CONNECT WITH US  

ನಟ ಕಿಚ್ಚ ಸುದೀಪ್, ಸಿಎಂ ಸಿದ್ದರಾಮಯ್ಯ ಭೇಟಿ; ಒಂದು ಗಂಟೆ ಚರ್ಚೆ

ಬೆಂಗಳೂರು: ಸ್ಯಾಂಡಲ್ ವುಡ್ ಸ್ಟಾರ್ ನಟ ಕಿಚ್ಚ ಸುದೀಪ್ ಅವರು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವುದು ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಸುದೀಪ್ ಅವರು ಭೇಟಿ ನೀಡಿ ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದ್ದರು.

ಸಾಹಸ ಸಿಂಹ, ದಿವಂಗತ ನಟ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಬೆಂಗಳೂರಿನಲ್ಲಿಯೇ ನಿರ್ಮಿಸಬೇಕು, ಮೈಸೂರಿನಲ್ಲಿ ಬೇಡ ಎಂದು ಮನವಿ ಮಾಡಿಕೊಂಡಿರುವುದಾಗಿ ಸುದೀಪ್ ಸಿಎಂ ಭೇಟಿಯ ನಂತರ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.


Trending videos

Back to Top