CONNECT WITH US  
Please Select Your Default Edition         ಕರ್ನಾಟಕ ಆವೃತ್ತಿ    |     ಕರಾವಳಿ ಆವೃತ್ತಿ     |     English Edition

ಯದು ವಂಶಕ್ಕೆ ಪುತ್ರ ಸಂತಾನ 

ಬೆಂಗಳೂರು: ಮೈಸೂರು ಸಂಸ್ಥಾನದ ಯುವ ರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪತ್ನಿ ತ್ರಿಷಿಕಾ ಕುಮಾರಿ ಬುಧವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ನಗರದ ಹಳೆ ವಿಮಾನ ನಿಲ್ದಾಣ ರಸ್ತೆಯ ಖಾಸಗಿ ಆಸ್ಪತ್ರೆಗೆ ಮಂಗಳವಾರ ಸಂಜೆ ಅವರು ದಾಖಲಾಗಿದ್ದರು. ಬುಧವಾರ ರಾತ್ರಿ 10ರ ಸುಮಾರಿಗೆ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಮಗು ಸುಮಾರು 2.5 ಕೆ.ಜಿ.ತೂಕವಿದ್ದು, ಲವಲವಿಕೆಯಿಂದಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.  55 ವರ್ಷಗಳ ಬಳಿಕ ಮೈಸೂರು ಒಡೆಯರ ಮನೆತನದಲ್ಲಿ ಮಗು ಜನನವಾಗಿದೆ.

Back to Top