10 ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕ್ಕಿ ಆತ್ಮಹತ್ಯೆ
Team Udayavani, Nov 22, 2017, 2:24 PM IST
ಬೆಂಗಳೂರು: ನರಗದ ಬೆಳ್ಳಂದೂರಿನಲ್ಲಿರುವ ಸೆಸ್ನಾ ಬ್ಯುಸಿನೆಸ್ ಪಾರ್ಕ್ನಲ್ಲಿ ಮಹಿಳಾ ಟೆಕ್ಕಿಯೊಬ್ಬರು 10 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಬುಧವಾರ ನಡೆದಿದೆ.
ಗೋವಾ ಮೂಲದ ಗೀತಾಂಜಲಿ (27) ಎಂಬಾಕೆ ಆತ್ಮಹತ್ಯೆಗೆ ಶರಣಾಗಿದ್ದು, ಎಂದಿನಂತೆ ಕೆಲಸಕ್ಕೆ ಬಂದ ಅವರು ಮಹಡಿ ಮೇಲೆ ತೆರಳಿ ಜಿಗಿದಿದ್ದಾರೆ. ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಆತ್ಮಹತ್ಯೆಯ ದೃಶ್ಯ ನೋಡಿ ಸಹುದ್ಯೋಗಿಗಳು ಬೆಚ್ಚಿ ಬಿದ್ದಿದ್ದಾರೆ. ಸ್ಥಳಕ್ಕೆ ಬೆಳ್ಳಂದೂರು ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆತ್ಮಹತ್ಯೆಗೆ ಕಾರಣವೇನೆಂದು ಇದುವರೆಗೆ ತಿಳಿದು ಬಂದಿಲ್ಲ. ಪೊಲೀಸರು ಈ ಬಗ್ಗೆ ಸ್ನೇಹಿತರು ,ಸಹುದ್ಯೋಗಿಗಳು ಮತ್ತು ಕಂಪೆನಿಯ ಅಧಿಕಾರಿಗಳ ಬಳಿ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