ಸೊಬರದಮಠ ವಿರುದ್ಧ ಬಿಜೆಪಿ ಪ್ರತಿಭಟನೆ


Team Udayavani, Jan 1, 2018, 8:30 AM IST

01-2.jpg

ನರಗುಂದ: ಮಹದಾಯಿ ವಿವಾದ ಕುರಿತು ಹೋರಾಟಗಾರರು ಬೆಂಗಳೂರಿನ ಬಿಜೆಪಿ ಕಚೇರಿ ಎದುರು ಧರಣಿ ನಡೆಸಿದ್ದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಭಾನುವಾರ ಮಹದಾಯಿ ಮತ್ತು ಕಳಸಾ-ಬಂಡೂರಿ ಹೋರಾಟ ನಿರಂತರ ಸತ್ಯಾಗ್ರಹ ವೇದಿಕೆಗೆ ತೆರಳಿ ಹೋರಾಟಗಾರರ ಜೊತೆ ವಾಗ್ವಾದ ನಡೆಸಿದ್ದಲ್ಲದೆ, ಸಮೀಪದ ಹೆದ್ದಾರಿ ತಡೆದು ಪ್ರತಿಭಟಿಸಿದರು.

ಎಂದಿನಂತೆ 901ನೇ ದಿನ ಮಹದಾಯಿ ನಿರಂತರ ಸತ್ಯಾಗ್ರಹ ನಡೆದಿತ್ತು. ಮಧ್ಯಾಹ್ನ 2:30ಕ್ಕೆ ವೇದಿಕೆ ಬಳಿ ಜಮಾಯಿಸಿದ ಬಿಜೆಪಿ
ಕಾರ್ಯಕರ್ತರು ವೇದಿಕೆಯಲ್ಲಿದ್ದ ರೈತ ಸೇನಾ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಅವರೊಂದಿಗೆ ವಾಗ್ವಾದಕ್ಕಿಳಿದರು. ಕಳಸಾ-ಬಂಡೂರಿ ನೀರು ತರುವ ಪ್ರಯತ್ನದಲ್ಲಿ ಯಡಿಯೂರಪ್ಪನವರು ತೊಡಗಿದ್ದರೂ ಬಿಜೆಪಿ ಕಚೇರಿಯೆದುರು ಧರಣಿ ನಡೆಸಿದ್ದೇಕೆ ಎಂದು
ಪ್ರಶ್ನಿಸಿದರು. ಈ ವೇಳೆ, ಸೊಬರದಮಠ ಅವರನ್ನು ನಿಂದಿಸಿದ ಬಿಜೆಪಿ ಕಾರ್ಯಕರ್ತರು ರಾಜ್ಯದಲ್ಲಿ ಆಡಳಿತ ನಡೆಸಿದ ಮುಖ್ಯಮಂತ್ರಿಗಳ ಕಚೇರಿ ಎದುರು ಧರಣಿ ನಡೆಸದೆ ಯೋಜನೆಗೆ ಪ್ರಯತ್ನ ಮಾಡುವವರ ಕಚೇರಿ ಎದುರು ಧರಣಿ ನಡೆಸಿದ್ದೀರಿ. ನೀವು ರೈತರ ದಿಕ್ಕು ತಪ್ಪಿಸುತ್ತಿದ್ದೀರಿ ಎಂದು ಸೊಬರದಮಠ ಅವರನ್ನು ತರಾಟೆಗೆ ತೆಗೆದುಕೊಂಡರು.

ವೇದಿಕೆಯಲ್ಲಿ ಪಾಲ್ಗೊಂಡು ನೀವು ಮಾತನಾಡಬಾರದು ಎಂದು ತಾಕೀತು ಮಾಡಿದರು. ಈ ಮಧ್ಯೆ ಹೋರಾಟಗಾರರು,
ಕಾರ್ಯಕರ್ತರ ಮಧ್ಯೆ ತೀವ್ರ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ಹೋಯಿತು. ಮಧ್ಯೆ ಪ್ರವೇಶಿಸಿದ ಪೊಲೀಸರು
ಕಾರ್ಯಕರ್ತರನ್ನು ಸಮಾಧಾನಗೊಳಿಸಿ ಅಲ್ಲಿಂದ ನಿರ್ಗಮಿಸಲು ವಿನಂತಿಸಿದರು. ಇದಾದ ಬಳಿಕ ಕೆಲ ಕಾರ್ಯಕರ್ತರು ತೆರಳಿದರೆ ಉಳಿದ ಕಾರ್ಯಕರ್ತರು ಹೆದ್ದಾರಿಯಲ್ಲಿ ಪ್ರತಿಭಟನೆಗೆ ಮುಂದಾದಾಗ ಮತ್ತಷ್ಟು ಕಾರ್ಯಕರ್ತರು ಜಮಾವಣೆಗೊಂಡರು. ಇದೇ ಸಂದರ್ಭದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಸೊಬರದಮಠ ವೇದಿಕೆಯಿಂದ ನಿರ್ಗಮಿಸುವವರೆಗೆ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಘೋಷಣೆ ಕೂಗಿದರು. 

