ಕಾಲಾವಕಾಶ ಕೇಳಿದ್ದು ಸರಿಯಲ್ಲ
Team Udayavani, Jan 8, 2018, 6:35 AM IST
ಧಾರವಾಡ: ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮ ಹಾಗೂ ಅಲ್ಪಸಂಖ್ಯಾತ ಮಾನ್ಯತೆಗೆ ಸಂಬಂಧಿ ಸಿ ದಂತೆ ಸರ್ಕಾರ ರಚಿಸಿರುವ ತಜ್ಞರ ಸಮಿತಿ ವರದಿ ನೀಡಲು 6 ತಿಂಗಳು ಕಾಲಾವಕಾಶ ಕೇಳುವುದಕ್ಕೆ ಅಸಮಾಧಾನವಿದೆ ಎಂದು ಸಚಿವ ವಿನಯ್ ಕುಲಕರ್ಣಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಸಮಿತಿ ಒಂದು ತಿಂಗಳಲ್ಲಿ ವರದಿ ಸಲ್ಲಿಸಬೇಕಿತ್ತು. ಆದರೆ ಇದೀಗ ಆರು ತಿಂಗಳು ಕಾಲಾವಕಾಶ ಕೇಳಲು ಮುಂದಾಗಿರುವು ದು ಅಸಮಾಧಾನ ತಂದಿದೆ. ಈ ಕುರಿತು ಸೋಮವಾರ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮಾತನಾಡುತ್ತೇವೆ. ಈ ಹೋರಾಟ ಕೇವಲ ಚುನಾವಣೆಗೆ ಎಂದು ಹೇಳಿರುವ ಸಚಿವ ಎಸ್. ಎಸ್. ಮಲ್ಲಿಕಾರ್ಜುನ ತಮ್ಮ ಪರವಾಗಿಲ್ಲ. ಹೀಗಾಗಿ ಏನೇನೋ ಹೇಳಿಕೆ ನೀಡುತ್ತಿದ್ದಾರೆ ಎಂದರು.
ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ ವರದಿ ನೀಡಲು ತಜ್ಞರ ಸಮಿತಿ ಆರು ತಿಂಗಳ ಕಾಲಾವಕಾಶ ಕೋರಿರುವುದು ನನ್ನ ಗಮನಕ್ಕೆ ಬಂದಿಲ್ಲ. ಬೆಂಗಳೂರಿಗೆ ತೆರಳಿದ ಬಳಿಕ ತಜ್ಞರ ಸಮಿತಿ ಪ್ರಮುಖರೊಂದಿಗೆ ಈ
ಕುರಿತು ಚರ್ಚಿಸುತ್ತೇನೆ.
– ಸಿದ್ದರಾಮಯ್ಯ, ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