ವರುಣ ಕ್ಷೇತ್ರದಿಂದ ಸ್ಪರ್ಧಿಸಿ ಗೆಲ್ಲಿ: ಡಿವಿಎಸ್ಗೆ ಸವಾಲು
Team Udayavani, Dec 11, 2017, 7:00 AM IST
ಬೆಂಗಳೂರು: ನಾನಂತೂ ವರುಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿಲ್ಲ. ನನ್ನ ಮಗ ಡಾ. ಯತೀಂದ್ರ ಸ್ಪರ್ಧಿಸುವ ಸಾಧ್ಯತೆಯಿದ್ದು, ಈ ಕ್ಷೇತ್ರದಿಂದಲೇ ಸ್ಪರ್ಧಿಸಿ ನನ್ನ ಮಗನ ವಿರುದ್ಧ ಗೆದ್ದು ತೋರಿಸಲಿ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ವಿಧಾನಸೌಧದ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ದಿ. ಎಸ್. ನಿಜಲಿಂಗಪ್ಪ ಅವರ ಜನ್ಮದಿನಾಚರಣೆ ಅಂಗವಾಗಿ ಭಾನುವಾರ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡುತ್ತ, ಹಳೆ ಮೈಸೂರು ಭಾಗದ ಉಸ್ತುವಾರಿ ನನಗೆ ಕೊಟ್ಟ ಮೇಲೆ ಮುಖ್ಯಮಂತ್ರಿಯವರಲ್ಲಿ ನಡುಕ ಉಂಟಾಗಿದೆ ಎಂಬ ಸದಾನಂದಗೌಡರ ಮಾತಿಗೆ ತಿರುಗೇಟು ನೀಡಿದ ಮುಖ್ಯಮಂತ್ರಿಯವರು, ವರುಣ ಕ್ಷೇತ್ರದಿಂದ ಸ್ಪರ್ಧಿಸಿ ಸದಾನಂದಗೌಡರು ಗೆದ್ದು ತೋರಿಸಲಿ ಎಂದು ತಿರುಗೇಟು ನೀಡಿದರು.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ವರುಣ ಕ್ಷೇತ್ರದಿಂದ ನಾನು ಸ್ಪರ್ಧಿಸುವುದು ಅನುಮಾನ. ಕಳೆದ ಚುನಾವಣೆಯಲ್ಲಿ 32 ಸಾವಿರ ಮತಗಳಿಂದ ಆ ಕ್ಷೆತ್ರದಲ್ಲಿ ಗೆಲುವು ಸಾಧಿಸಿದ್ದೆ. ಈ ಬಾರಿ ಮಗ ಡಾ. ಯತೀಂದ್ರನಿಗೆ ಟಿಕೆಟ್ ಕೊಡುವ ಬಗ್ಗೆ ಪಕ್ಷದಲ್ಲಿ ಗಂಭೀರ ಚಿಂತನೆ ನಡೆದಿದೆ. ಸದಾನಂದಗೌಡರು ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ತಮ್ಮ ಸಾಮರ್ಥಯ ತೋರಿಸಲಿ ಎಂದರು.
ವರುಣ ಕ್ಷೇತ್ರದಲ್ಲಿ ಗೆಲ್ಲುವುದು ಅಷ್ಟು ಸುಲಭವಲ್ಲ. ಯಾರಿಗೋ ಉಸ್ತುವಾರಿ ಕೊಟ್ಟ ತಕ್ಷಣ ಅಲ್ಲಿನ ಜನ ಬದಲಾಗುವುದಿಲ್ಲ. ವರುಣ ಕ್ಷೇತ್ರದ ಮೂಲ ಏನೆಂದೇ ಬಿಜೆಪಿಯವರಿಗೆ ಗೊತ್ತಿಲ್ಲ. ತಮಗೆ ಉಸ್ತುವಾರಿ ಕೊಟ್ಟಿದ್ದರಿಂದ ನನಗೆ ನಡುಕ ಉಂಟಾಗಿದೆ ಎಂದು ಹೇಳುವ ಸದಾನಂದಗೌಡರು, ಯಾರನ್ನೋ ವರುಣ ಕ್ಷೇತ್ರದಿಂದ ಕಣಕ್ಕಿಳಿಸಿ ಬಲಿಪಶು ಮಾಡುವ ಬದಲು ಅವರೇ ಸ್ಪರ್ಧಿಸಿ ಗೆದ್ದು ತೋರಿಸಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