ಕಾಂಗ್ರೆಸ್ ಸಿಎಂ ಅಭ್ಯರ್ಥಿ ಅನಿಶ್ಚಿತ: ಪಾಟೀಲ್
Team Udayavani, Jan 22, 2018, 9:48 AM IST
ಬಾಗಲಕೋಟೆ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರ ನಡೆಸಲು ಬೇಕಾಗುವ 113 ಮ್ಯಾಜಿಕ್ ಅಂಕಿ ಬರುವವರೆಗೂ ಕಾಂಗ್ರೆಸ್ನ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದು ಅನಿಶ್ಚಿತ. ಈ ಮ್ಯಾಜಿಕ್ ಅಂಕಿ ತಲುಪಿದ ಬಳಿಕ ಹೈಕಮಾಂಡ್ ಸಿಎಂ
ಅಭ್ಯರ್ಥಿ ಘೋಷಣೆ ಮಾಡಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಎಂಎಲ್ಸಿ ಎಸ್.ಆರ್. ಪಾಟೀಲ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆಯಲ್ಲಿ 113 ಅಂಕಿ ತಲುಪಿ, ಪಕ್ಷದ ಶಾಸಕಾಂಗದ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳುವ ಜತೆಗೆ ಹೈಕಮಾಂಡ್ ಅನುಮೋದನೆ ಪಡೆದ ಬಳಿಕ ಮುಂದಿನ ಸಿಎಂ ಅಭ್ಯರ್ಥಿ ಯಾರು ಎಂಬುದು
ಘೋಷಣೆಯಾಗಲಿದೆ. ಅಲ್ಲಿಯವರೆಗೂ ಮುಂದಿನ ಸಿಎಂ ಅಭ್ಯರ್ಥಿ ಅನಿಶ್ಚಿತವಾಗಿದೆ ಎಂದರು. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಫೆ.22ರಿಂದ 24ರವರೆಗೆ ಮುಂಬೈ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ನಡೆಸಲಿದ್ದಾರೆ. ಸಿದ್ದರಾಮಯ್ಯ ಅವರು ಏಕಪಕ್ಷೀಯ ನಿರ್ಧಾರ ಎಂದೂ ತೆಗೆದುಕೊಂಡಿಲ್ಲ. ಅವರ ವಿರುದ್ಧ ಯಾರೂ ಪಕ್ಷದಲ್ಲಿ ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK