ಮುಷ್ಕರಕ್ಕೆ ಮತ್ತೆ ಮೂವರು ಬಲಿ


Team Udayavani, Nov 14, 2017, 6:00 AM IST

171113kpn96.jpg

ಬೆಂಗಳೂರು/ಬೆಳಗಾವಿ: ರಾಜ್ಯ ಸರ್ಕಾರ ಮತ್ತು ಖಾಸಗಿ ವೈದ್ಯರ ಸಂಘಟನೆಯ ಮುಸುಕಿನ ಗುದ್ದಾಟದಿಂದಾಗಿ ಸೋಮವಾರ ಮೂವರು ರೋಗಿಗಳು ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ.

ರಾಜ್ಯ ಸರ್ಕಾರದ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ಕಾಯ್ದೆ ವಿರೋಧಿಸಿ ಖಾಸಗಿ ಆಸ್ಪತ್ರೆಗಳ ವೈದ್ಯರು ಬೆಳಗಾವಿ ಚಲೋ ಹಮ್ಮಿಕೊಂಡಿದ್ದರಿಂದ, ರಾಜ್ಯಾದ್ಯಂತ ವೈದ್ಯರ ಅಭಾವ ಕಂಡು ಬಂದಿತು. ಹೀಗಾಗಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದ ಕಾರಣ, ಬಾಗಲಕೋಟೆಯಲ್ಲೇ ಮೂವರು ಮೃತಪಟ್ಟಿದ್ದಾರೆ.

ಈ ಬೆಳವಣಿಗೆಗಳ ನಡುವೆಯೇ ಬೆಳಗಾವಿಯಲ್ಲಿನ ಸುವರ್ಣ ಸೌಧದಲ್ಲಿ ಖಾಸಗಿ ವೈದ್ಯ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಮಾತುಕತೆ ಅಪೂರ್ಣವಾಗಿದ್ದು, ಮಂಗಳವಾರವೂ ಮುಂದುವರಿಯಲಿದೆ. ಈ ಸಂದರ್ಭದಲ್ಲಿ ಮುಷ್ಕರ ವಾಪಸ್‌ ತೆಗೆದುಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ವೈದ್ಯರಲ್ಲಿ ಮನವಿ ಮಾಡಿದ್ದಾರೆ. ಆದರೆ ಸಿಎಂ ಮನವಿ ಬಗ್ಗೆ ವೈದ್ಯರು ಯಾವುದೇ ತೀರ್ಮಾನ ತೆಗೆದುಕೊಳ್ಳದ ಕಾರಣ ಮಂಗಳವಾರವೂ ಪ್ರತಿಭಟನೆ ಮುಂದುವರಿಯಲಿದ್ದು, ವೈದ್ಯರ ಅಭಾವ ಕಾಡುವ ಸಾಧ್ಯತೆ ಇದೆ.

ಮೂವರ ಸಾವು: ರಾಜ್ಯದ 8 ಸಾವಿರಕ್ಕೂ ಹೆಚ್ಚು ವೈದ್ಯರು ಬೆಳಗಾವಿ ಚಲೋಗೆ ತೆರಳಿದ್ದರಿಂದ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಖಾಸಗಿ ಆಸ್ಪತ್ರೆಗಳಲ್ಲಿ ಹೊರರೋಗಿಗಳ  ವಿಭಾಗ ಸೇರಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಲು ವೈದ್ಯರೇ ಇರಲಿಲ್ಲ. ಬಾಗಲಕೋಟೆಯ ಬದಾಮಿಯ ಕೆರೂರು ಪಟ್ಟಣದ ಮಕ್ತಮ್‌ ಹುಸೇನ ಚೂರಗಸ್ತಿ(53), ಮುತ್ತಲಗೇರಿ ಗ್ರಾಮದ ಮಲ್ಲಪ್ಪ ಯಮನಪ್ಪ ನೀರಲಕೇರಿ (68)ಮೃತಪಟ್ಟಿದ್ದಾರೆ.ಹಾಗೆಯೇ   ಮುಧೋಳಿನ ಮಹಾಲಿಂಗಪುರದ ಸುನಂದಾ ಬೆಳಗಾಂವಕರ (50 ) ಅವರೂ ಸಾವನ್ನಪ್ಪಿದ್ದು, ಇದಕ್ಕೆ ವೈದ್ಯರ ಮುಷ್ಕರವೇ ಕಾರಣ ಎಂಬುದು ಖಚಿತವಾಗಿಲ್ಲ. ಈ ಮೂವರೂ ಹೃದಯಾಘಾತಕ್ಕೆ ಒಳಗಾಗಿದ್ದು, ಹತ್ತಿರದ ಖಾಸಗಿ ಆಸ್ಪತ್ರೆಯಲ್ಲಿ ಒಪಿಡಿ ಸೇವೆ ದೊರೆಯದ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯ ಇಲ್ಲದಿದ್ದರಿಂದ ಚಿಕಿತ್ಸೆ ಫ‌ಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಖ್ಯಮಂತ್ರಿಗಳ ಭರವಸೆ: ಹೊಸದಾಗಿ ತರಲು ಉದ್ದೇಶಿಸಲಾಗಿರುವ ವಿಧೇಯಕದಿಂದ ವೈದ್ಯರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಖಾಸಗಿ ವೈದ್ಯರ ಸಂಘಟನೆಗಳ ಮುಖಂಡರೊಂದಿಗೆ ಸಭೆಯಲ್ಲಿ ಭರವಸೆ ನೀಡಿದ್ದಾರೆ. ಅಲ್ಲದೆ, ವಿಧಾನ ಮಂಡಲದ ಅಧಿವೇಶನದಲ್ಲಿ ವಿಧೇಯಕ ಮಂಡಿಸುವ ಮುಂಚೆ ಮತ್ತೂಮ್ಮೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಖಾಸಗಿ ವೈದ್ಯರೊಂದಿಗಿನ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವೈದ್ಯರಿಗೆ ತೊಂದರೆ ಕೊಡುವ ಉದ್ದೇಶ ಸರ್ಕಾರಕ್ಕಿಲ್ಲ. ರೋಗಿಗಳಿಗೆ ಸೂಕ್ತ ಚಿಕಿತ್ಸೆ ಸಿಗಬೇಕು ಎಂಬುದದಷ್ಟೇ ನಮ್ಮ ಉದ್ದೇಶ. ಆದ್ದರಿಂದ ವೈದ್ಯರು ಪ್ರತಿಭಟನೆ ವಾಪಸ್‌ ಪಡೆಯಬೇಕು ಎಂದು ಮನವಿ ಮಾಡಿದರು.

