆ ವಿವಾದ ಸ್ವರೂಪ ಪಡೆದಿರುವ ವೇಳೆ  ಸಿಎಂ ಹೇಳಿಕೆ ಇನ್ನೊಂದು ಸಮರಕ್ಕೆ ನಾಂದಿಯಾಗುವ ಸಾಧ್ಯತೆಗಳಿವೆ. 

ರಾಜ್ಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅನಂತ್‌ ಕುಮಾರ್‌ ನ.10ರಂದು ಸರ್ಕಾರದಿಂದ ನಡೆಸಲಾಗುತ್ತಿರುವ ಟಿಪ್ಪು ಜಯಂತಿಯ ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಹೆಸರು ಮುದ್ರಿಸುವುದು ಬೇಡ ಎಂದು ಹೇಳಿದ್ದರು. 

Trending videos

Back to Top