ಮೊಬೈಲಲ್ಲೇ ಇನ್ನು ಸಿಇಟಿ ನೋಂದಣಿ!

Team Udayavani, Dec 15, 2017, 6:00 AM IST

CET-mobile.jpg

ಬೆಂಗಳೂರು : ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್‌ಲೈನ್‌ ನೋಂದಣಿ, ಆಪ್ಶನ್‌ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್‌ ಕೆಫೆ ಸೇರಿದಂತೆ ಕಂಪ್ಯೂಟರ್‌ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.

ಹೌದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ  ಸಿಇಟಿ ವ್ಯವಸ್ಥೆಯನ್ನು ವಿದ್ಯಾರ್ಥಿ ಸ್ನೇಹಿಯಾಗಿಸಲು ಬೇಕಾದ ಸಾಫ್ಟ್ವೇರ್‌ ತಯಾರಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. 2018ರ ಏಪ್ರಿಲ್‌ನಲ್ಲಿ ಸಿಇಟಿ ನಡೆಯಲಿದ್ದು, ಇದಾದ ನಂತರದ ಎಲ್ಲಾ ಪ್ರಕ್ರಿಯೆಯನ್ನ ವಿದ್ಯಾರ್ಥಿಗಳು ಮೊಬೈಲ್‌ ಮೂಲಕವೇ ಮಾಡಬಹುದಾಗಿದೆ.

ಎಂಜಿನಿಯರಿಂಗ್‌, ಭಾರತೀಯ ವೈದ್ಯ ಪದ್ಧತಿಯ ಕೋರ್ಸ್‌ಗೆ ಪ್ರತಿ ವರ್ಷ ಸಿಇಟಿ ಫ‌ಲಿತಾಂಶದ ನಂತರ ತೇರ್ಗಡೆಯಾದ ವಿದ್ಯಾರ್ಥಿಗಳ ನೋಂದಣಿ, ದಾಖಲೆ ಪರಿಶೀಲನೆ, ಆಪ್ಶನ್‌ ಎಂಟ್ರಿ, ಎಂಟ್ರಿ ತಿದ್ದುಪಡಿ, ಸೀಟು ಹಂಚಿಕೆ, ಶುಲ್ಕ ಪಾವತಿ ಇತ್ಯಾದಿ ಪ್ರಕ್ರಿಯೆ ನಡೆಯುತ್ತದೆ. ಶುಲ್ಕಪಾವತಿಸಿದ ವಿದ್ಯಾರ್ಥಿಗಳು ಆಯಾ ಕಾಲೇಜಿನಲ್ಲಿ ದಾಖಲಾಗುತ್ತಾರೆ.

2014ರ ನಂತರ ಸಿಇಟಿ ವ್ಯವಸ್ಥೆಗೆ ಆನ್‌ಲೈನ್‌ ರೂಪ ನೀಡಲಾಯಿತು.  ಆರಂಭದಲ್ಲಿ ಕಾಲೇಜುಗಳ ಮೂಲಕವೇ ನೋಂದಣಿ ಮಾಡಿಸಿಕೊಳ್ಳಲಾಗುತಿತ್ತು. ನಂತರ ವಿದ್ಯಾರ್ಥಿಗಳಿಗೆ ನೋಂದಣಿ ಮಾಡಲು ಅವಕಾಶ ನೀಡಲಾಗಿತ್ತು. ನಗರದ ಪ್ರದೇಶದ ವಿದ್ಯಾರ್ಥಿಗಳು ಇದನ್ನು ಚೆನ್ನಾಗಿ ಬಳಿಸಿಕೊಂಡಿದ್ದರು.  ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ನೋಂದಣಿ ಕಬ್ಬಿಣದ ಕಡಲೆಯಾಗಿ ಪರಿಣಮಿಸಿತ್ತು.

