ಪುಂಡಾಟ ಮಾಡಿದ್ರೆ ಗುಂಡೇಟು
Team Udayavani, Jan 21, 2018, 6:00 AM IST
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಇತ್ತೀಚೆಗೆ ಪೊಲೀಸರ ಮೇಲೆಯೇ ಹಲ್ಲೆ ಪ್ರಕರಣಗಳು ಹಾಗೂ ರಾತ್ರಿ ವೇಳೆ ಪುಂಡ ಪೋಕರಿಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಗುಂಡು ಹಾರಿಸಲು ನಗರ ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.
ಇತ್ತೀಚೆಗೆ ಜೀವನ್ಬಿಮಾ ನಗರದಲ್ಲಿ ಮಹಿಳಾ ಪಿಎಸ್ಐ ಮೇಲೆ ಪುಂಡರ ಹಲ್ಲೆ, ಜೆಜೆ ನಗರದಲ್ಲಿ ಪೇದೆಗಳ ಮೇಲೆ ಹಲ್ಲೆ ನಡೆಸಿ ಬಂದೂಕು ಕಿತ್ತೂಯ್ದ ಘಟನೆ, ಕೆಜೆ ಹಳ್ಳಿಯಲ್ಲಿ ಕಾಂಗೋ ಪ್ರಜೆಯಿಂದ ಪೊಲೀಸ್ ಪೇದೆ ಮೇಲೆ ಹಲ್ಲೆ, ಹೊಸ ವರ್ಷಾಚರಣೆ ವೇಳೆ ಕಮ್ಮನಹಳ್ಳಿಯಲ್ಲಿ ನಡೆದ ಘಟನೆ ಹಿನ್ನೆಲೆಯಲ್ಲಿ ಇಂತಹ ಕ್ರಮಕ್ಕೆ ನಗರ ಪೊಲೀಸ್ ಇಲಾಖೆ ಮುಂದಾಗಿದೆ.
ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ಶುಕ್ರವಾರ ಸಭೆ ನಡೆಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ನಗರ ಪೊಲೀಸ್ ಆಯುಕ್ತ ಟಿ.ಸುನಿಲ್ಕುಮಾರ್, ಈ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಕರ್ತವ್ಯದ ವೇಳೆ ಅಡ್ಡಿಪಡಿಸುವುದು, ಹಲ್ಲೆ ನಡೆಸುವುದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವುದು ಸಹಿಸಿಕೊಳ್ಳುವುದು ಸಾಧ್ಯವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