ಬಿಜೆಪಿಯೇ ಪಿಎಫ್ಐ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ:ರೆಡ್ಡಿ
Team Udayavani, Jan 4, 2018, 3:07 PM IST
ಬೆಂಗಳೂರು: ಕಾಂಗ್ರೆಸ್ ಯಾವತ್ತೂ ಪಿಎಫ್ಐ ಜೊತೆ ಹೊಂದಾಣಿಕೆ ಮಾಡಿಕೊಂಡಿಲ್ಲ, ಆದರೆ ಬಿಜೆಪಿ ಸವಣೂರು ಗ್ರಾಮ ಪಂಚಾಯತ್ನಲ್ಲಿ ಪಿಎಫ್ಐ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು ನೀಡಿದ್ದಾರೆ.
ಸುರತ್ಕಲ್ನ ಕಾಟಿಪಳ್ಳದಲ್ಲಿ ನಡೆದ ದೀಪಕ್ ರಾವ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿಕಾಸಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಮಲಿಂಗಾರೆಡ್ಡಿ ಬಿಜೆಪಿ ವಿರುದ್ಧ ಕಿಡಿ ಕಾರಿದರು.
‘ಬಿಜೆಪಿ ಆಡಳಿತ ಇರುವ ಕಡೆಗಳಲ್ಲಿ ಹಿಂಸಾಚಾರ ಹೆಚ್ಚಾಗಿದೆ. ನಮ್ಮ ಅವಧಿಯಲ್ಲಿ ಕ್ರೈಂ ರೇಟ್ ಕಡಿಮೆಯಾಗಿದೆ. ಕಾಂಗ್ರೆಸ್ ಎಂದಿಗೂ ಪಿಎಫ್ಐ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿಲ್ಲ. ಬಿಜೆಪಿ ಆದರೆ ಶೋಭಾ ಕರಂದ್ಲಾಜೆ ಅವರ ಊರಾದ ಬೆಳ್ತಂಗಡಿಯ ಸವಣೂರು ಗ್ರಾಮ ಪಂಚಾಯತ್ನಲ್ಲಿ ಕಾಂಗ್ರೆಸನ್ನು ಸೋಲಿಸುವ ಸಲುವಾಗಿ ಪಿಎಫ್ಐನೊಂದಿಗೆ ಹೊಂದಾಣಿಕೆ ಮಾಡಿಕೊಂಡಿದೆ’ ಎಂದು ಗಂಭೀರ ಆರೋಪ ಮಾಡಿದರು.