12ರಿಂದ ರಾಜ್ಯಾದ್ಯಂತ ವಿವೇಕ್‌ ಬ್ಯಾಂಡ್‌ ಅಭಿಯಾನ

Team Udayavani, Jan 6, 2018, 6:25 AM IST

VIVEK.jpg

ಬೆಂಗಳೂರು: ಸ್ವಾಮಿ ವಿವೇಕಾನಂದರ 155ನೇ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ರಾಜ್ಯದಾದ್ಯಂತ ಜನವರಿ 12 ರಿಂದ 26ರವರೆಗೆ “ವಿವೇಕ್‌ ಬ್ಯಾಂಡ್‌ ಅಭಿಯಾನ’ ಆಯೋಜಿಸಲಾಗಿದೆ ಎಂದು ಸಮರ್ಥ ಭಾರತ ಟ್ರಸ್ಟ್‌ನ ಟ್ರಸ್ಟಿ ರಾಜೇಶ್‌ ಪದ್ಮಾರ್‌ ತಿಳಿಸಿದರು.

ರಾಷ್ಟ್ರೋತ್ಥಾನ ಪರಿಷತ್‌ನಲ್ಲಿ ಶ್ರುಕವಾರ ಸುದ್ದಿಗೋಷ್ಠಿ ನಡೆಸಿದ ಅವರು, ಯುವಕರಲ್ಲಿ ಸಾಮಾಜಿಕ ಸೇವಾ ಮನೋಭಾವ ಹೆಚ್ಚಿಸಲು ಅಭಿಯಾನ ಆರಂಭಿಸಲಾಗಿದೆ. ಅಭಿಯಾನದಲ್ಲಿ ವಿವೇಕಾನಂದರ “ಉತ್ತಮನಾಗು-ಉಪಕಾರಿಯಾಗು’ ಎಂಬ ಸಂದೇಶ ಸಾರುವ ಬ್ಯಾಂಡ್‌ಗಳನ್ನು ಬಲಗೈಗೆ ಧರಿಸಿ, ಸಂದೇಶದಂತೆ ತಮ್ಮ ಜೀವನ ರೂಪಿಸಿಕೊಳ್ಳಲು ಮುಂದಾಗಲಿದ್ದಾರೆ ಎಂದರು.

2015ರಿಂದ ಆರಂಭವಾದ ಅಭಿಯಾನದಲ್ಲಿ ಪಾಲ್ಗೊಳ್ಳುವ ಯುವಕರ ಸಂಖ್ಯೆ ಪ್ರತಿವರ್ಷ ಹೆಚ್ಚಾಗುತ್ತಿದ್ದು, ಕಳೆದ ವರ್ಷ ನಡೆಸಿದ ಅಭಿಯಾನದಲ್ಲಿ 6 ಲಕ್ಷ ಯುವಕರು ಭಾಗವಹಿಸಿದ್ದರು. ಪ್ರಸಕ್ತ ಸಾಲಿನಲ್ಲಿ ರಾಜ್ಯದಾದ್ಯಂತ 6 ಸಾವಿರಕ್ಕೂ ಹೆಚ್ಚು ಶಾಲಾ-ಕಾಲೇಜುಗಳಲ್ಲಿ ಜಯಂತಿ ನಡೆಯುತ್ತಿದ್ದು, 12 ಲಕ್ಷ ಯುವಕರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.

