CONNECT WITH US  

ಬಿಜೆಪಿ ಶಾಸಕ ಸ್ಥಾನಕ್ಕೆ ಆನಂದಸಿಂಗ್‌ ರಾಜೀನಾಮೆ

ರಾಣಿಬೆನ್ನೂರ: ಬಳ್ಳಾರಿ ಜಿಲ್ಲೆ ವಿಜಯನಗರ ಮತಕ್ಷೇತ್ರದ ಬಿಜೆಪಿ ಶಾಸಕ ಆನಂದಸಿಂಗ್‌ ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ವಿಧಾನಸಭಾಧ್ಯಕ್ಷ ಕೆ.ಬಿ. ಕೋಳಿವಾಡ ಅಂಗೀಕರಿಸಿದ್ದಾರೆ. 

ನಗರದ ಪ್ರವಾಸಿ ಮಂದಿರದಲ್ಲಿ ಕೋಳಿವಾಡ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದರು. ಶಾಸಕರೇ ಸ್ವ ಇಚ್ಛೆಯಿಂದ ಸ್ವತಃ ರಾಜೀನಾಮೆ ಪತ್ರ ಸಲ್ಲಿಸಿರುವುದರಿಂದ ಅದನ್ನು ಅಂಗಿಕರಿಸಿದ್ದೇನೆಂದು ಕೋಳಿವಾಡ ತಿಳಿಸಿದರು. ಈ ವೇಳೆ ಮಾತನಾಡಿದ ಸಿಂಗ್‌, ಪಕ್ಷದೊಳಗಿನ ಆಂತರಿಕ ಕಲಹ ಹಾಗೂ ಮುಖಂಡರ ಮಲತಾಯಿ ಧೋರಣೆಯಿಂದ ಬೇಸತ್ತು ಸ್ವಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಕ್ಷೇತ್ರದ ಮತದಾರರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆಂದು ಹೇಳಿದರು.

Trending videos

Back to Top