ಹೆಣ್ಮಕ್ಕಳಿಗೆ 2 ರೂ. ಪ್ರೋತ್ಸಾಹ ಧನ ಪುನಾರಂಭಿಸಲು ಕ್ರಮ
Team Udayavani, Nov 25, 2017, 7:10 AM IST
ವಿಧಾನಪರಿಷತ್ತು: “ಸರ್ಕಾರಿ ಶಾಲೆಯ ಹೆಣ್ಣು ಮಕ್ಕಳಿಗೆ 2 ರೂ. ಪ್ರೋತ್ಸಾಹ ಧನ ನೀಡುವ ಪ್ರಕ್ರಿಯೆಯ ಮೇಲ್ವಿಚಾರಣೆ
ಕಷ್ಟಕರವಾಗಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಶೀಘ್ರವೇ ಪುನಾರಂಭಿಸಲಾಗುವುದು’ ಎಂದು ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಶುಕ್ರವಾರ ಬಿಜೆಪಿಯ ತಾರಾ ಅನುರಾಧ ಪ್ರಶ್ನೆಗೆ ಉತ್ತರಿಸಿದ ಅವರು, “ತಾತ್ಕಾಲಿಕವಾಗಿ 2 ರೂ. ಪ್ರೋತ್ಸಾಹಧನ ಯೋಜನೆ ಸ್ಥಗಿತಗೊಳಿಸಲಾಗಿದೆ. ಸದ್ಯದಲ್ಲೇ ಹೊಸ ನಿಯಮಾವಳಿ ರೂಪಿಸಿ ಚಾಲನೆ ನೀಡಲಾಗುವುದು. ಸರ್ಕಾರ ನುಡಿದಂತೆ ನಡೆದುಕೊಳ್ಳಲಿದೆ’ ಎಂದು ಹೇಳಿದರು. ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುವ ಹೆಣ್ಣು ಮಕ್ಕಳಿಗೆ 2 ರೂ. ನೀಡುವ ಜವಾಬ್ದಾರಿಯನ್ನು ಮುಖ್ಯ ಶಿಕ್ಷಕ, ಶಿಕ್ಷಕರಿಗೆ ವಹಿಸಲಾಗಿತ್ತು. ಅವರ ವರದಿಯಂತೆ ಹಣ ಬಿಡುಗಡೆಯಾಗುತ್ತದೆ. ಅನೇಕ ಪ್ರಕರಣದಲ್ಲಿ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದೆ ಎಂದು ಸಚಿವರು ಹೇಳಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಸರ್ಕಾರವೇ ಯೋಜನೆ ಘೋಷಿಸಿರುವುದರಿಂದ ಮುಂದುವರಿಸಬೇಕೆಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ವಿದ್ಯಾರ್ಥಿನಿಯರಿಗೆ ನೀಡುವ 2 ರೂ.ಗೆ ಮಾನ್ಯತೆ ಇಲ್ಲದಂತಾಗಿದೆ. ಅದು ವಿದ್ಯಾರ್ಥಿಗಳಿಗೂ ಗೊತ್ತಾಗುವುದಿಲ್ಲ. ಅಲ್ಲದೆ ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದಲೂ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂದು ಹೇಳಿದರು.
ವಿದ್ಯಾರ್ಥಿನಿಯರಿಗೆ ವಾರ್ಷಿಕ 420 ರೂ.ನಿಂದ 450 ರೂ. ನೀಡಬೇಕು. ಆದರೆ ಈ ಹಣ ಸರಿಯಾಗಿ ತಲುಪುತ್ತಿದೆಯೇ ಎಂಬುದರ ಮೇಲ್ವಿಚಾರಣೆ ಕಷ್ಟಕರ. ಇನ್ನೊಂದೆಡೆ ಸರ್ಕಾರಿ ಶಾಲೆಗಳಿಗೆ ಹೆಣ್ಣು ಮಕ್ಕಳ ಹಾಜರಾತಿ ಶೇ. 100ರಷ್ಟಿದೆ. ಆದರೆ, ಶಾಲೆಯಿಂದ ಹೊರಗುಳಿದ ಮಕ್ಕಳ ಪೈಕಿ ಗಂಡು ಮಕ್ಕಳ ಸಂಖ್ಯೆ ಹೆಚ್ಚಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