ಮಹದಾಯಿ ಹೋರಾಟ; ಬುಧವಾರ ಉತ್ತರ ಕರ್ನಾಟಕ ಸಂಪೂರ್ಣ ಬಂದ್
Team Udayavani, Dec 26, 2017, 12:53 PM IST
ಹುಬ್ಬಳ್ಳಿ: ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ಬುಧವಾರ ಬೆಳಗ್ಗೆ 6ಗಂಟೆಯಿಂದ ಸಂಜೆ 6ಗಂಟೆವರೆಗೆ ಉತ್ತರಕರ್ನಾಟಕ ಸಂಪೂರ್ಣ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಮಹದಾಯಿ ಹೋರಾಟ ಸಮಿತಿ ತಿಳಿಸಿದೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಮಿತಿ, ತುರ್ತು ಸೇವೆಗಳನ್ನು ಹೊರತು ಪಡಿಸಿ ನಾಳೆ ಹುಬ್ಬಳ್ಳಿ, ಧಾರವಾಡ, ಮಲಪ್ರಭಾ ಅಚ್ಚುಕಟ್ಟು ಪ್ರದೇಶ ಬಂದ್ ಮಾಡಲಾಗುವುದು ಎಂದು ಹೇಳಿದೆ.
ಮಹದಾಯಿ, ಕಳಸಾ ಬಂಡೂರಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸಬೇಕೆಂದು ಆಗ್ರಹಿಸಿ ಬಂದ್ ನಡೆಸಲಾಗುತ್ತಿದೆ ಎಂದು ವಿವರಿಸಿದೆ.
ಮಹದಾಯಿ, ಕಳಸಾ ಬಂಡೂರಿ ಹೋರಾಟದ ಬಂದ್ ಗೆ ಕರವೇ ಸೇರಿದಂತೆ ನೂರಕ್ಕೂ ಅಧಿಕ ಸಂಘಟನೆಗಳು ಬೆಂಬಲ ನೀಡಿವೆ. ಬಂದ್ ಬಳಿಕ ಬುಧವಾರ ಸಂಜೆ ಮುಂದಿನ ಹೋರಾಟದ ರೂಪರೇಷೆ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದೆ.
ಬಂದ್ ಹಿನ್ನೆಲೆ ಶಾಲೆಗಳಿಗೆ ರಜೆ:
ಮಹದಾಯಿ, ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ಉತ್ತರ ಕರ್ನಾಟಕ ಬಂದ್ ಗೆ ಕರೆ ಕೊಟ್ಟ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಲಾಗಿದೆ. ಗದಗ ಜಿಲ್ಲಾಧಿಕಾರಿ ಮನೋಜ್ ಜೈನ್ ಅವರು ನಾಳೆ ರಜೆ ಬಗ್ಗೆ ಘೋಷಿಸಲಿದ್ದಾರೆ ಎಂದು ವರದಿ ತಿಳಿಸಿದೆ.
ಕಾನೂನು ಸುವ್ಯವಸ್ಥೆ ಕಾಪಾಡಲು ಸೂಚನೆ:
ನಾಳೆ ಬಂದ್ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