“ಮಾದಕ ದ್ರವ್ಯ ನಿಯಂತ್ರಣಕ್ಕೆ ಕ್ರಮ’


Team Udayavani, Nov 15, 2017, 7:47 AM IST

15-6.jpg

ವಿಧಾನಪರಿಷತ್ತು: ರಾಜ್ಯವನ್ನು ಮಾದಕ ದ್ರವ್ಯ ಮುಕ್ತವಾಗಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದ್ದು, ಮೂರು ಕಡೆ ಮಾದಕ ದ್ರವ್ಯ ನಿಯಂತ್ರಣ ವಿಶೇಷ ಕೋಶ ಹಾಗೂ 38 ಸೈಬರ್‌ ಕ್ರೈಂ ಹಾಗೂ ಮಾದಕ ದ್ರವ್ಯ ತಡೆ ಆದ್ಯತೆಯ ನೂತನ ಪೊಲೀಸ್‌ ಠಾಣೆಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಕಾಂಗ್ರೆಸ್‌ ಸದಸ್ಯ ಐವನ್‌ ಡಿ’ಸೋಜ ಅವರ ಗಮನ ಸೆಳೆಯುವ ಸೂಚನೆ ವೇಳೆ ಮಂಗಳವಾರ ವಿವಿಧ ಸದಸ್ಯರು ವ್ಯಕ್ತಪಡಿಸಿದ ಅಭಿಪ್ರಾಯಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಮಾದಕ ದ್ರವ್ಯ ದಂಧೆ ಕಡಿವಾಣಕ್ಕಾಗಿಯೇ ಬೆಂಗಳೂರು, ಮಂಗಳೂರು ಹಾಗೂ ಬೆಳಗಾವಿಯಲ್ಲಿ ಮಾದಕ ದ್ರವ್ಯ ನಿಯಂತ್ರಣ ವಿಶೇಷ ಕೋಶ (ನಿಕೋಟಿಕ್ಸ್‌ ಸೆಲ್‌) ಹಾಗೂ 38 ನೂತನ ಪೊಲೀಸ್‌ ಸ್ಟೇಶನ್‌ಗಳನ್ನು ಆರಂಭಿಸಲಾಗುತ್ತದೆ ಎಂದರು.

ಗೃಹ ಸಚಿವನಾಗಿ ಅಧಿಕಾರ ವಹಿಸಿಕೊಂಡ ಒಂದೇ ವಾರದಲ್ಲಿ ಮಾದಕ ದ್ರವ್ಯ ದಂಧೆ ತಡೆ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳ ತಡೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಹುಕ್ಕಾಬಾರ್‌, ಮಸಾಜ್‌ ಪಾರ್ಲರ್‌, ಕ್ಲಬ್‌ಗಳ ವಿರುದ್ಧ ತೀಕ್ಷ್ಣ ಗಮನ ಹರಿಸಲು ಸೂಚಿಸಿದ್ದೇನೆ ಎಂದರು. ಮಾದಕ ದ್ರವ್ಯ ರಾಜ್ಯದ ವಿವಿಧ ಜಿಲ್ಲೆಗಳು ಅಲ್ಲದೆ, ನೆರೆಯ ಕೇರಳ, ಒಡಿಶಾ, ತಮಿಳುನಾಡು, ಆಂಧ್ರಪ್ರದೇಶ ಇನ್ನಿತರ ಕಡೆಯಿಂದ ಬರುವ ಮಾಹಿತಿ ಇದ್ದು, ಇದರ ತಡೆಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದರು. 

ಗಾಂಜಾ ಬೆಳದರೂ ಗೂಂಡಾ ಕಾಯ್ದೆ: ಗಾಂಜಾ ಸೇರಿದಂತೆ ಮಾದಕ ದ್ರವ್ಯ ಮಾರಾಟ ಹಾಗೂ ಬಳಕೆ ಅಪರಾಧ. ಅದೇ ರೀತಿ ಗಾಂಜಾ ಬೆಳೆಯುವುದು ಅಪರಾಧವಾಗಿದ್ದು, ಬೆಳೆಯುವವರ ವಿರುದ್ಧವೂ ಗೂಂಡಾ ಕಾಯ್ದೆ ಪ್ರಯೋಗಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಪೇಯಿಂಗ್‌ ಗೆಸ್ಟ್‌ ಕೇಂದ್ರಗಳ ಮೇಲೂ ತೀವ್ರ ನಿಗಾ ಇರಿಸಲಾಗಿದೆ. ಮಹಿಳಾ ಕಾಲೇಜುಗಳಲ್ಲಿ ದೂರು ಪಟ್ಟಿಗೆ ಇರಿಸಲು ಸೂಚಿಸಲಾಗಿದೆ ಎಂದರು. ಇದಕ್ಕೂ ಮುನ್ನ ವಿಷಯದ ಮೇಲೆ ಮಾತನಾಡಿದ ವಿವಿಧ ಪಕ್ಷಗಳ ಸದಸ್ಯರಾದ ಐವನ್‌ ಡಿ’ಸೋಜ, ಕ್ಯಾಪ್ಟನ್‌ ಗಣೇಶ್‌ ಕಾರ್ಣಿಕ್‌, ತಾರಾ ಅನುರಾಧ, ಸಿ.ಎಂ.ಇಬ್ರಾಹಿಂ, ಭಾನುಪ್ರಕಾಶ್‌, ಪ್ರಾಣೇಶ್‌, ಶರಣಪ್ಪ ಮಟ್ಟೂರ, ರಾಮಚಂದ್ರಗೌಡ, ಉಗ್ರಪ್ಪ, ಜಯಮ್ಮ, ಶ್ರೀಕಾಂತ ಘೋಕ್ಲೃಕರ, ಪುಟ್ಟಣ್ಣ ಇನ್ನಿತರರು ಮಾತನಾಡಿ, ಕಳೆದ ಮೂರು ವರ್ಷಗಳಲ್ಲಿ ಸುಮಾರು 1699 ಮಾದಕ ದ್ರವ್ಯ ಪ್ರಕರಣಗಳು ಪತ್ತೆಯಾಗಿವೆ ಎಂದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.