ಅಧಿವೇಶನದಲ್ಲಿ ಸರ್ಕಾರ ಮಂಡಿಸುವ ವಿಧೇಯಕದ ಬಗ್ಗೆ ಯಾವುದೇ ಭಯ ಬೇಡ. ವೈದ್ಯರಿಗೆ ತೊಂದರೆ ಅಥವಾ ಕಿರುಕುಳ ನೀಡಲು ಸರ್ಕಾರ ವಿಧೇಯಕ ರೂಪಿಸಿಲ್ಲ. ಆದರೂ ವಿಧೇಯಕ ಮಂಡನೆಗೂ ಮುಂಚೆ ಆರೋಗ್ಯ ಸಚಿವರು ಮತ್ತು ವೈದ್ಯರ ಸಂಘದ ಪದಾಧಿಕಾರಿಗಳೊಂದಿಗೆ ಮತ್ತೂಂದು ಸುತ್ತಿನ ಸಮಾಲೋಚನೆ ನಡೆಸುತ್ತೇನೆ ಎಂದು ಭರವಸೆ ನೀಡಿದರು.

ತೀರ್ಮಾನವಾಗದ ಜೈಲು ಶಿಕ್ಷೆ: ಖಾಸಗಿ ವೈದ್ಯರು ಆಕ್ಷೇಪ ಎತ್ತಿರುವ ವಿಷಯಗಳನ್ನು ಕೈಬಿಡುವ ಕುರಿತಂತೆ ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಆದರೆ, ತಪ್ಪು ಮಾಡಿದ ವೈದ್ಯರಿಗೆ ಜೈಲು ಶಿಕ್ಷೆ ನೀಡುವ ಕುರಿತಂತೆ ಸ್ಪಷ್ಟ ತೀರ್ಮಾನವಾಗದ ಹಿನ್ನೆಲೆಯಲ್ಲಿ ಸರ್ಕಾರ ಮತ್ತೂಂದು ಸುತ್ತಿನ ಸಭೆ ನಡೆಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಸಭೆ ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧೇಯಕ ಮಂಡನೆಗೂ ಮೊದಲು ಮತ್ತೂಂದು ಸಭೆ ನಡೆಸುವುದಾಗಿ ವೈದ್ಯರಿಗೆ ಹೇಳಿದ್ದೇನೆ. ತಕ್ಷಣ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ್ದೇನೆ ಎಂದು ಹೇಳಿದರು.
ವೈದ್ಯರ ಸಂಘದ ಅಧ್ಯಕ್ಷ ಡಾ.ರವೀಂದ್ರ ಮಾತನಾಡಿ, ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನಮ್ಮೆಲ್ಲ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ. ಕಾರ್ಯಕಾರಿ ಸಮಿತಿಯೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಆಸ್ಪತ್ರೆಗಳು ಖಾಲಿ ಖಾಲಿ
ಬೆಂಗಳೂರಿನ ಮಲ್ಯ, ಮಲ್ಲಿಗೆ, ಕಿಮ್ಸ್‌, ಅಪೋಲೋ, ಫೋರ್ಟಿಸ್‌, ವಿಕ್ರಂ ಸೇರಿ ಬಹುತೇಕ ಖಾಸಗಿ ಆಸ್ಪತ್ರೆಯ ಹೊರ ರೋಗಿ ವಿಭಾಗ(ಒಪಿಡಿ) ಸೇವೆ ಇರಲಿಲ್ಲ. ಜ್ವರ, ಕೆಮ್ಮು, ಶೀತ, ತಲೆನೋವು, ದಿಢೀರ್‌ ಅಸ್ವಸ್ಥಕ್ಕೆ ಖಾಸಗಿ ಆಸ್ಪತ್ರೆಗೆ ಹೋದ ರೋಗಿಗಳು ಒಡಿಪಿ ಸೇವೆ ಇಲ್ಲದೇ ಪರದಾಡಿದರು. ಮೈಸೂರು, ಮಂಗಳೂರು, ಉಡುಪಿ, ಶಿವಮೊಗ್ಗ, ಬೆಳಗಾವಿ, ಧಾರವಾಡ, ದಾವಣಗೆರೆ, ಬಾಗಲಕೋಟೆ, ಬೀದರ್‌ ಹೀಗೆ ರಾಜ್ಯದ ವಿವಿಧ ಜಿಲ್ಲೆಯ ಸುಮಾರು 8 ಸಾವಿರ ಕ್ಲಿನಿಕ್‌ಗಳಲ್ಲಿ  ಸೇವೆ ಇರಲಿಲ್ಲ. ಖಾಸಗಿ ಆಸ್ಪತ್ರೆಯ ಹೊರರೋಗಿಗಳ ವಿಭಾಗ ಮುಚ್ಚಿದ್ದರಿಂದ ನಗರದ ಕೆ.ಸಿ.ಜನರಲ್‌ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆ, ಬೌರಿಂಗ್‌ ಮತ್ತು ಲೇಡಿ ಕರ್ಜನ್‌, ಜಯನಗರ ಸಾರ್ವಜನಿಕ ಆಸ್ಪತ್ರೆ, ವಿವಿಧ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಹೊರರೋಗಿಗಳ ಸಂಖ್ಯೆ ಏರಿಕೆಯಾಗಿದೆ. ಖಾಸಗಿ ವೈದ್ಯರು ಬೆಳಗಾವಿ ಚಲೋ ಮಾಡುತ್ತಿದ್ದಾರೆ ಎಂಬ ಮಾಹಿತಿ ಇಲ್ಲದೇ ಅನೇಕರು ಖಾಸಗಿ ಆಸ್ಪತ್ರೆಯ ಮೆಟ್ಟಿಲಲ್ಲೇ ಕುಳಿತು ವೈದ್ಯರಿಗಾಗಿ ಕಾದು ವಾಪಾಸ್‌ ಮನೆ ಸೇರಿದರು.

