ಸಾಮರ್ಥ್ಯ ವೃದ್ಧಿಸಿಕೊಳ್ಳಲು ಮುಂದಾದ ಬಿಜೆಪಿ
Team Udayavani, Jan 11, 2018, 7:05 AM IST
ಹೊಳಲ್ಕೆರೆ: ಪರಿವರ್ತನಾ ಯಾತ್ರೆ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕಿಳಿದಿರುವ ಪ್ರತಿಪಕ್ಷ ಬಿಜೆಪಿ
ಇದೀಗ ಪಕ್ಷ ಗೆಲ್ಲಬಹುದಾದ ಕ್ಷೇತ್ರಗಳಲ್ಲಿ ತನ್ನ ಸಾಮರ್ಥ್ಯವನ್ನು ಇನ್ನಷ್ಟು ವೃದ್ಧಿಸಿಕೊಳ್ಳಲು ಮುಂದಾಗಿದೆ.
ಈ ನಿಟ್ಟಿನಲ್ಲಿ 2008ರಲ್ಲಿ ಸಾಕಷ್ಟು ಸ್ಥಾನಗಳನ್ನು ಗಳಿಸಿ 2013ರಲ್ಲಿ ಸೋಲು ಅನುಭವಿಸಿದ್ದ ಚಿತ್ರದುರ್ಗ ಜಿಲ್ಲೆಯಲ್ಲಿ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ನೆರವಿನೊಂದಿಗೆ ಮತ್ತೆ 2008ರಲ್ಲಿ ಇದ್ದ ಪರಿಸ್ಥಿತಿಯನ್ನು ಸೃಷ್ಟಿಸುವ ಪ್ರಯತ್ನ ಮಾಡಿದೆ.
ಅಲ್ಲದೆ, ಜ. 28 ರಂದು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಅವರ ಸಮ್ಮುಖದಲ್ಲಿ ಪರಿವರ್ತನಾ ಯಾತ್ರೆಗೆ ತೆರೆ
ಎಳೆಯುವುದಕ್ಕೂ ಮುನ್ನ ಇನ್ನೂ ಒಂದೆರಡು ಕಡೆ ಅಮಿತ್ ಶಾ ಅವರನ್ನು ಕರೆಸಿ ಸಮಾವೇಶ ನಡೆಸಲು ಮುಂದಾಗಿದೆ.
ಪರಿವರ್ತನಾ ಯಾತ್ರೆ ವೇಳೆ ವ್ಯಕ್ತವಾಗಿರುವ ಜನ ಬೆಂಬಲವನ್ನು ಗಮನಿಸಿ ಅಮಿತ್ ಶಾ ಕೂಡ ಖುಷಿಯಾಗಿದ್ದು, ಸಾಧ್ಯವಾದರೆ ಇನ್ನೂ ಒಂದೆರಡು ಸಮಾವೇಶಗಳಲ್ಲಿ ಭಾಗವಹಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹೊಳಲ್ಕೆರೆಯಲ್ಲಿ ನಡೆದ ಪರಿವರ್ತನಾ ಯಾತ್ರೆ ಸಮಾವೇಶದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಈ ಕುರಿತಂತೆ ಅಮಿತ್ ಶಾ ಜತೆ ಮಾತನಾಡಿದ್ದಾರೆ. ಇನ್ನೂ ಒಂದೆರಡು ಕಡೆ ಸಮಾವೇಶದಲ್ಲಿ ಭಾಗವಹಿಸಿ ಶಕ್ತಿ ತುಂಬುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?