ಹೀಗಾಗಿಯೇ  ಗ್ರಾಮೀಣ ಪ್ರದೇಶದ ಬಹುತೇಕ ವಿದ್ಯಾರ್ಥಿಗಳು ಸೈಬರ್‌ ಕೆಫೆ ಮೊರೆ ಹೋಗುತ್ತಿದ್ದರು. ತಮ್ಮ ಎಲ್ಲಾ ದಾಖಲೆಗಳನ್ನು ಸೈಬರ್‌ ಕೆಫೆಯವರಿಗೆ ನೀಡಿ, ಅವರಿಂದಲೇ ಭರ್ತಿ ಮಾಡಿಸುತ್ತಿದ್ದರು. ಇದರಿಂದ ಹತ್ತಾರು ಅನಾಹುತ ಆಗಿರುವ ನಿದರ್ಶನವೂ ಪ್ರಾಧಿಕಾರದ ಮುಂದಿದೆ.  ಇದನ್ನೆಲ್ಲ ಅರಿತ ಪ್ರಾಧಿಕಾರದ ಅಧಿಕಾರಿಗಳು, ಮುಂದಿನ ವರ್ಷದಿಂದ ಸಿಇಟಿ ವ್ಯವಸ್ಥೆಯನ್ನು ಇನ್ನಷ್ಟು ಸರಳೀಕರಿಸಿ, ವಿದ್ಯಾರ್ಥಿ ಸ್ನೇಹಿಯಾಗಿಸಲು ಕ್ರಮ ತೆಗೆದುಕೊಂಡಿದ್ದಾರೆ.

ಸಾಫ್ಟ್ವೇರ್‌ ಬದಲಾವಣೆ:
ಸಿಇಟಿ ಸಾಫ್ಟ್ವೇರ್‌ ಬದಲಾಯಿಸುವ ಕಾರ್ಯ ಆರಂಭವಾಗಿದೆ. ಕೆಇಎ ಕಾರ್ಯನಿರ್ವಹಕ ನಿರ್ದೇಶಕರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಕೂಡ ನಡೆದಿದೆ. ಹೊಸ ಸಾಫ್ಟ್ವೇರ ರಚನೆಯ ಜವಾಬ್ದಾರಿಯನ್ನು ಎನ್‌ಐಸಿಗೆ ವಹಿಸಲಾಗಿದೆ. ವಿದ್ಯಾರ್ಥಿಗಳಿಗೆ ಮಾಹಿತಿ ಸುಲಭದಲ್ಲಿ ಸಿಗುವು ಮತ್ತು ಅತ್ಯಂತ ಸರಳ ವಿಧಾನದಲ್ಲಿ ಮಾಹಿತಿ ಅಪ್‌ಲೋಡ್‌ ಮಾಡಬಹುದಾದ, ತಾಂತ್ರಿಕತೆಯೂ ಚೆನ್ನಾಗಿರುವ ಸಾಫ್ಟ್ವೇರ್‌ ರಚನೆಯಾಗುತ್ತಿದೆ ಎಂದು ಪ್ರಾಧಿಕಾರದ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.

ಮೊಬೈಲ್‌ ಲಿಂಕ್‌:
ಹೊಸ ಸಾಫ್ಟ್ವೇರ್‌ಗೆ ಮೊಬೈಲ್‌ ಲಿಂಕ್‌ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಸಿಇಟಿಯ ಎಲ್ಲಾ ಪ್ರಕ್ರಿಯೆಯನ್ನು ತಮ್ಮಲ್ಲಿರುವ ಮೊಬೈಲ್‌ ಮೂಲಕವೇ ಪೂರೈಸಬಹುದು. ವೃತ್ತಿಪರ ಕೋರ್ಸ್‌ಗಳ ಆನ್‌ಲೈನ್‌ ನೋಂದಣಿ, ಆಪ್ಶನ್‌ ಎಂಟ್ರಿ, ಅರ್ಜಿ ತಿದ್ದುಪಡಿ, ಶುಲ್ಕ ಪಾವತಿ ಕೂಡ ಮೊಬೈಲ್‌ನಲ್ಲೇ ಮಾಡಬಹುದು ಮತ್ತು  ಸೀಟು ಹಂಚಿಕೆಯ ಫ‌ಲಿತಾಂಶವನ್ನು ಮೊಬೈಲ್‌ ಮೂಲಕವೇ ತಿಳಿದುಕೊಳ್ಳಬಹುದು. ಲಾಗಿನ್‌ ಐಡಿಯಲ್ಲೂ ಕೆಲವೊಂದು ಬದಲಾವಣೆ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಲ್ಲಿ ಅಥವಾ ಅವರ ಪಾಲಕ, ಪೋಷಕರಲ್ಲಿ ಮೊಬೈಲ್‌ ಫೋನ್‌ ಇರುವುದರಿಂದ ಸಿಇಟಿ ಪ್ರಕ್ರಿಯೆ ಮುಂದಿನ ವರ್ಷದಿಂದ ಸುಲಭವಾಗಲಿದೆ. ಸರ್ವರ್‌ ಸಮಸ್ಯೆ ಬಾರದ ರೀತಿಯಲ್ಲಿ ಸಾಫ್ಟ್ವೇರ್‌ಗೆ ಮೊಬೈಲ್‌ ಲಿಂಕ್‌ ಮಾಡುತ್ತಿದ್ದಾರೆ.

