ಎಲ್ಲ ವಿವಿಗಳು ಒಂದೇ ಕಾಯ್ದೆಯಡಿ ಬರಲಿ

Team Udayavani, Jan 24, 2018, 9:24 AM IST

24-5.jpg

ಬೆಂಗಳೂರು: ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳನ್ನು ಒಂದೇ ಕಾಯ್ದೆಯಡಿ ತರುವ ನಿಟ್ಟಿನಲ್ಲಿ ಸೂಕ್ತ ನಿಯಮ ರಚಿಸಬೇಕೆಂದು ಶಿಕ್ಷಣ ತಜ್ಞರು, ಮೇಲ್ಮನೆ ಸದಸ್ಯರು ಹಾಗೂ ವಿಶ್ರಾಂತ ಕುಲಪತಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಶಿಕ್ಷಕರ ಸದನಲ್ಲಿ ಆಯೋಜಿಸಿದ್ದ ಕರ್ನಾಟಕ ವಿಶ್ವವಿದ್ಯಾಲಯ ಅಧಿನಿಯಮಗಳು -2017 ಒಂದು ಅವಲೋಕನ ಎಂಬ ದುಂಡು ಮೇಜಿನ ಸಭೆಯಲ್ಲಿ ಶಿಕ್ಷಣ ತಜ್ಞರು ಅಭಿಪ್ರಾಯ ಮಂಡಿಸಿ, ವಿಶ್ವವಿದ್ಯಾಲಯಕ್ಕೆ ಕುಲಪತಿಗಳ ನೇಮಕ ವಿಚಾರವಾಗಿ ಸರ್ಕಾರದ ಹಸ್ತಕ್ಷೇಪ ಮಾಡಬಾರದು. ಐಎಸ್‌ಎಸ್‌ ಹಾಗೂ ಕೆಎಎಸ್‌ ಅಧಿಕಾರಿಗಳನ್ನು ಕುಲಸಚಿವರನ್ನಾಗಿ ನೇಮಿಸುವ ಬದಲು,
ಹಿರಿಯ ಪ್ರಾಧ್ಯಾಪಕರನ್ನೇ ಈ ಹುದ್ದೆಗೆ ನೇಮಿಸಬೇಕು ಎಂಬ ಸಲಹೆ ನೀಡಿದರು.

ಕೇಂದ್ರೀಕೃತ ನೇಮಕಾತಿ ಪ್ರಾಧಿಕಾರ ಕೂಡ ವಿಶ್ವವಿದ್ಯಾಲಯಗಳ ಸ್ವಾಯುತ್ತತೆಯನ್ನು ಕಡಿತಗೊಳಿಸುವ ಉದ್ದೇಶ ಹೊಂದಿದ್ದು, ಅದನ್ನು ಬದಲಿಸಬೇಕು. ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ಸರ್ಕಾರ ನೇರ ಹಸ್ತಕ್ಷೇಪ ಮಾಡಿ ಆರ್ಥಿಕ ಸ್ವಾಯತ್ತತೆಯನ್ನು ಕಡಿತಗೊಳಿಸುವ ಹುನ್ನಾರ ಹೊಸ ಕಾಯ್ದೆಯಲ್ಲಿದೆ ಎಂದು ವಿಟಿಯು ನಿವೃತ್ತ ಪ್ರಾಧ್ಯಾಪಕ ಡಾ.ಬಲವೀರ್‌ ರೆಡ್ಡಿ ಹೇಳಿದರು.

 ಮೇಲ್ಮನೆ ಸದಸ್ಯ ಪುಟ್ಟಣ್ಣ ಮಾತನಾಡಿ, ಕುಲಪತಿಗಳ ನೇಮಕಾತಿ ಹಲವು ರೀತಿಯ ಅವ್ಯವಹಾರಕ್ಕೆ ಕಾರಣವಾಗುತ್ತಿದ್ದು, ನೇಮಕಾತಿಯನ್ನು ಪಾರದರ್ಶಕವಾಗಿ ಮಾಡುವಂತಹ ಕಾಯ್ದೆ ತರಬೇಕು ಎಂದರು. ಮೇಲ್ಮನೆ ಮಾಜಿ ಸದಸ್ಯ ಪ್ರೊ.ಪಿ.ವಿ. ಕೃಷ್ಣಭಟ್ಟ, ಶಿಕ್ಷಣ ತಜ್ಞ ಡಾ. ಎಂ.ಕೆ.ಶ್ರೀಧರ್‌, ಎಬಿವಿಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಸ್ವಾಮಿ ಮರುಳಾಪುರ, ಡಾ.ರಾಮಚಂದ್ರಶೆಟ್ಟಿ, ಯುವಿಸಿಇ ಪ್ರಾಂಶುಪಾಲ ಡಾ. ಕೆ.ಆರ್‌.ವೇಣುಗೋಪಾಲ್‌, ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿವಿ ಹಂಗಾಮಿ ಕುಲಪತಿ ಡಾ.ಎಂ.ಕೆ.ರಮೇಶ್‌, ಶಿಕ್ಷಣ ಕ್ಷೇತ್ರದ ಪ್ರಮುಖರಾದ ಶ್ರೀನಿವಾಸಯ್ಯ, ಕೃಷ್ಣ ವೆಂಕಟೇಶ್‌, ಡಾ.ರಾಮಕೃಷ್ಣ, ಡಾ. ಜಯಕೃಷ, ವಸಂತ
ಕುಮಾರ್‌ ಮೊದಲಾದವರು ಭಾಗವಹಿಸಿದ್ದರು. 

ಅಧಿನಿಯಮ ರೂಪಿಸಿ
ಕರ್ನಾಟಕ ವಿಶ್ವವಿದ್ಯಾಲಯ ಅಧಿನಿಯಮ-2017ರ ಜಾರಿಗೂ ಮೊದಲು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರು ಮತ್ತು ವಿಶ್ವವಿದ್ಯಾಲ ಯಗಳ ನೌಕರರೊಂದಿಗೆ ಚರ್ಚಿಸಬೇಕು. ಸಂಬಂಧಪಟ್ಟ ಎಲ್ಲರ ಅಭಿಪ್ರಾಯಗಳನ್ನು ಕ್ರೋಢೀಕರಿಸಿ, ಉನ್ನತ ಶಿಕ್ಷಣದ ಶ್ರೇಯಾಭಿವೃದ್ಧಿಗೆ ಪೂರಕವಾಗುವಂತ ಅಧಿನಿಯಮ ರೂಪಿಸಬೇಕು ಎಂಬ ಒತ್ತಾಯವನ್ನು ಸರ್ಕಾರಕ್ಕೆ ದುಂಡು ಮೇಜಿನ ಸಭೆಯ ಮೂಲಕ ಮಾಡಲಾಗಿದೆ. 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.