ಘಟನೆ ಹಿನ್ನೆಲೆಯಲ್ಲಿ ಪೊಲೀಸರು ಹೆಚ್ಚಿನ ಸಿಬ್ಬಂದಿಯೊಂದಿಗೆ ಸ್ಥಳದಲ್ಲಿ ಠಿಕಾಣಿ ಹೂಡಿದ್ದಾರೆ.  ಗಡುವು ಮೀರಿದರೆ ಸಿಎಂ ಮನೆಯೆದುರು ಧರಣಿ  ನರಗುಂದ: ನಾವು ಯಾವುದೇ ಪಕ್ಷದ ವಿರೋಧಿಗಳಲ್ಲ. ಇದೀಗ ಕೂಡಲೇ ಸರ್ವಪಕ್ಷ ನಿಯೋಗದೊಂದಿಗೆ
ಮತ್ತೂಮ್ಮೆ ಪ್ರಧಾನಿ ಬಳಿಗೆ ತೆರಳಲು ಜ.31ರವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗಡುವು ನೀಡಿದ್ದೇವೆ. ಇದು
ಈಡೇರದಿದ್ದರೆ ಸಿಎಂ ಮನೆಯೆದುರು ಧರಣಿ ನಡೆಸುವುದು ನಿಶ್ಚಿತ ಎಂದು ರೈತ ಸೇನಾ ಕರ್ನಾಟಕ ರಾಜ್ಯಾಧ್ಯಕ್ಷ ವೀರೇಶ
ಸೊಬರದಮಠ ಸ್ವಾಮೀಜಿ ತಿಳಿಸಿದರು. 

ಶನಿವಾರ 901ನೇ ದಿನ ನಿರಂತರ ಸತ್ಯಾಗ್ರಹ ವೇದಿಕೆಯಲ್ಲಿ ಅವರು ಮಾತನಾಡಿ, ಬಿಎಸ್‌ವೈ ಮಾತು ಕೊಟ್ಟಿದ್ದರಿಂದ
ಬೆಂಗಳೂರಿನ ಬಿಜೆಪಿ ಕಚೇರಿ ಎದುರು ಧರಣಿ ನಡೆಸಿದೆವು. ಮರುದಿನ ಹಳಸಿದ ಬುತ್ತಿ ಬಿಚ್ಚಿ ಊಟ ಮಾಡಿದೆವು. ಬಳಿಕ ಮಲ್ಲೇಶ್ವರಂ ನಿವಾಸಿಗಳು ಧವಸ ಧಾನ್ಯ ನೀಡಿದರು. ಬರುವಾಗ ಉಳಿದ ಧವಸ ಧಾನ್ಯಗಳನ್ನು ಅಲ್ಲಿನ ವೃದ್ಧಾಶ್ರಮಕ್ಕೆ ನೀಡಿ ಬಂದಿದ್ದೇವೆ.
ಮೂರು ವರ್ಷದಿಂದ ಈ ಹೋರಾಟವನ್ನು ಪ್ರಾಮಾಣಿಕತೆಯಿಂದ ನಡೆಸಿಕೊಂಡು ಬಂದಿದ್ದೇವೆ. ಅಪವಾದಗಳಿಗೆ ನಾನು
ಜಗ್ಗಲಾರೆ. ರಾಜ್ಯದಲ್ಲಿ ಮೂರೂ ಪಕ್ಷಗಳ ಕಿತ್ತಾಟ ಗೋವಾದಲ್ಲಿ ನಗೆಪಾಟಲಿಗೀಡಾಗಿದೆ. ಇನ್ನು 2, 3 ದಿನಗಳಲ್ಲಿ ಸಭೆ ನಡೆಸಿ ಮುಂದಿನ ಹೋರಾಟದ ನಿರ್ಣಯ ಕೈಗೊಳ್ಳುತ್ತೇವೆ. ನಾನು ಹಿಡಿದ ಕೆಲಸ ಎಂದಿಗೂ ಕೈ ಬಿಟ್ಟಿಲ್ಲ. ನೀರು ಬರುವವರೆಗೂ ನಮ್ಮ ಹೋರಾಟ ಅಚಲ ಎಂದರು.

ನನ್ನ ಮೇಲೆ ಹಲ್ಲೆ ನಡೆದಿಲ್ಲ: ವೀರೇಶ 
ನರಗುಂದ: ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ ಎಂಬ ಸುದ್ದಿ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರಗೊಳ್ಳುತ್ತಿದ್ದಂತೆ ರಸ್ತೆ ತಡೆದು ಪ್ರತಿಭಟನೆ
ನಡೆಸಲಾಯಿತು. ಆದರೆ, ರೈತ ಸೇನಾ ಕರ್ನಾಟಕ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಅವರು, “ನನ್ನ ಮೇಲೆ ಯಾರೂ ಹಲ್ಲೆ ಮಾಡಿಲ್ಲ’ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳ ಮಧ್ಯಸ್ಥಿಕೆಯಲ್ಲಿ ಹೇಳಿಕೆ ನೀಡಿದ ಬಳಿಕ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಹಿಂಪಡೆದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ವಸಂತ ಜೋಗನ್ನವರ ಮಾತನಾಡಿ, ವೇದಿಕೆಯಲ್ಲಿ ಮಹದಾಯಿ ನೀರು
ತರುವ ಪ್ರಾಮಾಣಿಕ ಕಾಳಜಿ ತೋರುವ ಯಾವುದೇ ರಾಜಕೀಯ ನಾಯಕರ ಹೆಸರು ಪ್ರಸ್ತಾಪಿಸಿ ಟೀಕೆ ಮಾಡುವುದನ್ನು ನಿಲ್ಲಿಸದಿದ್ರೆ
ನಾವೂ ಸುಮ್ಮನೆ ಕೂಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ನರಗುಂದದಲ್ಲಿ ಬಿಜೆಪಿ ಕಾರ್ಯಕರ್ತರು ಭಾನುವಾರ ಹೆದ್ದಾರಿ ತಡೆದು ಧರಣಿ ನಡೆಸಿದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.