ಹೊಸ ಅಭ್ಯರ್ಥಿಗಳು :
ಸಿಇಟಿಗೆ ಪ್ರತಿ ವರ್ಷ ಹೊಸ ಅಭ್ಯರ್ಥಿಗಳು ಬರುವುದರಿಂದ ಯಾವುದೇ ರೀತಿಯ ಸುಧಾರಣೆ ತಂದರೂ, ಒಂದಲ್ಲೊಂದು ತಪ್ಪು ನಡೆಯುತ್ತಲೇ ಇರುತ್ತದೆ. ವಿದ್ಯಾರ್ಥಿಗಳು ಸಿಇಟಿ ಪ್ರಕ್ರಿಯೆಯಲ್ಲಿ ಹೇಗೆ ಪಾಲ್ಗೊಳ್ಳಬೇಕು ಎಂಬುದರ ಬಗ್ಗೆ ಪ್ರತಿ ವರ್ಷ ಪ್ರಾಧಿಕಾರದಿಂದಲೇ ಕಾಲೇಜುಗಳಲ್ಲಿ ಮತ್ತು ಪ್ರಾಧಿಕಾರದ ಕಚೇರಿಯಲ್ಲಿ ಒರಿಯಂಟೇಷನ್‌ ಕಾರ್ಯಕ್ರಮ ನಡೆಸಲಾಗುತ್ತದೆ. ಮಾರ್ಗಸೂಚಿ, ವೇಳಾಪಟ್ಟಿ ಹೊಂದಿರುವ ಬೊÅಷರ್‌ ಕೂಡ ನೀಡಲಾಗುತ್ತದೆ. ಇಷ್ಟಾದರೂ, ವಿದ್ಯಾರ್ಥಿಗಳು ದಾಖಲೆ ಸಲ್ಲಿಕೆ ಸೇರಿದಂತೆ ವಿವಿಧ ಹಂತದಲ್ಲಿ ತಪ್ಪುಗಳನ್ನು ಮಾಡುತ್ತಲೇ ಇರುತ್ತಾರೆ. ಇದನ್ನು ಸರಿಪಡಿಸುವುದೇ ಪ್ರಾಧಿಕಾರದ ಅಧಿಕಾರಿಗಳಿಗೆ ದೊಡ್ಡ ಕಿರಿಕಿರಿಯಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಪಾಲಕರ ಜತೆ ಕುಳಿತು ಮೊಬೈಲ್‌ನಲ್ಲಿ ಸಾವಕಾಶದಿಂದ ಎಲ್ಲಾ ಪ್ರಕ್ರಿಯೆ ಮುಗಿಸಲು ವ್ಯವಸ್ಥೆ ಮಾಡಿಕೊಡಲು ಮುಂದಾಗಿದ್ದಾರೆ.

ಸಿಇಟಿ ಸಾಫ್ಟ್ವೇರ್‌ ಬದಲಿಸುವ ಕಾರ್ಯ ಪ್ರಗತಿಯಲ್ಲಿದೆ. ಎನ್‌ಐಸಿಗೆ ಇದನ್ನು ವಹಿಸಲಾಗಿದೆ. ಮೊಬೈಲ್‌ ಲಿಂಕ್‌ ಮಾಡುವುದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ ಮತ್ತು ತಪ್ಪುಗಳು ಕಡಿಮೆಯಾಗುವ ನಿರೀಕ್ಷೆ ಇದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸೈಬರ್‌ ಕೆಫೆಗೆ ಅಲೆದಾಡುವುದು ತಪ್ಪಲಿದೆ.
– ಗಂಗಾಧರಯ್ಯ, ಆಡಳಿತಾಧಿಕಾರಿ, ಕೆಇಎ

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.