ಸಾರಿಗೆ ಸಂಸ್ಥೆಯಿಂದ ಸಂಕ್ರಾಂತಿಗೆ ಹೆಚ್ಚುವರಿ ಬಸ್‌


Team Udayavani, Jan 12, 2018, 6:00 AM IST

KSRTC-BUS-201811.jpg

ಬೆಂಗಳೂರು: ಮಕರ ಸಂಕ್ರಾಂತಿ ಅಂಗವಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ, ಜ.12 ಮತ್ತು 13ರಂದು ಸುಮಾರು 200ರಿಂದ 300 ವಿಶೇಷ ಬಸ್‌ಗಳ ಸೇವೆ ಕಲ್ಪಿಸಿದೆ.

ಹಬ್ಬಕ್ಕೆ ನಗರದಿಂದ ರಾಜ್ಯದ ವಿವಿಧೆಡೆ ಮತ್ತು ಅಂತರರಾಜ್ಯಗಳಿಗೆ ತೆರಳುವವರಿಗಾಗಿ ಈ ಹೆಚ್ಚುವರಿ ಸೇವೆಗಳನ್ನು ಕಲ್ಪಿಸಲಾಗಿದ್ದು, ಸಾಮಾನ್ಯ, ವೇಗದೂತ, ಕರ್ನಾಟಕ ವೈಭವ, ರಾಜಹಂಸ, ಐರಾವತ, ಐರಾವತ ಕ್ಲಬ್‌ ಕ್ಲಾಸ್‌ ಹಾಗೂ ಡೈಮಂಡ್‌ ಕ್ಲಾಸ್‌ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ. ಈ ಬಸ್‌ಗಳು ಕೆಂಪೇಗೌಡ ಬಸ್‌ ನಿಲ್ದಾಣ, 
ಮೈಸೂರು ರಸ್ತೆ ಬಸ್‌ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಟಿಟಿಎಂಸಿ ಬಸ್‌ ನಿಲ್ದಾಣದಿಂದ ಆಚರಣೆ 
ಮಾಡಲಿವೆ. ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಈ ಹೆಚ್ಚುವರಿ ಬಸ್‌ಗಳ ಸೇವೆ ಇರಲಿದೆ.

ಮೆಜೆಸ್ಟಿಕ್‌, ಮೈಸೂರು ರಸ್ತೆ ಬಸ್‌ ನಿಲ್ದಾಣ, ಶಾಂತಿನಗರ, ವಿಜಯನಗರ, ಜೆ.ಪಿ. ನಗರ, ಜಯನಗರ 4ನೇ ಬ್ಲಾಕ್‌,
ಜಾಲಹಳ್ಳಿ ಕ್ರಾಸ್‌, ನವರಂಗ್‌ (ರಾಜಾಜಿನಗರ), ಮಲ್ಲೇಶ್ವರ 18ನೇ ಅಡ್ಡರಸ್ತೆ, ಕೆಂಗೇರಿ ಉಪನಗರ ನಗರದ ಮತ್ತಿತರ ಸ್ಥಳಗಳಿಂದ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ.

ನಗರದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು,
ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ಹೈದರಾಬಾದ್‌, ಚೆನ್ನೈ, ಊಟಿ, ಕೊಡೈಕೆನಾಲ್‌, ಸೇಲಂ,ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ,ಮುಂಬೈ, ಎರ್ನಾಕುಲಂ, ಪಾಲ್ಗಾಟ್‌, ತಿರುವನಂತಪುರ ಸೇರಿದಂತೆ ಮತ್ತಿತರ ನೆರೆ ರಾಜ್ಯಗಳ ಸ್ಥಳಗಳಿಗೆ ವಿಶೇಷ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ. ಇ-ಟಿಕೆಟ್‌ ಬುಕಿಂಗ್‌ಗೆ www.ksrtc.in ಸಂಪರ್ಕಿಸಬಹುದು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದರೆ ಶೇ.5ರಷ್ಟು ಮತ್ತು ಹೋಗುವ-ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದರೆ, ಬರುವ ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯ್ತಿ ನೀಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.