ನಾಳೆ ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ ಮಹಾಕಾವ್ಯ ಬಿಡುಗಡೆ


Team Udayavani, Jan 23, 2018, 6:15 AM IST

180122kpn70.jpg

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಸಂಸದ ಹಾಗೂ ಸರಸ್ವತಿ ಸಮ್ಮಾನ್‌ ಪ್ರಶಸ್ತಿ ಪುರಸ್ಕೃತ ಡಾ.ಎಂ.ವೀರಪ್ಪ ಮೊಯ್ಲಿಯವರು ರಚಿಸಿರುವ “ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ’ ಮಹಾಕಾವ್ಯವು ಬುಧವಾರ (ಜ.24) ಬೆಳಗ್ಗೆ 10.30ಕ್ಕೆ ಹಾಸನ ಜಿಲ್ಲೆಯ ಶ್ರವಣ ಬೆಳಗೊಳದ ಗೊಮ್ಮಟನಗರದಲ್ಲಿ ಲೋಕಾರ್ಪಣೆಯಾಗಲಿದೆ.

ಶ್ರೀ ಕ್ಷೇತ್ರ ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳು ಸಾನ್ನಿಧ್ಯ ವಹಿಸಿ, ನಾಡೋಜ ಡಾ|ಹಂಪ
ನಾಗರಾಜಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಮಹಾಕಾವ್ಯವನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಮಾಹೇಶ್ವರಿ ಪ್ರಕಾಶನದ ಕೆ.ಆರ್‌.ಕಮಲೇಶ್‌ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಡಾ.ಎಂ.ವೀರಪ್ಪ ಮೊಯ್ಲಿಯವರು ಉಪಸ್ಥಿತರಿದ್ದು, ರೇಷ್ಮೆ ಹಾಗೂ ಪಶುಸಂಗೋಪನಾ ಸಚಿವ ಎ.ಮಂಜು, ಶಾಸಕ ಸಿ.ಎನ್‌. ಬಾಲಕೃಷ್ಣ ಹಾಗೂ ಮೇಲ್ಮನೆ ಸದಸ್ಯ ಎಂ.ಎ.ಗೋಪಾಲಸ್ವಾಮಿ ಯವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪ್ರಾಧ್ಯಾಪಕರಾದ ಡಾ. ಜಯಕುಮಾರ ಉಪಾಧ್ಯೆ ಅಭಿನಂದನಾ ನುಡಿಗಳನ್ನಾಡಲಿದ್ದಾರೆ.

ಈ ಮಹಾಕಾವ್ಯದ ಆಯ್ದ ಭಾಗಗಳನ್ನು ಎಂ.ಆರ್‌. ಸತ್ಯನಾರಾಯಣ ಅವರು ವಾಚನ ಮಾಡಲಿದ್ದು, ಡಾ.ಕಬ್ಬಿನಾಲೆ
ವಸಂತ ಭಾರದ್ವಾಜ್‌ ವ್ಯಾಖ್ಯಾನ ಮಾಡಲಿದ್ದಾರೆ. ಮಹಾಕಾವ್ಯದ ನೂತನ ಪಾತ್ರ ಮತ್ತು ಸನ್ನಿವೇಶಗಳನ್ನು ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್‌ ಪರಿಚಯಿಸಲಿದ್ದಾರೆ. ಸಂವಾದದಲ್ಲಿ ಸಾಹಿತಿಗಳಾದ ಡಾ.ಬರಗೂರು ರಾಮಚಂದ್ರಪ್ಪ, ಕುಂ.ವೀರಭದ್ರಪ್ಪ, ಪ್ರೊ.ಎಸ್‌.ಪಿ.ಪದ್ಮಪ್ರಸಾದ್‌, ಪ್ರೊ.ಸಿ.ನಾಗಣ್ಣ, ಪ್ರೊ. ಪ್ರಶಾಂತ್‌ ನಾಯಕ್‌ ಮೊದಲಾದವರು ಭಾಗವಹಿಸಲಿದ್ದಾರೆ.

ಮೂಡಬಿದಿರೆಯ ಆಳ್ವಾಸ್‌ ಕಾಲೇಜಿನ ವಿದ್ಯಾರ್ಥಿಗಳು ಆ ದಿನ ಸಂಜೆ ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ ಮಹಾಕಾವ್ಯದ ಆಯ್ದಭಾಗವನ್ನು ಸಮೂಹ ಗಾಯನ ದಲ್ಲಿ ಪ್ರಸ್ತುತ ಪಡಿಸಲಿದ್ದಾರೆ ಎಂದು ಹೇಳಿದರು.

ಮಹಾಕಾವ್ಯದ ಬಗ್ಗೆ ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯದಲ್ಲಿ ಐದು ಸಂಧಿಗಳಿವೆ. ಚಂದ್ರಗುಪ್ತ ಮತ್ತು ಭದ್ರಬಾಹು
ಶ್ರವಣಬೆಳಗೊಳದಲ್ಲಿ ಸಲ್ಲೇಖನ ವ್ರತ ಕೈಗೊಂಡ ಒಂದು ಸಾವಿರ ವರ್ಷಗಳ ನಂತರ ಬಾಹುಬಲಿಯು ಶಿಲಾರೂಪದಲ್ಲಿ ಅವಿರ್ಭವಿಸಿರುವ ರೋಚಕ ಘಟನೆ ಕಾವ್ಯದ ವಸ್ತುವಾಗಿದೆ. 21ನೇ ಶತಮಾನದ ತಲ್ಲಣ, ಭಯೋತ್ಪಾದನೆ, ಹಿಂಸೆ,
ಶೀತಲಯುದಟಛಿ, ಶೋಷಣೆ,ದುರಾಕ್ರಮಣ, ದುರಾಸೆಗಳೆಲ್ಲಾ ಸಾತ್ವಿಕ ಆಕ್ರೋಶ ಕಾವ್ಯರೂಪದಲ್ಲಿ ಹೊರಬಂದಿದೆ. ದೆಹಲಿಯ ಲಾಲ್‌ ಬಹದ್ದೂರ್‌ ಸಂಸ್ಕೃತ ವಿದ್ಯಾಪೀಠದ ಪ್ರಾಕೃತ ವಿಭಾಗದ ಮುಖ್ಯಸ್ಥರಾದ ಡಾ.ಜಯಕುಮರ್‌ ಉಪಾಧ್ಯೆ ಮುನ್ನುಡಿ ಬರೆದಿದ್ದಾರೆ. ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್‌ ಅವರು ಕಾವ್ಯಾವಲೋಕನ ಮಾಡಿದ್ದಾರೆ.

ಟಾಪ್ ನ್ಯೂಸ್

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.