ನ.3ರಂದು ನಡೆದ ಖಾಸಗಿ ವೈದ್ಯರ ಸಂಘದ ಮುಷ್ಕರಕ್ಕೆ ವೈದ್ಯರು, ನರ್ಸ್‌ ಹಾಗೂ ಸಿಬ್ಬಂದಿ ವರ್ಗ ಉತ್ತಮ ಸ್ಪಂದನ ವ್ಯಕ್ತಪಡಿಸಿ, ರಾಜ್ಯದ 40 ಸಾವಿರ ಖಾಸಗಿ ಆಸ್ಪತ್ರೆ, ನರ್ಸಿಂಗ್‌ ಹೋಮ್ಸ್‌ಗಳ ಒಪಿಡಿ, ಕ್ಲಿನಿಕ್‌ಗಳು ಮುಚ್ಚಿತ್ತು.  ಸೋಮವಾರ ಕೂಡ ಬಹುತೇಕ ಖಾಸಗಿ ಆಸ್ಪತ್ರೆಗಳ ಹೊರರೋಗಿಗಳ ವಿಭಾಗ ಬಿಕೋ ಎನ್ನುತಿತ್ತು.

ಇಂದೂ ವೈದ್ಯರಿರಲ್ಲ:
ಖಾಸಗಿ ವೈದ್ಯರ ಸಂಘದ ಸದಸ್ಯರೊಂದಿಗೆ ಮುಖ್ಯಮಂತ್ರಿಗಳು ನಡೆಸಿದ  ಮಾತುಕತೆ ವಿಫ‌ಲವಾಗಿದ್ದರಿಂದ, ಪ್ರತಿಭಟನೆ ಮಂಗಳವಾರವೂ ಮುಂದುವರಿಯಲಿದೆ. ಹೀಗಾಗಿ ಮಂಗಳವಾರ ಬಹುತೇಕ ಖಾಸಗಿ  ಆಸ್ಪತ್ರೆಯಲ್ಲಿ ಹೊರರೋಗಿಗಳ ವಿಭಾಗದಲ್ಲಿ ವೈದ್ಯರು ಇರುವುದಿಲ್ಲ. ಪಾಳಿ ವೈದ್ಯರು ಒಳರೋಗಿಗಳಿಗೆ ಚಿಕಿತ್ಸೆ ನೀಡಲಿದ್ದಾರೆ. ಹೀಗಾಗಿ ಮಂಗಳವಾರ ಖಾಸಗಿ ಆಸ್ಪತ್ರೆಗೆ ಹೋಗುವ ರೋಗಿಗಳು ಮುನ್ನೆಚ್ಚರಿಕೆ ವಹಿಸುವುದು ಉತ್ತಮ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.