“ಉತ್ತಮನಾಗು’ ಎಂಬ ಸಂದೇಶದಂತೆ ಕಳೆದ ವರ್ಷ ಅಭಿಯಾನದಲ್ಲಿ ಭಾಗವಹಿಸಿದ್ದ ಯುವಕರು, ಕಾಲೇಜಿಗೆ ಸೂಕ್ತ ಸಮಯಕ್ಕೆ ಹಾಜರಾಗುವುದು, ನಕಲು ಮಾಡದಿರುವುದು, ಗುರು-ಹಿರಿಯರು ಹಾಗೂ ಹೆಣ್ಣು ಮಕ್ಕಳೊಂದಿಗೆ ಸಭ್ಯವಾಗಿ ವರ್ತಿಸುವುದು, ಧೂಮಪಾನ, ಮದ್ಯಪಾನದಂತಹ ವ್ಯಸನಗಳಿಂದ ಹೊರಗೆ ಬಂದಿರುವುದು ಕಂಡುಬಂದಿದೆ. ಕಳೆದ ವರ್ಷ ಅಭಿಯಾನದಲ್ಲಿ ಪಾಲ್ಗೊಂಡಿದ್ದ 6 ಲಕ್ಷ ಯುವಕರ ಪೈಕಿ 1.93 ಲಕ್ಷ ಮಂದಿ ಸಂದೇಶದಿಂದ ಬದಲಾಗಿರುವುದಾಗಿ ಸೆಲ್ಫಿ, ವಾಟ್ಸ್‌ಆ್ಯಪ್‌ ಮೂಲಕ ಟ್ರಸ್ಟ್‌ಗೆ ಮಾಹಿತಿ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.

ಅದೇ ರೀತಿ “ಉಪಕಾರಿಯಾಗು’ ಸಂದೇಶದಂತೆ ಈಗಾಗಲೇ ಲಕ್ಷಾಂತರ ವಿದ್ಯಾರ್ಥಿಗಳು ಗಿಡಗಳನ್ನು ನೆಡುವುದು ಸೇರಿ ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಟ್ರಸ್ಟ್‌ನೊಂದಿಗೆ ಕೈಜೋಡಿಸಿದ್ದು, ಕಳೆದ 7 ತಿಂಗಳಲ್ಲಿ ಟ್ರಸ್ಟ್‌ನಿಂದ 14 ಲಕ್ಷ ಗಿಡಗಳನ್ನು ನೆಟ್ಟು ಬೆಳೆಸಲಾಗುತ್ತಿದೆ. ಜತೆಗೆ ಮೂರು ವರ್ಷಗಳಲ್ಲಿ ರಾಜ್ಯದಾದ್ಯಂತ ಒಂದು ಕೋಟಿ ಗಿಡ ನೆಡಲಾಗುವುದು ಎಂದು ರಾಜೇಶ್‌ ಪದ್ಮಾರ್‌ ತಿಳಿಸಿದರು.

ಪ್ಲಾಸ್ಟಿಕ್‌ ನಿಷೇಧಕ್ಕೆ ಆದ್ಯತೆ: ಅಭಿಯಾನದ 14 ದಿನಗಳಲ್ಲಿ ಖಾದಿ ಧರಿಸುವ ಮೂಲಕ ಖಾದಿ ಉದ್ಯಮಕ್ಕೆ ಉತ್ತೇಜನ ನೀಡುವುದು, ಈಗಾಗಲೇ ನೆಟ್ಟಿರುವ ಗಿಡಗಳನ್ನು ಪೋಷಿಸುವುದು ಹಾಗೂ ಪ್ಲಾಸ್ಟಿಕ್‌ ಬಳಕೆಯನ್ನು ಕಡಿಮೆ ಮಾಡುವ ಕುರಿತು ಯುವಕರಲ್ಲಿ ಜಾಗೃತಿ ಮೂಡಿಸಲಾಗುವುದು. ಅಭಿಯಾನಕ್ಕೆ ಕೇಂದ್ರ ಸಚಿವೆ ಸ್ಮತಿ ಇರಾನಿ, ಧರ್ಮಸ್ಥಳ ದೇವಸ್ಥಾನ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ವಿಜ್ಞಾನಿ ಡಾ.ಅಣ್ಣಾದೊರೈ, ಭಾರತೀಯ ಮಹಿಳಾ ಕಬಡ್ಡಿ ತಂದ ನಾಯಕ ಮಮತಾ ಪೂಜಾರಿ, ಕ್ರಿಕೆಟರ್‌ ಮಿಥುನ್‌ ಅಭಿಮನ್ಯು, ನಟಿ ರೂಪಿಕಾ ಸೇರಿ ಹಲವು ದನಿಗೂಡಿಸಿದ್ದಾರೆ ಎಂದರು.

ಟಾಪ್ ನ್ಯೂಸ್

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.